
ಬೆಂಗಳೂರು (ಅ.29): ‘ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡದೆ ನೆನೆಗುದಿಗೆ ಬಿದ್ದಿದೆ. ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸದೆ ಜನರನ್ನು ಮೂರ್ಖರನ್ನಾಗಿಸಿದ್ದೀರಿ. ನೀರಿಗಾಗಿ ನಾಡಿನ ಜನ ಇನ್ನೆಷ್ಟು ವರ್ಷ ನಿಮ್ಮ ಬಳಿ ಅಂಗಲಾಚಬೇಕು? ಕನ್ನಡಿಗರ ಬಗ್ಗೆ ನಿಮಗೇಕೆ ಇಷ್ಟು ಸಿಟ್ಟು?’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಿಡಿ ಕಾರಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ‘ಒಂದೂವರೆ ಕೋಟಿ ಜನಸಂಖ್ಯೆ ಹೊಂದಿರುವ ಬೆಂಗಳೂರು ನಗರದ ಅಗತ್ಯಕ್ಕೆ ತಕ್ಕಷ್ಟು ನೀರು ಒದಗಿಸುವುದು ಬಹುದೊಡ್ಡ ಸವಾಲು.
ಈ ಉದ್ದೇಶಕ್ಕಾಗಿಯೇ ಸಿದ್ಧಪಡಿಸಿರುವ ಯೋಜನೆ ಮೇಕೆದಾಟು ಕೇಂದ್ರ ಸರ್ಕಾರದ ಅನುಮತಿ ಸಿಗದೆ ನೆನೆಗುದಿಗೆ ಬಿದ್ದಿದೆ. ಕಾವೇರಿ ನಮ್ಮದು, ಮಳೆಗಾಲದಲ್ಲಿ ಹರಿದು ವ್ಯರ್ಥವಾಗಿ ಸಮುದ್ರ ಸೇರುವ ನಮ್ಮ ಪಾಲಿನ ನೀರನ್ನು ನಾವು ಬಳಕೆ ಮಾಡಿಕೊಳ್ಳಲು ಇನ್ನೆಷ್ಟು ವರ್ಷ ಕಾಯಬೇಕು’ ಎಂದು ಪ್ರಶ್ನಿಸಿದ್ದಾರೆ. ‘ನರೇಂದ್ರ ಮೋದಿ ಅವರೇ, ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ? ಇದು ನನ್ನ ಪ್ರಶ್ನೆ ಮಾತ್ರವಲ್ಲ, ನಾಡಿನ ಆರೂವರೆ ಕೋಟಿ ಸ್ವಾಭಿಮಾನಿ ಕನ್ನಡಿಗರ ಪ್ರಶ್ನೆ. ಇದಕ್ಕಾದರೂ ಉತ್ತರ ಕೊಡಿ’ ಎಂದು ಆಗ್ರಹಿಸಿದ್ದಾರೆ.
ಎಚ್‌ಡಿಕೆ ಮುಂದೆ ಬಿಟ್ಟು ಬಿಜೆಪಿ ನಾಯಕರು ಹೇಡಿಗಳಂತೆ ವರ್ತಿಸುತ್ತಿದ್ದಾರೆ: ಎಂ.ಲಕ್ಷ್ಮಣ್
ಕೃಷ್ಣಾ ಮೇಲ್ದಂಡೆ ರಾಷ್ಟ್ರೀಯ ಯೋಜನೆ ಘೋಷಿಸಿ: 2017ರಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ ಯೋಜನಾ ವೆಚ್ಚ 51,148 ರು. ಕೋಟಿ ಇದ್ದುದ್ದು ಈಗ 78 ಸಾವಿರ ಕೋಟಿಗಿಂತಲೂ ಹೆಚ್ಚಾಗಿದೆ. ರಾಜ್ಯ ಸರ್ಕಾರ ವಾರ್ಷಿಕ ರು. 10ರಿಂದ 15 ಸಾವಿರ ಕೋಟಿ ರು.ಅನುದಾನ ನೀಡಿದರೂ ಯೋಜನೆ ಪೂರ್ಣಗೊಳ್ಳುವ ಹೊತ್ತಿಗೆ ಈಗಿನ ವೆಚ್ಚವೂ ದುಪ್ಪಟ್ಟಾಗಲಿದೆ. ಆದ್ದರಿಂದ ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಿ, ಶೇ.60 ಅನುದಾನವನ್ನು ಒದಗಿಸಬೇಕೆಂದು ಕನ್ನಡಿಗರು ಕೇಂದ್ರವನ್ನು ಒತ್ತಾಯಿಸುತ್ತಲೇ ಇದ್ದಾರೆ ಎಂದಿದ್ದಾರೆ.
ಡಿಕೆಶಿ ಸಿಎಂ ಆಗುವುದರಲ್ಲಿ ಯಾವ ಅನುಮಾನವಿಲ್ಲ: ಶಾಸಕ ಉದಯ್
ಕಳೆದ ನಾಲ್ಕು ವರ್ಷ ರಾಜ್ಯದಲ್ಲಿ ಮತ್ತು ಕೇಂದ್ರದಲ್ಲಿ ನಿಮ್ಮದೇ ಪಕ್ಷದ ಡಬಲ್ ಇಂಜಿನ್ ಸರ್ಕಾರವಿತ್ತು, ಆಗಲೂ ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸದೆ ಜನರನ್ನು ಮೂರ್ಖರನ್ನಾಗಿಸಿದಿರಿ. ಹನಿ ನೀರಿಗಾಗಿ ನಾಡಿನ ರೈತರು ಇನ್ನೆಷ್ಟು ವರ್ಷ ನಿಮ್ಮ ಬಳಿ ಅಂಗಲಾಚಬೇಕು? ಕನ್ನಡಿಗರ ಮೇಲೆ ಏಕೆ ಸೇಡು ತೀರಿಸಿಕೊಳ್ಳುತ್ತಿದ್ದೀರಿ? ಈಗಲಾದರೂ ಕನ್ನಡಿಗರಿಗೆ ನ್ಯಾಯ ಒದಗಿಸಿ ಎಂದು ಮೋದಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.