ಸಿದ್ದರಾಮಯ್ಯಗೆ ಮುಡಾ ಉರುಳು ಬೆನ್ನಲ್ಲೇ ಗೃಹ ಸಚಿವ ಪರಮೇಶ್ವರ್ ಭೇಟಿಯಾದ ಡಿ.ಕೆ. ಶಿವಕುಮಾರ್!

By Sathish Kumar KH  |  First Published Sep 30, 2024, 1:28 PM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಡಾ ಸೈಟ್ ಹಂಚಿಕೆ ಹಗರಣದ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರನ್ನು ಭೇಟಿ ಮಾಡಿ ಗುಪ್ತ ಚರ್ಚೆ ನಡೆಸಿದ್ದಾರೆ.


ಬೆಂಗಳೂರು (ಸೆ.30): ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಸೈಟು ಹಂಚಿಕೆ ಹಗರಣ ಬಿಗಿಯಾದ ಬೆನ್ನಲ್ಲಿಯೇ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ಮನೆಗೆ ಆಗಮಿಸಿ ಗುಪ್ತವಾಗಿ ಚರ್ಚೆ ಮಾಡಿದ್ದಾರೆ. ಇದರ ಬೆನ್ನಲ್ಲಿಯೇ ಡಿ.ಕೆ.ಶಿವಕುಮಾರ್ ಅವರು ಎತ್ತಿನಹೊಳೆ ಯೋಜನೆ ವಿಚಾರವಾಗಿ ಚರ್ಚಿಸಲು ಆಗಮಿಸಿದ್ದರು. ಇದಕ್ಕೆ ಬೇರೆ ಅರ್ಥ ಕಲ್ಪಿಸುವ ಅವಶ್ಯಕತೆ ಇಲ್ಲ ಎಂದು ಗೃಹ ಸಚಿವ ಪರಮೇಶ್ವರ ಹೇಳಿದ್ದಾರೆ.

ಸದಾಶಿವನಗರದ ನಿವಾಸಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭೇಟಿ ನೀಡಿ ಕೆಲಕಾಲ ಚರ್ಚಿಸಿದರು. ಡಿಸಿಎಂ ಭೇಟಿ ಬಳಿಕ ಸುದ್ದಿಗಾರರೊಂದಿಗೆ  ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ ಅವರು, ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಿದ್ದಾರೆ. ನಾವು ಮಾತಾಡಿಕೊಳ್ಳದಿದ್ದರೆ ಇನ್ನ್ಯಾರು ಮಾತಾಡಿಕೊಳ್ಳಬೇಕು? ನಮ್ಮ ಸಮಸ್ಯೆಗಳ ಬಗ್ಗೆ ನಾವೇ ಚರ್ಚೆ ಮಾಡಬೇಕು. ನಾನು‌ ಮತ್ತು ಡಿ.ಕೆ.ಶಿವಕುಮಾರ್ ಅವರು ಹೊಸದಾಗಿ ಭೇಟಿ ಆಗುತ್ತಿದ್ದೇವೆಯೇ? ಎಂದು ಪ್ರಶ್ನಿಸಿದರು. ಡಿಸಿಎಂ ಭೇಟಿಯನ್ನು ಬೇರೆ ರೀತಿಯ ದೃಷ್ಟಿಕೋನದಲ್ಲಿ‌ ನೋಡಬೇಕಿಲ್ಲ.  ನಾವು ಭೇಟಿ‌ ಮಾಡುವುದರನ್ನು ಬೇರೆಬೇರೆ ಅರ್ಥ ಕಲ್ಪಿಸುವ ಅವಶ್ಯಕತೆ ಇಲ್ಲ ಎಂದು ಸ್ಪಷ್ಟಪಡಿಸಿದರು.

Tap to resize

Latest Videos

undefined

ಮುಡಾ ಅಧ್ಯಕ್ಷ ಮರಿಗೌಡರಿಂದ ಕಣ್ಣೀರು: 'ಸಿದ್ದರಾಮಯ್ಯ ನನ್ನ ಮನೆ ದೇವರು, ನನ್ನ ಮೇಲೆ ಆರೋಪ ಯಾಕೆ?'

ಎತ್ತಿನಹೊಳೆ ಯೋಜನೆ ವೇಗವಾಗಿ ಆಗುತ್ತಿಲ್ಲ. ಹಣ ಬಿಡುಗಡೆ ಆಗಬೇಕಿದೆ. ದೊಡ್ಡಬಳ್ಳಾಪುರದಲ್ಲಿ ನೀರು ಸಂಗ್ರಹಕ್ಕೆ ಐದು ಸಾವಿರ ಎಕರೆ ಭೂಮಿ ಪ್ರಸ್ತಾಪ‌ ಮಾಡಲಾಗಿತ್ತು. ಅದರಲ್ಲಿ 2500 ಎಕರೆ ಭೂಮಿ ಕೊರಟಗೆರೆ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ಹಿಂದಿನ ಸರ್ಕಾರ ಇದನ್ನು ಬದಲಾಯಿಸಿ, ನಿಲ್ಲಿಸಿತ್ತು. ಅದು ಆಗಬಾರದು ಎಂಬ ಚರ್ಚೆ ನಡೆಯುತ್ತಿತ್ತು. ಮುಂದಿನ ವರ್ಷಕ್ಕಾದರು ಜಿಲ್ಲೆಗೆ ನೀರು ಬರಬೇಕು. ಈ ಬಗ್ಗೆ ಚರ್ಚಿಸಲು ಭೇಟಿ ಮಾಡುವುದಾಗಿ ಡಿಸಿಎಂ‌ ಅವರಿಗೆ ಹೇಳಿದ್ದೆ. ಡಿಸಿಎಂ ಅವರು ನಾನೇ ಬರುತ್ತೇನೆ, ಮಾತಾಡೋಣ ಎಂದಿದ್ದರು. ಬನ್ನಿ ಎಂದು ಕರೆದಿದ್ದೆ. ನಮ್ಮ‌ ಕೆಲಸ ಕಾರ್ಯಗಳಾಗಬೇಕಾಗುತ್ತದೆ. ಗುಬ್ಬಿಯಿಂದ‌ ಕುಣಿಗಲ್‌ವರೆಗೆ ಎಕ್ಸ್‌ಪ್ರೆಸ್ ಕೆನಲ್ ಮಾಡಲು ಅನುಮತಿ ಸಿಕ್ಕಿದೆ. ಕೆಲಸ‌ ಆರಂಭಿಸುವಾಗ ಜನರು ತಡೆದಿದ್ದಾರೆ. ಈ ಬಗ್ಗೆಯೂ ಚರ್ಚಿಸಲಾಗಿದೆ. ನೀರಾವರಿ ಸಚಿವರಾದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಾಂತ್ರಿಕ ಸಮಿತಿ ಮಾಡಿದ್ದಾರೆ. ಅದರ ವರದಿ ಕೊಟ್ಟಮೇಲೆ ಮುಂದುವರಿಯುತ್ತದೆ ಎಂದರು.

ಯತ್ನಾಳ್ ಹೇಳಿಕೆಯ ಕುರಿತು ಪ್ರತಿಕ್ರಿಯಿಸಿ, ನಾನು ಸಾವಿರ ಕೋಟಿ ರೂಪಾಯಿ ನೋಡಿಲ್ಲ. ಸರ್ಕಾರ ಅಸ್ಥಿರಗೊಳಿಸಲು ಸಾವಿರ ಕೋಟಿ ರೂ. ಎಲ್ಲಿಟ್ಟಿದ್ದಾರೆ ಎಂಬುದನ್ನು ಯತ್ನಾಳ್ ಅವರನ್ನೇ‌ ಕೇಳಬೇಕು. ಸಾವಿರ ಕೋಟಿ ಎಲ್ಲಿಟ್ಟಿದ್ದಾರೆ ಎಂಬುದರ ಬಗ್ಗೆ ತನಿಖೆಯಾಗಬೇಕು. ಸುಮೋಟೋ ದಾಖಲಿಸುವ ಬಗ್ಗೆ ಪರಿಶೀಲಿಸಲಾಗುವುದು. ಸಂದರ್ಭ ಬಂದರೆ ದಾಖಲಿಸಬೇಕಾಗುತ್ತದೆ. ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿ, ಇ.ಡಿ ಅವರಿಗೆ ಮತ್ತೇ ದೂರು ಕೊಡಲಿ. ಅದೆಲ್ಲವನ್ನು ಕಾನೂನು ನೋಡಿಕೊಳ್ಳುತ್ತದೆ. ನಾವು ಪ್ರತಿಕ್ರಿಯಿಸಲು ಆಗುವುದಿಲ್ಲ. ಯಾರಿಗೆ ಯಾರು ದ್ವೇಷ ಮಾಡುತ್ತಾರೋ ಗೊತ್ತಿಲ್ಲ. ದಿನಬೆಳಗಾದರೆ ಇದೇ ಆಗಿದೆ.‌ ಇವರಿಗೆ ಅವರು ಏನೋ ಅಂದರು, ಅವರಿಗೇ ಇವರು ಏನೋ ಅಂದರು ಎಂಬುದಾಗಿದೆ. ಸಾರ್ವಜನಿಕ ಜೀವನ ಇಷ್ಟರ ಮಟ್ಟಿಗೆ ಕಲುಷಿತ ಆದರೆ ಬಹಳ ಕಷ್ಟ ಎಂದು ಬೇಸರ ವ್ಯಕ್ತಪಡಿಸಿದರು.

ಜಿಗಣಿಯಲ್ಲಿ ಬಾಂಗ್ಲಾ‌ ಪ್ರಜೆಗಳ ಬಂಧನ: ನನಗೆ ಬಂದಿರುವ ಮಾಹಿತಿ ಪ್ರಕಾರ ಹತ್ತು ವರ್ಷದಿಂದ ಭಾರತದಲ್ಲಿದ್ದಾರೆ. ನಾಲ್ವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಯಾವ ಉದ್ದೇಶದಿಂದ ಬೆಂಗಳೂರಿಗೆ ಬಂದಿದ್ದರು ಎಂಬುದು ಹೊರಬರಲಿದೆ. ಹತ್ತು ವರ್ಷದ ಹಿಂದೆ ಭಾರತಕ್ಕೆ ಬಂದಿದ್ದರು ಎಂಬುದು ಸತ್ಯವಾಗಿದ್ದರೆ, ಕೇಂದ್ರ ಗುಪ್ತದಳದ ಗಮನಕ್ಕೆ ಬರಲಿಲ್ಲ.‌ ಬಂಧಿತರು ಪಾಸ್‌ಪೋರ್ಟ್ ಮಾಡಿಸಿಕೊಳ್ಳುವ ಮಟ್ಟಕ್ಕೆ ಹೋಗಿದ್ದರು. ಹೆಸರು ಬದಲಾಯಿಸಿಕೊಂಡಿದ್ದಾರೆ. ತನಿಖೆಯಲ್ಲಿ ಏನೆಲ್ಲ ಮಾಹಿತಿಗಳು ಹೊರಬರುತ್ತವೆ ಎಂಬುದನ್ನು ನೋಡೋಣ ಎಂದು ತಿಳಿಸಿದರು. 

ಕರ್ನಾಟಕದಲ್ಲಿ ಎಫ್‌ಐಆರ್‌ ಬೆನ್ನಲ್ಲೇ ಸಚಿವೆ ನಿರ್ಮಲಾ ರಾಜೀನಾಮೆಗೆ ಕೈ ನಾಯಕರ ಪಟ್ಟು!

ಬಹಳ ಜನ ಬಾಂಗ್ಲಾ ದೇಶದವರು ಬಂದಿದ್ದಾರೆ. ಪ್ರತಿನಿತ್ಯ ಹಿಡಿದು ವರದಿ ನೀಡುತ್ತಿದ್ದೇವೆ. ಬಾಂಗ್ಲಾ ಗಡಿಯಲ್ಲಿ ನುಸುಳದಂತೆ ಬಂದೋಬಸ್ತ್ ಹೆಚ್ಚಿಸಬೇಕು. ಕೇಂದ್ರ ಸರ್ಕಾರದ ಗಮನಕ್ಕೆ‌ ತುರವ ಕೆಲಸ ನಿರಂತರವಾಗಿ ನಡೆಯುತ್ತಿದೆ. ಬಾಂಗ್ಲಾ ದೇಶದ ಹೈಕಮೀಷನ್‌ಗು ತಿಳಿಸುತ್ತಿದ್ದೇವೆ. ಫ್ರೇಜರ್‌ಟೌನ್‌ನಲ್ಲಿ‌ ಪೊಲೀಸ್ ಮನೆಗಳ ದುಸ್ಥಿತಿಯನ್ನು ಪರಿಶೀಲಿಸಲು ಹಿರಿಯ ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸುತ್ತೇನೆ. ಸಾಧ್ಯವಾದರೆ ಖುದ್ದಾಗಿ ಭೇಟಿ ನೀಡಿ, ಸೂಕ್ತ ನಿರ್ದೇಶನ‌ ನೀಡುತ್ತೇನೆ ಎಂದು ತಿಳಿಸಿದರು.

click me!