
ಮೈಸೂರು(ಮೇ.15): ನಮ್ಮಲ್ಲಿ ಒಳ ಜಗಳ ಇಲ್ಲ. ಒಳಗೂ ಇಲ್ಲ, ಹೊರಗೂ ಇಲ್ಲ. ಜಗಳ ಇದ್ದರೆ ತಾನೇ ಸರ್ಕಾರ ಬೀಳುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕರ್ನಾಟಕ ಸರ್ಕಾರದ ಪತನ ಕುರಿತು ಭವಿಷ್ಯ ನುಡಿದ ಮಹಾರಾಷ್ಟ್ರ ಸಿಎಂ ಹೇಳಿಕೆಗೆ ಮೈಸೂರು ವಿಮಾನ ನಿಲ್ದಾಣದಲ್ಲಿ ಮಂಗಳ ವಾರ ಸುದ್ದಿಗಾರರೊಂದಿಗೆ ಮಾತನಾಡಿ ತಿರುಗೇಟು ನೀಡಿದ ಅವರು, ಸರ್ಕಾರ ಪತನದ ಬಗ್ಗೆ ಒಂದು ವರ್ಷದಿಂದ ಹೇಳುತ್ತಲೇ ಇದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ಅವರು ಮೊದಲು ತಮ್ಮ ಸರ್ಕಾರವನ್ನು ಉಳಿಸಿಕೊಳ್ಳಲಿ ಎಂದರು.
ಒಂದು ವೇಳೆ ನಮ್ಮಲ್ಲಿ ಜಗಳ ಇದ್ದಿದ್ದರೆ ಲೋಕಸಭಾ ಚುನಾವಣೆಯಲ್ಲಿ ಈ ರೀತಿ ಒಟ್ಟಾಗಿ ಕೆಲಸ ಮಾಡಲು ಸಾಧ್ಯವಾಗುತ್ತಿತ್ತಾ ಎಂದು ಪ್ರಶ್ನಿಸಿದರು.
ಎಚ್‌ಡಿಕೆ ಹಿಟ್ ಅಂಡ್ ರನ್-ಸಿಎಂ: ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಯಾವತ್ತೂ ಹಿಟ್ ಆ್ಯಂಡ್ ರನ್ ಕೇಸ್. ಅವರ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ಸಿದ್ದರಾಮಯ್ಯ ಇದೇ ವೇಳೆ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಮಹಾರಾಷ್ಟ್ರ ಮಾದರಿ ಆಪರೇಷನ್ ಕಮಲ: ನಮ್ಮ ಶಾಸಕರು ಮಾರಾಟಕ್ಕಿಲ್ಲ, ಸರ್ಕಾರ ಬೀಳಲ್ಲ, ಸಿದ್ದು, ಡಿಕೆಶಿ
ಚುನಾವಣೆ ಮೇಲೆ ಪರಿಣಾಮವಿಲ್ಲ: ಸಿಎಂ
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ಪ್ರಕರಣವು ವಿಧಾನಪರಿಷತ್ ಚುನಾವಣೆ ಮೇಲೆ ಪರಿಣಾಮ ಬೀರುವುದಿಲ್ಲ. ಜೆಡಿಎಸ್ -ಬಿಜೆಪಿ ಮೈತ್ರಿಯಿಂದ ಕಾಂಗ್ರೆಸ್‌ಗೆ ಯಾವ ತೊಂದರೆಯೂ ಆಗುವುದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಪರ ವಾತಾವರಣ ಇದೆ. ಈ ಬಾರಿ ಎಂಎಲ್ಸಿ ಚುನಾವಣೆಯನ್ನು ಕಾಂಗ್ರೆಸ್ ಪಕ್ಷ ಗಂಭೀರವಾಗಿ ತೆಗದುಕೊಂಡಿದೆ. ಹೀಗಾಗಿ, 6 ತಿಂಗಳ ಮುನ್ನವೇ ಟಿಕೆಟ್ ಘೋಷಣೆ ಮಾಡಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಪೆನ್ ಡ್ರೈವ್ ಪ್ರಕರಣಕ್ಕೂ ಈ ಚುನಾವಣೆಗೂ ಸಂಬಂಧ ಇಲ್ಲ. ಪದವೀಧರರು ಹಾಗೂ ಶಿಕ್ಷಕರು ರಾಜಕೀಯ ಪ್ರಬುದ್ಧರಿದ್ದಾರೆ. ಕೇಂದ್ರ ಸರ್ಕಾರ ಏನು ಮಾಡಿದೆ? ರಾಜ್ಯ ಸರ್ಕಾರ ಏನು ಕೊಡುಗೆ ನೀಡಿದೆ ಎಂಬ ಬಗ್ಗೆ ತುಲನೆ ಮಾಡುತ್ತಾರೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.