ಮಂಡ್ಯ ಜಿಲ್ಲೆಯ ಕೃಷಿ ಇಲಾಖೆ ಅಧಿಕಾರಿಗಳು ಕೃಷಿ ಸಚಿವ ಚಲುವರಾಯಸ್ವಾಮಿ ಅವರ ವಿರುದ್ಧ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ ಎಂಬರ್ಥದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಪತ್ರ ನಕಲಿ ಎಂದು ಸಾಬೀತಾಗಿದೆ.
ಬೆಂಗಳೂರು (ಆ.08): ಮಂಡ್ಯ ಜಿಲ್ಲೆಯ ಕೃಷಿ ಇಲಾಖೆ ಅಧಿಕಾರಿಗಳು ಕೃಷಿ ಸಚಿವ ಚಲುವರಾಯಸ್ವಾಮಿ ಅವರ ವಿರುದ್ಧ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ ಎಂಬರ್ಥದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಪತ್ರ ನಕಲಿ ಎಂದು ಸಾಬೀತಾಗಿದೆ. ಆದರೂ ಈ ಸಂಬಂಧ ಅಗತ್ಯವೆನಿಸಿದರೆ ತನಿಖೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಮಂಡ್ಯ ಜಿಲ್ಲೆಯ ಅಧಿಕಾರಿಗಳು ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎಂಬರ್ಥದಲ್ಲಿ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪತ್ರ ನಕಲಿಯಾದುದು ಎಂಬುದು ಬಯಲಾಗಿದೆ. ಅಂತಹ ಅಧಿಕಾರಿಗಳು ಯಾರೂ ಜಿಲ್ಲೆಯಲ್ಲಿ ಇಲ್ಲ ಎಂದು ಮಂಡ್ಯದ ಕೃಷಿ ಇಲಾಖೆ ಜಂಟಿ ನಿರ್ದೇಶಕರು ಸ್ಪಷ್ಟಪಡಿಸಿದ್ದಾರೆ. ಹೀಗಿದ್ದರೂ ಈ ಸಂಬಂಧ ಪರಿಶೀಲನೆ ನಡೆಸಿ, ಅಗತ್ಯ ಕಂಡುಬಂದಲ್ಲಿ ತನಿಖೆ ನಡೆಸುತ್ತೇವೆ ಎಂದು ಹೇಳಿದ್ದಾರೆ.
ಬಿಜೆಪಿ ತಡೆದ ಯೋಜನೆಗೆ ಮತ್ತೆ ಚಾಲನೆ ನೀಡುವೆ: ಸಚಿವ ಮಲ್ಲಿಕಾರ್ಜುನ
ಸಚಿವರಿಗೆ ಕರೆ ಮಾಡಿ ಮಾಹಿತಿ ಪಡೆದ ಸಿಎಂ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಜಿಲ್ಲೆಯ ಸಹಾಯಕ ಕೃಷಿ ನಿರ್ದೇಶಕರ ಬಳಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆಂಬ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖುದ್ದು ಸಚಿವರಿಗೆ ಕರೆ ಮಾಡಿ ಮಾಹಿತಿ ಸಂಗ್ರಹಿಸಿದ್ದಾರೆ.
ಈ ಬಗ್ಗೆ ಖಚಿತಪಡಿಸಿರುವ ಸಚಿವ ಎನ್.ಚಲುವರಾಯಸ್ವಾಮಿ ಅವರು, ನಿಮ್ಮ ವಿರುದ್ಧ ಈ ರೀತಿಯ ಗಂಭೀರ ಆರೋಪ ಕೇಳಿ ಬಂದಿದೆ ಎಂದು ಕೇಳಿದರು. ಎಲ್ಲ ರೀತಿಯಿಂದಲೂ ತನಿಖೆ ನಡೆಸುವಂತೆ ಸ್ವತಃ ನಾನೇ ಹೇಳಿದ್ದೇನೆ. ಈ ಪತ್ರದ ಬಗ್ಗೆ ತನಿಖೆ ನಡೆಯಲಿ. ಸತ್ಯಾಸತ್ಯತೆ ಹೊರಬರಲಿ. ಅಧಿಕಾರಿಗಳಿಂದಲೂ ಮಾಹಿತಿ ಪಡೆದಿದ್ದೇನೆ. ಮಂಡ್ಯ ಎಸ್ಪಿ, ಜಂಟಿ ಕೃಷಿ ನಿರ್ದೇಶಕರಿಂದಲೂ ಮಾಹಿತಿ ಪಡೆದಿದ್ದೇನೆ ಎಂದರು.
ಮೋದಿ ಬಂದ ಮೇಲೆ ರೈಲ್ವೆ ಇಲಾಖೆ ಚಿತ್ರಣ ಬದಲು: ಪ್ರಲ್ಹಾದ್ ಜೋಶಿ
ಜಂಟಿ ಕೃಷಿ ನಿರ್ದೇಶಕರು ಸಹಾಯಕ ಕೃಷಿ ನಿರ್ದೇಶಕರೊಂದಿಗೆ ಈಗಾಗಲೇ ಜೂಮ್ ಮೀಟಿಂಗ್ ಮಾಡಿದ್ದಾರೆ. ಅವರೂ ಸಹ ನಾವು ಪತ್ರ ಬರೆದಿಲ್ಲ ಎಂದಿದ್ದಾರಂತೆ. ಮಂಡ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೂ ಈ ಬಗ್ಗೆ ತನಿಖೆ ನಡೆಸುವಂತೆ ಸೂಚಿಸಿದ್ದೇನೆ. ಅವರ ಪ್ರಾಥಮಿಕ ತನಿಖೆಯಿಂದ ಫೇಕ್ ಅನ್ನೋದು ಸಾಬೀತಾಗಿದೆಯಂತೆ ಎಂದರು. ಈ ಹಿಂದೆ ಕಂಡಕ್ಟರ್ ಆತ್ಮಹತ್ಯೆ ಯತ್ನ ವಿಚಾರದಲ್ಲೂ ನನ್ನ ವಿರುದ್ಧ ಆರೋಪ ಮಾಡಿದ್ದರು. ಈಗಲೂ ಅವರೇ ಇದನ್ನೂ ಮಾಡಿರಬೇಕು. ಇದು ಫೇಕ್ ಲೆಟರ್ ಅಂತ ನಾನು ಹೇಳೋದಿಲ್ಲ. ತನಿಖೆಯಿಂದ ಎಲ್ಲವೂ ಗೊತ್ತಾಗಲಿದೆ ಎಂದರು.