ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ ಜನರ ಧ್ವನಿ, ಸಂವಿಧಾನ ರಕ್ಷಣೆಯ ಧ್ವನಿ, ರಾಜ್ಯದ ಪರವಾದ ಧ್ವನಿ, ಸಾಮಾಜಿಕ ನ್ಯಾಯದ ಧ್ವನಿ, ಇವರು ನಮ್ಮ- ನಿಮ್ಮಲ್ಲರ ಧ್ವನಿಯಾಗಿ ಪಾರ್ಲಿಮೆಂಟಿಗೆ ಹೋಗ್ತಾರೆ. ಒಗ್ಗಟ್ಟಾಗಿ ಕೆಲಸ ಮಾಡಿ ಗೆಲ್ಲಿಸಿ ಕಳಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ಮೈಸೂರು (ಏ.03): ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ ಜನರ ಧ್ವನಿ, ಸಂವಿಧಾನ ರಕ್ಷಣೆಯ ಧ್ವನಿ, ರಾಜ್ಯದ ಪರವಾದ ಧ್ವನಿ, ಸಾಮಾಜಿಕ ನ್ಯಾಯದ ಧ್ವನಿ, ಇವರು ನಮ್ಮ- ನಿಮ್ಮಲ್ಲರ ಧ್ವನಿಯಾಗಿ ಪಾರ್ಲಿಮೆಂಟಿಗೆ ಹೋಗ್ತಾರೆ. ಒಗ್ಗಟ್ಟಾಗಿ ಕೆಲಸ ಮಾಡಿ ಗೆಲ್ಲಿಸಿ ಕಳಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಚಾಮರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಂಚೇಗೌಡನಕೊಪ್ಪಲಿನಲ್ಲಿ ಮಂಗಳವಾರ ನಡೆದ ಚುನಾವಣಾ ಪ್ರಚಾರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಅಭ್ಯರ್ಥಿ ಎಂ. ಲಕ್ಷ್ಮಣ ಸಾಮಾನ್ಯ ಒಕ್ಕಲಿಗ ಕುಟುಂಬದಿಂದ ಬಂದು, ಶ್ರಮದಿಂದ ಮೇಲೆ ಬಂದ ಕಾರ್ಯಕರ್ತ ಎಂದರು.
ಎಂ. ಲಕ್ಷ್ಮಣ ಒಕ್ಕಲಿಗರೇ ಅಲ್ಲ ಎನ್ನುವ ಅಪಪ್ರಚಾರವನ್ನು ವ್ಯಾಪಕವಾಗಿ ಮಾಡುತ್ತಿದ್ದಾರೆ. ಆದರೆ, ಎಂ. ಲಕ್ಷ್ಮಣ ಅವರು ಅಪ್ಪಟ ಒಕ್ಕಲಿಗರು. ಬಿಜೆಪಿ ಒಕ್ಕಲಿಗರಿಗೆ ಟಿಕೆಟ್ ತಪ್ಪಿಸಿದೆ ಎನ್ನುವ ಅಸಮಾಧಾನ ಹಲವರಲ್ಲಿದೆ. ಆ ಕಾರಣಕ್ಕೇ ಲಕ್ಷ್ಮಣ ಅವರು ಒಕ್ಕಲಿಗರೇ ಅಲ್ಲ ಎನ್ನುವ ಅಪಪ್ರಚಾರ ಮಾಡುತ್ತಿದ್ದಾರೆ. ಈ ಸುಳ್ಳು ಮತ್ತು ಅಪಪ್ರಚಾರವನ್ನು ನಂಬಬೇಡಿ ಎಂದು ಅವರು ಹೇಳಿದರು. ಮೈಸೂರಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಮಾಡಿದ ಅಭಿವೃದ್ಧಿ, ನಾನು ಮುಖ್ಯಮಂತ್ರಿಯಾಗಿ ಮಾಡಿದ ಅಭಿವೃದ್ಧಿ ಕೆಲಸಗಳು ಕಣ್ಣ ಮುಂದಿವೆ. ಬಿಜೆಪಿ, ಜೆಡಿಎಸ್ ಸರ್ಕಾರದಲ್ಲಿ ಮೈಸೂರಿಗೆ ಏನು ಕೆಲಸ ಮಾಡಿದ್ದಾರೆ ತೋರಿಸಿ ಎಂದು ಅವರು ಪ್ರಶ್ನಿಸಿದರು.
ಮೋದಿಯವರನ್ನು ಟೀಕಿಸಿದಾಗಲೆಲ್ಲ ಅವರ ಜನಪ್ರಿಯತೆ ಹೆಚ್ಚಾಗಿದೆ: ಬೊಮ್ಮಾಯಿ
ಬರೀ ಶ್ರೀಮಂತರು ಹೊಟ್ಟೆ ತುಂಬಿಸಿಕೊಂಡು ಮಲಗೋದಲ್ಲ. ಬಡವರೂ ರಾತ್ರಿ ಹೊಟ್ಟೆತುಂಬ ಊಟ ಮಾಡಿ ಮಲಗಬೇಕು ಎನ್ನುವ ಕಾರಣಕ್ಕೆ ಅನ್ನಭಾಗ್ಯ ಯೋಜನೆ ಜಾರಿಗೆ ತಂದೆವು. ನಮ್ಮ ಭಾಗ್ಯಗಳೆಲ್ಲಾ ಬಡವರ ಬದುಕಿಗೆ ಆಸರೆಯಾದವು ಎಂದರು. ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್, ಶಾಸಕರಾದ ತನ್ವೀರ್ ಸೇಠ್, ಕೆ. ಹರೀಶ್ ಗೌಡ, ಡಿ. ರವಿಶಂಕರ್, ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ್, ಲೋಕಸಭಾ ಅಭ್ಯರ್ಥಿ ಎಂ. ಲಕ್ಷ್ಮಣ ಮೊದಲಾದವರು ಇದ್ದರು.
ಸಂವಿಧಾನ ಬದಲಿಸಿದರೆ ಪರಿಸ್ಥಿತಿ ನೆಟ್ಟಗಿರಲ್ಲ: ನಮ್ಮ ಸಂವಿಧಾನ ಬದಲಾವಣೆಗೆ ಮುಂದಾದರೆ ಪರಿಸ್ಥಿತಿ ನೆಟ್ಟಗಿರಲ್ಲ. ನಮ್ಮ ಸಂವಿಧಾನದ ಸ್ವರೂಪ ಬದಲಾಯಿಸಿ ದೇಶದ ದುಡಿಯುವ ವರ್ಗಗಳಿಗೆ ವಂಚಿಸಿದರೆ ದೇಶದ ಪರಿಸ್ಥಿತಿ ಬಿಗಡಾಯಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಗೆ ಎಚ್ಚರಿಸಿದರು. ಮೈಸೂರಿನ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ನಡೆದ 45 ಹೆಚ್ಚು ಮಂದಿ ಹೋಬಳಿ ಮಟ್ಟದ ಮುಖಂಡರು ಹಾಗೂ ಮಾಜಿ ಕೇಂದ್ರ ಸಚಿವ ವಿ.ಶ್ರೀನಿವಾಸಪ್ರಸಾದ್ ಅವರ ಆತ್ಮೀಯರು ಮತ್ತು ಸಂಬಂಧಿಕರನ್ನು ಕಾಂಗ್ರೆಸ್ ಪಕ್ಷಕ್ಕೆ ಬರ ಮಾಡಿಕೊಂಡ ಬಳಿಕ ಮಾತನಾಡಿದರು.
ದೇವೇಗೌಡರ ಬೆನ್ನಿಗೆ ಚೂರಿ ಹಾಕಿದ ಸಿಎಂ ಸಿದ್ದರಾಮಯ್ಯ: ನಿಖಿಲ್ ಕುಮಾರಸ್ವಾಮಿ
ನಾನು ಮುಖ್ಯಮಂತ್ರಿ ಆಗಿರಲು, ಮೋದಿ ಪ್ರಧಾನಿ ಆಗಿರಲು ನಮ್ಮ ಸಂವಿಧಾನ ಕಾರಣ. ಬಿಜೆಪಿ ನಮ್ಮ ಈ ಸಂವಿಧಾನ ಬದಲಾವಣೆಯ ಅಜೆಂಡಾ ಇಟ್ಟುಕೊಂಡಿದೆ. ಈ ಸಂವಿಧಾನ ಬದಲಾದರೆ ದೇಶದ ದಲಿತರು, ಶೂದ್ರರು, ಮಹಿಳೆಯರು ಮತ್ತು ಶ್ರಮಿಕ ವರ್ಗಗಳಿಗೆ ಉಳಿಗಾಲವಿಲ್ಲ. ಹೀಗಾಗಿ, ನಾವೆಲ್ಲಾ ಉಳಿಯಬೇಕಾದರೆ ಸಂವಿಧಾನ ಉಳಿಯಬೇಕು. ಸಂವಿಧಾನ ಉಳಿಯಬೇಕೆಂದರೆ ಬಿಜೆಪಿ ಸೋಲಬೇಕು ಎನ್ನುವ ಪಣ ತೊಡಿ ಎಂದರು. ಪ್ರಸಾದ್ ಬೆಂಬಲಿಗರು ಸೇರ್ಪಡೆ: ಇದೇ ವೇಳೆ ಸಂಸದ ವಿ.ಶ್ರೀನಿವಾಸಪ್ರಸಾದ್ ಸಹೋದರ ವಿ.ರಾಮಸ್ವಾಮಿ, ಭರತ್ ರಾಮಸ್ವಾಮಿ, ಮುಖಂಡರಾದ ಶಿವಕುಮಾರ್, ಸಂತೋಷ್, ಸಿ.ಜಿ.ಶಿವಕುಮಾರ್, ಶಾಂತರಾಮ್ ಶೆಟ್ಟಿ, ಮದನ್, ಸಿದ್ದಲಿಂಗ, ವೆಂಕಟೇಶ್, ರವಿ, ನಾಗೇಶ್, ಸುರೇಶ್ ಕುಮಾರ್, ಶ್ರೀನಿವಾಸ್ ಮೊದಲಾದವರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.