
ಬೆಂಗಳೂರು: ಉಪಚುನಾವಣೆ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆಯಲ್ಲಿ ಭಾಗವಹಿಸಲು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಲಿದ್ದಾರೆ.
ಶುಕ್ರವಾರ ಬೆಳಗ್ಗೆ ಬೆಂಗಳೂರಿನಿಂದ ತೆರಳಲಿರುವ ಸಿದ್ದರಾಮಯ್ಯ ಅವರು ಮೊದಲಿಗೆ ಕೇಂದ್ರ ಸಚಿವರನ್ನು ಭೇಟಿ ಮಾಡಿ ರಾಜ್ಯದ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಬಳಿಕ ಮಧ್ಯಾಹ್ನ 3 ಗಂಟೆಗೆ ದೆಹಲಿಯ ಇಂದಿರಾಭವನದಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಇದೇ ವೇಳೆ ಅವಕಾಶ ದೊರೆತರೆ ಹೈಕಮಾಂಡ್ ನಾಯಕರನ್ನೂ ಪ್ರತ್ಯೇಕವಾಗಿ ಭೇಟಿ ಮಾಡಲಿದ್ದು, ಕ್ಷೇತ್ರ ಪುನರ್‌ವಿಂಗಡಣೆ ಹಾಗೂ ಮಹಿಳಾ ಮೀಸಲಾತಿ ವಿಚಾರಗಳ ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ. ನಿಗದಿತ ಕಾರ್ಯಕ್ರಮಗಳು ಮುಗಿದ ಬಳಿಕ ಶುಕ್ರವಾರ ಸಂಜೆಯೇ ಬೆಂಗಳೂರಿಗೆ ವಾಪಸಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.