
ಉಳ್ಳಾಲ (ಡಿ.05): ಸಮಾಜದಲ್ಲಿ ಅನೇಕ ಧರ್ಮ ಜಾತಿಗಳಿವೆ. ವೈವಿಧ್ಯತೆಯಲ್ಲಿ ಏಕತೆ ಸಾಧಿಸಬೇಕು ಎಂದು ಜನರಿಗೆ ಹೇಳುತ್ತೇವೆ. ವೈವಿಧ್ಯತೆಯಲ್ಲಿ ಏಕತೆ ಇಲ್ಲದೇ ಹೋದರೆ ಪ್ರಯೋಜನವಿಲ್ಲ. ವೈಚಾರಿಕತೆ, ವೈಜ್ಞಾನಿಕತೆ ಇರುವ ಹಾಗೂ ಜಾತಿ ವ್ಯವಸ್ಥೆಗೆ ಪರಿಹಾರ ರೂಪದಲ್ಲಿರುವ ವಿದ್ಯೆ ಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಹೇಳಿದ್ದಾರೆ. ಕೊಣಾಜೆ ನಡುಪದವಿನ ಪಿ.ಎ.ಇಂಜಿನಿಯರಿಂಗ್ ಕಾಲೇಜಿನಲ್ಲಿ ಪೇಸ್ ಎಐ ಉನ್ನತ ಅಧ್ಯಯನ ಕೇಂದ್ರದ ಶಿಲಾನ್ಯಾಸ, ಫೇಸ್ ಟ್ರೈಡ್ ಪಾರ್ಕ್ ಮತ್ತು ಫೇಸ್ ಸ್ಪೋರ್ಟ್ಸ್ ಅರೇನಾ ಶಿಲಾನ್ಯಾಸ ಹಾಗೂ ಪೇಸ್ ಕೇರ್ಸ್ ಸಮುದಾಯ ಸೇವೆ ಯೋಜನೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕನ್ನಡಪ್ರಭದ ಚಿತ್ರಕಲೆ, ಪ್ರಬಂಧ ಸ್ಪರ್ಧೆಗೆ ಸಿಎಂ ಚಾಲನೆ: ‘ಕನ್ನಡಪ್ರಭ’ ಮತ್ತು ‘ಏಷ್ಯಾನೆಟ್ ಸುವರ್ಣ ನ್ಯೂಸ್’ ವತಿಯಿಂದ ಅರಣ್ಯ ಇಲಾಖೆ ಸಹಯೋಗದಲ್ಲಿ ಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗಾಗಿ ಆಯೋಜಿಸುತ್ತಿರುವ ಪ್ರೌಢಶಾಲಾ ಮಕ್ಕಳಿಗೆ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಚಾಲನೆ ನೀಡಿದ್ದಾರೆ.
ಇದೇ ವೇಳೆ ಕೃಷಿ ಉತ್ಪನ್ನಗಳ ಸಂಸ್ಕರಣೆ ಮತ್ತು ರಫ್ತು ನಿಗಮ (ಕೆಪೆಕ್) ಮೂಲಕ ಪಿಎಂಎಫ್‌ಎಂಇ ಯೋಜನೆಯ 30 ಯಶಸ್ವಿ ಫಲಾನುಭವಿಗಳ ಯಶೋಗಾಥೆಗಳ ಕುರಿತು ‘ಕನ್ನಡಪ್ರಭ’ದಲ್ಲಿ ಪ್ರಕಟವಾಗಿದ್ದ ಸರಣಿ ವರದಿಗಳನ್ನು ಒಳಗೊಂಡ ‘ಬೆಳೆಯಿಂದ ಬ್ರ್ಯಾಂಡ್’ ಕೃತಿಯನ್ನೂ ಮುಖ್ಯಮಂತ್ರಿಗಳು ಲೋಕಾರ್ಪಣೆ ಮಾಡಿದರು. ಗುರುವಾರ ಮುಖ್ಯಮಂತ್ರಿಗಳ ನಿವಾಸ ‘ಕಾವೇರಿ’ಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರು ಈ ಎರಡೂ ಕಾರ್ಯಗಳಿಗೆ ಶ್ಲಾಘನೆ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ‘ಕನ್ನಡಪ್ರಭ’ ದಿನಪತ್ರಿಕೆ ಕಾರ್ಯವು ಮೆಚ್ಚುಗೆಗೆ ಪಾತ್ರವಾಗಿದೆ. ಅವರಿಗೆ ಶುಭವಾಗಲಿ. ಸರ್ಕಾರದ ಯೋಜನೆಯ ಲಾಭ ಪಡೆದವರನ್ನು ಸಮಾಜಕ್ಕೆ ಪರಿಚಯಿಸುವ ಮೂಲಕ ಇತರರಿಗೆ ಪ್ರೇರಣೆ ದೊರೆಯುವಂತೆ ಮಾಡಿದ್ದಾರೆ. ಜತೆಗೆ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ಚಿತ್ರಕಲಾ ಸ್ಪರ್ಧೆ ಮತ್ತು ಪ್ರಬಂಧ ಸ್ಪರ್ಧೆ ಏರ್ಪಡಿಸುತ್ತಿರುವುದು ಉತ್ತಮ ಕಾರ್ಯ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.