ಧರ್ಮ ಧರ್ಮಗಳ ನಡುವೆ ಸಂಘರ್ಷ ತರುವ ಸಿಎಂ ಹೇಳಿಕೆಗೆ ವಿರೋಧ ವ್ಯಕ್ತವಾಗಿದೆ. ಹಿಜಾಬ್ ನಿಷೇಧ ಆದೇಶ ವಾಪಸ್ ತೆಗೆದುಕೊಳ್ಳುತ್ತೇನೆಂದು ಹೇಳಿದ ಸಿಎಂ ಈಗ ಉಲ್ಟಾ ಹೊಡೆದಿದ್ದಾರೆ. ನಾನು ಹಾಗೇ ಹೇಳಿಲ್ಲ, ಪರಿಶೀಲನೆ ಮಾಡ್ತೀನಿ ಅಂದಿದ್ದಾರೆ.
ಶಿವಮೊಗ್ಗ (ಡಿ.24): ಧರ್ಮ ಧರ್ಮಗಳ ನಡುವೆ ಸಂಘರ್ಷ ತರುವ ಸಿಎಂ ಹೇಳಿಕೆಗೆ ವಿರೋಧ ವ್ಯಕ್ತವಾಗಿದೆ. ಹಿಜಾಬ್ ನಿಷೇಧ ಆದೇಶ ವಾಪಸ್ ತೆಗೆದುಕೊಳ್ಳುತ್ತೇನೆಂದು ಹೇಳಿದ ಸಿಎಂ ಈಗ ಉಲ್ಟಾ ಹೊಡೆದಿದ್ದಾರೆ. ನಾನು ಹಾಗೇ ಹೇಳಿಲ್ಲ, ಪರಿಶೀಲನೆ ಮಾಡ್ತೀನಿ ಅಂದಿದ್ದಾರೆ. ಇದು ರಾಜ್ಯದಲ್ಲಿ ಹಿಂದುತ್ವದ ಶಕ್ತಿಗೆ ಸಿಕ್ಕ ಜಯ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕುಟುಕಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನವರು ರಾಜ್ಯದಲ್ಲಿ ಹಿಜಾಬ್ ರಾಜಕರಣ ಮಾಡಲು ಪ್ರಯತ್ನ ಮಾಡಿದ್ದರು. ಮುಸಲ್ಮಾನರ ಸಂತೃಪ್ತಿಪಡಿಸಿ, ರಾಜಕೀಯ ಮಾಡಲು ನೋಡಿದ್ದರು. ಬರುವ ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನ ಪಡೆಯಲು ಸಿಎಂ ಹೇಳಿಕೆ ಕೊಟ್ಟಿದ್ದರು.
ಆದರೆ, ಇದಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಸಿಎಂ ಸಿದ್ದರಾಮಯ್ಯಗೆ ಉತ್ತರ ಬಂದಿದೆ. ಈ ಬೆದರಿಕೆಗೆ ಬೆದರಿದ ಸಿಎಂ ಉಲ್ಟಾ ಹೊಡೆದಿದ್ದಾರೆ. ಸಿಎಂ ಹೇಳಿಕೆ ಸಮರ್ಥಿಸಿದ್ದ ಎಚ್.ಕೆ.ಪಾಟೀಲ್ ಈಗ ಏನು ಉತ್ತರ ಹೇಳ್ತಾರೆ ಎಂದು ಪ್ರಶ್ನಿಸಿದರು. ಸಿಎಂ ಹೇಳಿಕೆಯನ್ನು ಕಾನೂನು ಸಚಿವರು ಸಮರ್ಥಿಸಿದ್ದು, ಆ ಸ್ಥಾನಕ್ಕೆ ಮಾಡಿದ ಅವಮಾನ. ಹೀಗಾಗಿ, ರಾಜ್ಯದ ಜನರ ಕ್ಷಮೆ ಕೇಳಬೇಕು. ಹಿಜಾಬ್ ವಿಷಯವನ್ನು ಚರ್ಚೆ ಮಾಡದೇ ಮುಖ್ಯಮಂತ್ರಿಯಾಗಿ ಯಾಕೆ ನಿಷೇಧ ಆದೇಶ ವಾಪಸ್ ಪಡೆಯುತ್ತೇವೆ ಎಂದಿದ್ದರು? ಇನ್ಮುಂದೆ ಹಿಜಾಬ್ ಇಲ್ಲ ಎಂದಾಗ ಬಹಳಷ್ಟು ಜನ ಶಿಳ್ಳೆ, ಚಪ್ಪಾಳೆ ಹೊಡೆದ್ರು, ಈಗೊಂದು ಆದೇಶ, ನಾಳೆ ಬೆಳಗ್ಗೆ ಒಂದು ಆದೇಶ. ಮೊಹಮದ್ ಬಿನ್ ತುಘಲಕ್ ಕೂಡ ಈ ರೀತಿ ಮಾಡಲಿಕ್ಕಿಲ್ಲ ಎಂದು ಕಿಡಿಕಾರಿದರು.
ಆರೆಸ್ಸೆಸ್ಸಿಗರು ಈ ಹಿಂದೆ ಚಡ್ಡಿ ಹಾಕುತ್ತಿದ್ದರು, ಈಗ ಪ್ಯಾಂಟ್ ಹಾಕುತ್ತಿದ್ದಾರೆ: ಸಚಿವ ತಂಗಡಗಿ
ಸಿದ್ದರಾಮಯ್ಯ ತುಘಲಕ್ ರೀತಿ ಹುಚ್ಚು ದೊರೆ: ಈ ಹಿಂದೆ ಮೊಹಮ್ಮದ್ ತುಘಲಕ್‌ನನ್ನು ಹುಚ್ಚು ದೊರೆ ಅಂತಾ ಕರೆಲಾಗುತ್ತಿತ್ತು. ಅದೇ ರೀತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಚ್ಚು ದೊರೆ ಆಗುತ್ತಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹರಿಹಾಯ್ದರು. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಜಾಬ್ ವಿಚಾರ ಕೋರ್ಟ್‌ನಲ್ಲಿದೆ. ನಾವೇನು ಮಾಡುವುದಕ್ಕೆ ಆಗಲ್ಲ ಎಂದು ಶಿಕ್ಷಣ ಸಚಿವರು ಹೇಳಿಕೆ ನೀಡುತ್ತಿದ್ದಾರೆ. ಆದರೆ, ಸಿದ್ದರಾಮಯ್ಯ ಮುಸ್ಲಿಂರ ಓಲೈಕೆ ಮಾಡಲು ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ನಿಷೇಧವನ್ನು ವಾಪಸ್ ಪಡೆಯುವುದಾಗಿ ಹೇಳಿಕೆ ನೀಡುತ್ತಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಯಾವುದು ಬೇಡ್ವಾ? ಕರ್ನಾಟಕದಲ್ಲಿ ಹಿಂದೂ ಮುಸ್ಲಿಂ ಬಡಿದಾಡುತ್ತಲೇ ಇರಲಿ ಎಂಬುದು ಸಿದ್ದರಾಮಯ್ಯ ಅವರ ಆಸೆ. ಒಂದು ಕಡೆ ಮುಸ್ಲಿಂರನ್ನು ಎತ್ತಿಕಟ್ಟಿ, ಕುತಂತ್ರದ ರಾಜಕೀಯ ಮಾಡುತ್ತಿದ್ದಾರೆ ಎಂದು ಹರಿಹಾಯ್ದರು.
ಕಾಂಗ್ರೆಸ್ ಒಂದೂ ಸೀಟ್ ಸಿಗಲ್ಲ: ಊಟಕ್ಕೂ ಸಮವಸ್ತ್ರಕ್ಕೂ ಏನು ಸಂಬಂಧ? ಹಿಜಾಬ್ ನಿಷೇಧ ಮಾಡಿ, ಹೈ ಕೋರ್ಟ್ ಆದೇಶ ನೀಡಿದೆ. ಇದನ್ನು ಹೊರತುಪಡಿಸಿ ಹಿಜಾಬ್ ನಿಷೇಧವನ್ನು ವಾಪಸ್ ಪಡೆಯುವ ಹುಂಬತನವನ್ನು ಸರ್ಕಾರ ಮಾಡುತ್ತಿದೆ. ಈ ರೀತಿಯ ಹೇಳಿಕೆಗಳಿಂದ ರಾಜ್ಯದಲ್ಲಿ ದಂಗೆಯಾಗಿ ಯಾರದ್ರೂ ಸತ್ತರೆ ಅದಕ್ಕೆ ಸಿಎಂ ಸಿದ್ದರಾಮಯ್ಯನವರೇ ನೇರಕಾರಣ. ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ಒಂದು ಸೀಟನ್ನು ಕಾಂಗ್ರೆಸ್ ಪಡೆದುಕೊಂಡಿತು. ಈ ಬಾರಿ ಅದೂ ಸಿಗಲ್ಲ. 28 ಸೀಟುಗಳನ್ನು ಬಿಜೆಪಿ ಗೆಲ್ಲುತ್ತದೆ ಎಂಬ ಭಯಹುಟ್ಟಿದೆ. ಹಾಗಾಗಿ. ಈ ರೀತಿಯ ಹೇಳಿಕೆಗಳನ್ನು ಸಿದ್ದರಾಮಯ್ಯನವರು ಕೊಡುತ್ತಿದ್ದಾರೆ ಎಂದು ಟೀಕಿಸಿದರು.
ಟಿಪ್ಪು ಬಳಿಕ 2ನೇ ಅವತಾರವೇ ಸಿದ್ದರಾಮಯ್ಯ: ಶಾಸಕ ಬಸನಗೌಡ ಯತ್ನಾಳ
ಬಿಜೆಪಿ ಕಾನೂನು ಹೋರಾಟ: ರಾಜ್ಯದಲ್ಲಿ ಶಾಲೆಯಲ್ಲಿ ಸಮವಸ್ತ್ರ ಇದೆ. ಕಾನೂನು ಸಚಿವರು ಈಗಲಾದರೂ ನಾನು ಇದ್ದೀನಿ ಅಂತಾ ತೋರಿಸಬೇಕು. ಕಾನೂನು ಸಚಿವ ಕಾನೂನು ಓದಿದ್ದರೆ ಇದನ್ನು ಸಿದ್ದರಾಮಯ್ಯ ಅವರಿಗೆ ತಿಳಿಸಬೇಕು. ಹಿಜಾಬ್ ಆದೇಶ ಜಾರಿಗೆ ತರಲು ಅವಕಾಶ ಕೊಡಬಾರದು. ಇದು ಒಂದು ವೇಳೆ ಜಾರಿಯಾದರೆ ಕಾನೂನು ಸಚಿವರು ಕೂಡಲೇ ರಾಜಿನಾಮೆ ಕೊಡಬೇಕು. ಹಿಜಾಬ್ ವಿಚಾರವಾಗಿ ಬಿಜೆಪಿ ವತಿಯಿಂದ ಕಾನೂನು ಹೋರಾಟ ಮಾಡ್ತೀವಿ. ಯಾವುದೇ ಕಾರಣಕ್ಕೂ ಕಾನೂನು ಹೋರಾಟ ಬಿಡುವುದಿಲ್ಲ ಎಂದು ಹರಿಹಾಯ್ದರು.