
ಬೆಂಗಳೂರು(ಜೂ.13): ಮುಖ್ಯಮಂತ್ರಿಗಳ ಅದೃಷ್ಟದ ನಿವಾಸ ಎಂದೇ ಕರೆಯಲ್ಪಡುವ ‘ಕಾವೇರಿ’ಗೆ ಆದಷ್ಟು ಬೇಗ ತಮ್ಮ ವಾಸ್ತವ್ಯ ಬದಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಮನಹರಿಸಿದ್ದು ಈ ನಿಟ್ಟಿನಲ್ಲಿ ಕಾವೇರಿ ನಿವಾಸದ ನವೀಕರಣದ ಮಾಹಿತಿ ಪಡೆದಿದ್ದಾರೆ.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕಾವೇರಿ ನಿವಾಸವನ್ನು ತೆರವುಗೊಳಿಸಿದ ಹಿನ್ನೆಲೆಯಲ್ಲಿ ಸೋಮವಾರ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರೊಂದಿಗೆ ಕಾವೇರಿ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಅವರು ಪರಿಶೀಲನೆ ನಡೆಸಿದರು. ಈ ವೇಳೆ ಸಚಿವರು ಹಾಗೂ ಅಧಿಕಾರಿಗಳು ನವೀಕರಣದ ಕುರಿತು ಮಾಹಿತಿ ನೀಡಿದರು. ಸಿದ್ದರಾಮಯ್ಯ ಅವರು ತಮ್ಮ ಆಸಕ್ತಿಗೆ ತಕ್ಕಂತೆ ನವೀಕರಣಕ್ಕೆ ಕೆಲ ಸಲಹೆ-ಸೂಚನೆಗಳನ್ನು ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಸರ್ಕಾರಿ ವಕೀಲರ ನೇಮಕಾತಿ ಅಕ್ರಮವನ್ನು ಇಲಾಖಾ ತನಿಖೆಗೆ ಆದೇಶಿಸಿದ ಸಿಎಂ ಸಿದ್ದರಾಮಯ್ಯ
ಸದ್ಯ ಕಾವೇರಿ ನಿವಾಸದಲ್ಲಿ ಪೇಂಟಿಂಗ್ ಕಾರ್ಯ ಆರಂಭವಾಗಿದೆ. ಸಂಪೂರ್ಣ ನವೀಕರಣಕ್ಕೆ ಇನ್ನೂ ಒಂದು ತಿಂಗಳು ಬೇಕಾಗಬಹುದು. ಆ ನಂತರವೇ ಮುಖ್ಯಮಂತ್ರಿಗಳು ಈ ನಿವಾಸಕ್ಕೆ ವಾಸ್ತವ್ಯ ಬದಲಿಸಲು ಸಾಧ್ಯವಾಗಲಿದೆ ಎನ್ನುತ್ತವೆ ಮೂಲಗಳು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.