ಸಿದ್ದರಾಮಯ್ಯ ಶುಕ್ರವಾರ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ತೆರಳುತ್ತಿದ್ದಾರೆ. ಈ ವೇಳೆ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣು ಗೋಪಾಲ್ ಅವರನ್ನು ಡಿ.ಕೆ.ಶಿವಕುಮಾರ್ ಅವರ ಜೊತೆಗೂಡಿ ಭೇಟಿಯಾಗಿ ಸಚಿವ ಸಂಪುಟ ಪುನಾರಚನೆ ಕುರಿತು ಚರ್ಚೆ ನಡೆಸಲಿದ್ದಾರೆಯೇ ಎಂಬುದು ಕುತೂಹಲ ಮೂಡಿಸಿದೆ.
ಬೆಂಗಳೂರು/ನವದೆಹಲಿ(ನ.28): ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದೆಹಲಿಗೆ ತೆರಳಿ ಬುಧವಾರ ಕಾಂಗ್ರೆಸ್ ವರಿಷ್ಠರನ್ನು ಭೇಟಿಯಾದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಗುರುವಾರ ದೆಹಲಿಗೆ ತೆರಳಲಿದ್ದಾರೆ.
ಸಿದ್ದರಾಮಯ್ಯ ಅವರು ಶುಕ್ರವಾರ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯಲ್ಲಿ ಭಾಗವಹಿ ಸಲು ದೆಹಲಿಗೆ ತೆರಳುತ್ತಿದ್ದಾರೆ. ಈ ವೇಳೆ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣು ಗೋಪಾಲ್ ಅವರನ್ನು ಡಿ.ಕೆ.ಶಿವಕುಮಾರ್ ಅವರ ಜೊತೆಗೂಡಿ ಭೇಟಿಯಾಗಿ ಸಚಿವ ಸಂಪುಟ ಪುನಾರಚನೆ ಕುರಿತು ಚರ್ಚೆ ನಡೆಸಲಿದ್ದಾರೆಯೇ ಎಂಬುದು ಕುತೂಹಲ ಮೂಡಿಸಿದೆ. ಅಲ್ಲದೆ, ಕೆಪಿಸಿಸಿಗೆ ನೂತನ ಅಧ್ಯಕ್ಷರ ನೇಮಕ ಮಾಡುವ ಬಗ್ಗೆಯೂ ರಾಜಕೀಯ ವಲಯದಲ್ಲಿ ಗುಲ್ಲೆದ್ದಿದ್ದು, ಈ ಬಗ್ಗೆ ಚರ್ಚೆ ನಡೆಯುವುದೇ ಅಥವಾ ಇಲ್ಲವೇ ಎಂಬುದು ಖಚಿತಪಟ್ಟಿಲ್ಲ.
ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಮಹತ್ವದ ಮಾಹಿತಿ ಕೊಟ್ಟ ಸಿಎಂ ಸಿದ್ದರಾಮಯ್ಯ
ಬುಧವಾರ ದೆಹಲಿಯಲ್ಲಿ ಡಿ.ಕೆ.ಶಿವಕುಮಾರ್ ಅವರು ಮಲ್ಲಿಕಾರ್ಜುನ ಖರ್ಗೆ ಹಾಗೂ ವೇಣುಗೋಪಾಲ್ ಅವರನ್ನು ಭೇಟಿಯಾಗಿ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದರು. ಅಲ್ಲದೆ, ಪ್ರಿಯಾಂಕಾ ಗಾಂಧಿಯ ವರನ್ನೂ ಭೇಟಿಯಾದರು. ಶುಕ್ರವಾರ ಮಧ್ಯಾಹ್ನ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದ್ದು, ಸಿದ್ದರಾಮಯ್ಯ ಸೇರಿ ವಿವಿಧ ರಾಜ್ಯಗಳ ಕಾಂಗ್ರೆಸ್ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ. ಇದೇ ವೇಳೆ, ಸಿದ್ದರಾಮಯ್ಯ ಕೆಲ ಕೇಂದ್ರ ಸಚಿವರನ್ನು ಭೇಟಿ ಮಾಡಿ ರಾಜ್ಯದ ವಿಚಾರಗಳ ಬಗ್ಗೆ ಚರ್ಚೆ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
2 ವರ್ಷ ಬಳಿಕ ಸಂಪುಟ ಪುನಾರಚನೆ ಆದ್ರೆ ಒಳಿತು: ದಿನೇಶ್ ಗುಂಡೂರಾವ್
ಶಿವಮೊಗ್ಗ: ಸದ್ಯಕ್ಕೆ ಸಚಿವ ಸಂಪುಟ ಪುನರ್ ರಚನೆ ಸಂಬಂಧ ಯಾವುದೇ ಬೆಳವಣಿಗೆ ಇಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, 2 ವರ್ಷದ ಅವಧಿ ಬಳಿಕ ಸಂಪುಟ ಪುನರ್‌ರಚನೆ ಆದರೆ ಒಳಿತು. ಇದರಿಂದ ಹೊಸಬರಿಗೆ ಅವಕಾಶ ಸಿಕ್ಕಂತಾಗುತ್ತದೆ. ನಾವೇ ಇರ ಬೇಕೆಂದರೆ ಹೇಗೆ? ಹೊಸಬರಿಗೂ ಅವಕಾಶ ನೀಡಬೇಕಾ ಗುತ್ತದೆ ಎಂದರು. ಕಾಂಗ್ರೆಸ್‌ನಲ್ಲಿ ಕೆಪಿಸಿಸಿ ಅಧ್ಯಕ್ಷರ ಸ್ಥಾನಕ್ಕೆ ಪೈಪೋಟಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಪೈಪೋಟಿ ಆದ್ರೆ ಒಳ್ಳೆಯದೆ ಅಲ್ವಾ? ಎಂದು ಉತ್ತರಿಸಿದರು.
ಸಚಿವ ಸ್ಥಾನ ಬಿಡುವಂತೆ ಕೆಲವರಿಗೆ ಹೇಳಿದ್ದೆವು: ಡಿ.ಕೆ.ಶಿವಕುಮಾರ್
ಬೆಂಗಳೂರು: ಕೆಲವು ಸಚಿವರಿಗೆ ಎರಡು ವರ್ಷದ ನಂತರ ಸಚಿವ ಸ್ಥಾನ ಬಿಟ್ಟುಕೊಡಬೇಕು ಎಂದು ಸಂದೇಶ ನೀಡಿದ್ದೇವು. ಆದರೆ, ಈಗ ಆ ವಿಚಾರ ಬೇಡ. ಏಕೆಂದರೆ, ಸಚಿವ ಸಂಪುಟ ವಿಸ್ತರಣೆ ಇನ್ನೂ ದೂರವಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಶೀಘ್ರ ಸಂಪುಟ ಪುನಾರಚನೆ ಸರ್ಕಸ್?: 6-7 ಸಚಿವರ ಸ್ಥಾನಕ್ಕೆ ಕುತ್ತು
ಮಂಗಳವಾರ ಕೆಪಿಸಿಸಿ ಕಚೇರಿಯಲ್ಲಿ ಸಂವಿಧಾನ ಅಂಗೀಕಾರ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ ಅವರು, ಪಂಚಾಯತಿ ಸದಸ್ಯರನ್ನು ನಾವು ಒಂದು ಅಥವಾ ಎರಡು ವರ್ಷ ಅಧ್ಯಕ್ಷರಾಗಿ ಮಾಡಿರುತ್ತೇವೆ. ಆದರೆ, ಅವರಿಂದ ರಾಜೀನಾಮೆ ಕೊಡಿಸಬೇಕಾದರೆ ದೇವರೆ ನಮ್ಮನ್ನು ಕಾಪಾಡಬೇಕು ಎಂದರು.
ಜತೆಗೆ, ಕೆಲ ಸಚಿವರಿಗೂ ಎರಡು ವರ್ಷದ ನಂತರ ಸಚಿವ ಸ್ಥಾನ ಬಿಡಬೇಕಾಗುತ್ತದೆ ಎಂದು ಹೇಳಿದ್ದೆವು. ಆದರೆ, ಆ ವಿಚಾರ ಈಗ ಬೇಡ. ಏಕೆಂದರೆ, ಸಂಪುಟ ವಿಸ್ತರಣೆ ಇನ್ನೂ ದೂರವಿದೆ ಎಂದು ಹೇಳಿದರು.
ಸೋನಿಯಾ ಗಾಂಧಿ ಅವರು ಬಯಸಿದ್ದರೆ ಎರಡು ಅವಧಿಗೆ ಪ್ರಧಾನಮಂತ್ರಿ ಆಗಬಹುದಿತ್ತು. ಆದರೆ, ಅವರು ಆರ್ಥಿಕ ತಜ್ಞ ಮನಮೋಹನ ಸಿಂಗ್ ಅವರನ್ನು ಪ್ರಧಾನಿ ಮಾಡಿದರು ಎಂದು ಹಳೆಯ ಮೆಲುಕು ಹಾಕಿದರು.