ಇಂದಿನಿಂದ ಸಿಎಂ ಸಿದ್ದರಾಮಯ್ಯ ಬಜೆಟ್‌ ಪೂರ್ವಸಿದ್ಧತೆ ಸಭೆ

Published : Feb 06, 2025, 08:39 AM IST
ಇಂದಿನಿಂದ ಸಿಎಂ ಸಿದ್ದರಾಮಯ್ಯ ಬಜೆಟ್‌ ಪೂರ್ವಸಿದ್ಧತೆ ಸಭೆ

ಸಾರಾಂಶ

ಎಡಗಾಲಿನ ಮಂಡಿಯಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಭಾನುವಾರದಿಂದ ವಿಶ್ರಾಂತಿಯಲ್ಲಿದ್ದ ಸಿಎಂ ಸಿದ್ದರಾಮಯ್ಯ ಅವರು ಗುರುವಾರ ಬಜೆಟ್‌ ಪೂರ್ವ ಸಿದ್ಧತೆ ಕುರಿತ ಪೂರ್ವಸಿದ್ಧತಾ ಸಭೆಗಳಿಗೆ ಚಾಲನೆ ನೀಡಲಿದ್ದಾರೆ. 

ಬೆಂಗಳೂರು (ಫೆ.06): ಎಡಗಾಲಿನ ಮಂಡಿಯಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಭಾನುವಾರದಿಂದ ವಿಶ್ರಾಂತಿಯಲ್ಲಿದ್ದ ಸಿಎಂ ಸಿದ್ದರಾಮಯ್ಯ ಅವರು ಗುರುವಾರ ಬಜೆಟ್‌ ಪೂರ್ವ ಸಿದ್ಧತೆ ಕುರಿತ ಪೂರ್ವಸಿದ್ಧತಾ ಸಭೆಗಳಿಗೆ ಚಾಲನೆ ನೀಡಲಿದ್ದಾರೆ. ಮಾರ್ಚ್‌ ಮೊದಲ ವಾರದಲ್ಲಿ ಸಿದ್ದರಾಮಯ್ಯ ಅವರು ಬಹುನಿರೀಕ್ಷಿತ ರಾಜ್ಯ ಬಜೆಟ್‌ ಮಂಡನೆ ಮಾಡಲಿದ್ದಾರೆ. 

ಈ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ದಿನಾಂಕ ಅಂತಿಮವಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಒಟ್ಟು ಐದು ದಿನಗಳ ಕಾಲ ವಿವಿಧ ಇಲಾಖೆಗಳೊಂದಿಗೆ ಬಜೆಟ್‌ ಪೂರ್ವ ಸಿದ್ಧತೆ ಸಭೆ ನಡೆಸಲಿದ್ದಾರೆ. ಫೆ.6 ರಂದು ಗೃಹಿಲಾಖೆ, ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ, ಸಣ್ಣ ಕೈಗಾರಿಕೆ, ಇಂಧನ, ಲೋಕೋಪಯೋಗಿ, ಕಾರ್ಮಿಕ, ಶಿಕ್ಷಣ, ಆಹಾರ, ಸಹಕಾರ, ರೇಷ್ಮೆ ಹಾಗೂ ಪಶು ಸಂಗೋಪನೆ ಸೇರಿ 13 ಇಲಾಖೆಗಳ ಜತೆ ಮ್ಯಾರಥಾನ್‌ ಸಭೆಗಳನ್ನು ಹಮ್ಮಿಕೊಂಡಿದ್ದಾರೆ. 

ಇದು ಬಹುತ್ವದ ದೇಶ, ಹಿಂದೂ ರಾಷ್ಟ್ರ ನಿರ್ಮಾಣ ಅಸಾಧ್ಯ, ನಿಮ್ಮ ಆಶೀರ್ವಾದದಿಂದ ಸಿಎಂ ಆಗಿದ್ದೇನೆ: ಸಿದ್ದರಾಮಯ್ಯ

ಫೆ.7 ರಂದು ಮಧ್ಯಾಹ್ನ 12 ಗಂಟೆಯಿಂದ ಸಂಜೆ 7 ಗಂಟೆವರೆಗೆ, ಫೆ. 8 ರಂದು ಶನಿವಾರ ಬೆಳಗ್ಗೆ 11 ರಿಂದ ಸಂಜೆ 7 ಗಂಟೆವರೆಗೆ, ಫೆ.10 ರಂದು ಸೋಮವಾರ ಸಂಜೆ 4 ರಿಂದ ರಾತ್ರಿ 7.30 ವರೆಗೆ ಹಾಗೂ ಫೆ.14 ರಂದು ಸಂಜೆ 4 ರಿಂದ ಸಂಜೆ 6 ಗಂಟೆವರೆಗೆ ಸಭೆಗಳನ್ನು ಹಮ್ಮಿಕೊಂಡಿದ್ದಾರೆ. ಎಲ್ಲಾ ಸಭೆಗಳಲ್ಲಿ ಉಪ ಮುಖ್ಯಮಂತ್ರಿ, ಸಂಬಂಧಪಟ್ಟ ಇಲಾಖೆ ಸಚಿವರು, ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಇಲಾಖೆ ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ ಸೇರಿ ಪ್ರತಿ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳು ಐದು ಮಂದಿ ಮೀರದಂತೆ ಭಾಗವಹಿಸಲು ಸೂಚನೆ ನೀಡಿದ್ದಾರೆ.

ಕುಂಭದಲ್ಲೂ ಸತೀಶ್‌ ಸಿಎಂ ಕೂಗು: ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಮುಖ್ಯಮಂತ್ರಿ ಆಗಲೆಂದು ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಸಚಿವರ ಅಭಿಮಾನಿಗಳು ಹರಕೆ ಹೊತ್ತಿದ್ದಾರೆ. ಮೂವರು ಅಭಿಮಾನಿಗಳು ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಭಾಗವಹಿಸಿ ಅವರ ಭಾವಚಿತ್ರ ಹಿಡಿದು ಸಚಿವ ಸತೀಶ ಜಾರಕಿಹೊಳಿ ಮುಂದಿನ ಮುಖ್ಯಮಂತ್ರಿ ಆಗಲೆಂದು ಹರಕೆ ಹೊತ್ತು ಗಮನ ಸೆಳೆದಿದ್ದಾರೆ.

ಮೈಕ್ರೋ ಫೈನಾನ್ಸ್‌ಗೆ ಹೆದರಿ ಯಾರೂ ಆತ್ಮಹತ್ಯೆ ಮಾಡಿಕೊಳ್ಳಬೇಡಿ: ಸಿದ್ದರಾಮಯ್ಯ

ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ನಡುವೆ ಕಿತ್ತಾಟ ನಡೆಯುತ್ತಿದ್ದು, ಸಚಿವ ಸತೀಶ ಜಾರಕಿಹೊಳಿ ಅವರು 2028ಕ್ಕೆ ನಾನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಹಿರಂಗವಾಗಿಯೇ ಹೇಳುತ್ತಾ ಬಂದಿದ್ದಾರೆ. ಈ ಮಧ್ಯೆ ಅಭಿಮಾನಿಗಳಿಂದ ಆಗಾಗ ಸತೀಶ ಜಾರಕಿಹೊಳಿ ಮುಂದಿನ ಮುಖ್ಯಮಂತ್ರಿ ಎಂಬ ಕೂಗು ಕೇಳಿಬರುತ್ತಿದೆ. ಸಚಿವ ಸತೀಶ ಜಾರಕಿಹೊಳಿ ಅಭಿಮಾನಿಗಳು ಈಗ ದೇವರ ಮೊರೆ ಹೋಗುತ್ತಿದ್ದಾರೆ. ಈ ಹಿಂದೆ ಸತೀಶ ಜಾರಕಿಹೊಳಿ ಮುಖ್ಯಮಂತ್ರಿ ಆಗಲೆಂದು ಅಭಿಮಾನಿಯೊಬ್ಬರು ಶಬರಿಮಲೆ ಅಯ್ಯಪ್ಪ ಸ್ವಾಮಿಗೆ ಹರಕೆ ಹೊತ್ತು ಸುದ್ದಿಯಾಗಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

‘ಕೋಕಾ’ ಸೇರಿಸದಿದ್ದರೆ ಈ ಬಿಲ್‌ ಹಲ್ಲಿಲ್ಲದ ಹಾವು: ಹೈಕೋರ್ಟ್‌ ವಕೀಲ ಎಸ್‌.ಬಾಲನ್‌ ಲೇಖನ
ಅಭಿವ್ಯಕ್ತಿ ಸ್ವಾತಂತ್ರ್ಯ ಹತ್ತಿಕ್ಕುವ ಉದ್ದೇಶ ಇಲ್ಲ: ಮುಖಾಮುಖಿ ಸಂದರ್ಶನದಲ್ಲಿ ಸಚಿವ ಎಚ್‌.ಕೆ.ಪಾಟೀಲ್‌