
ಬೆಂಗಳೂರು, (ನ.06): ರಾಜರಾಜೇಶ್ವರಿ ನಗರ ಹಾಗೂ ತುಮಕೂರಿನ ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಮುಗಿದಿದ್ದು, ಎಲ್ಲರ ಗಮನ ಇದೀಗ ಫಲಿತಾಂಶದತ್ತ ನೆಟ್ಟಿದೆ.
ಇದೇ ನವೆಂಬರ್ 10ರಂದು ಎರಡೂ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಹೊರಬೀಳಲಿದೆ. ಅದಕ್ಕೂ ಮೊದಲೇ ಮೂರು ಪಕ್ಷಗಳ ನಾಯಕರು ಸೋಲು ಗೆಲುವಿನ ಲೆಕ್ಕಾಚಾರದಲ್ಲಿ ತೊಡಗಿದ್ದು, ಕೆಲವರು ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಶಿರಾ ಹಾಗೂ ಆರ್.ಆರ್.ನಗರ ಉಪ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾರಾ, ಶಿರಾದಲ್ಲಿ ಪರ್ಸೆಂಟೇಜ್ ಲೆಕ್ಕಾಚಾರ ಶುರು; ಗೆಲ್ಲೋ ಕುದುರೆ ಯಾರು?
ಶಿರಾ ಮತ್ತು ಆರ್‍ಆರ್ ನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಯಾರೂ ಏನೇ ಹೇಳಿದರೂ ಬಿಜೆಪಿ ಅಭ್ಯರ್ಥಿಗಳೇ 100ಕ್ಕೆ ನೂರರಷ್ಟು ಗೆಲ್ಲುವುದು ಖಚಿತ. ನಾನು ಏನೇ ಹೇಳಬೇಕಾದರೂ ನೂರಾರು ಬಾರಿ ಲೆಕ್ಕಾಚಾರ ಹಾಕಿಯೇ ಹೇಳುತ್ತೇನೆ. ಈವರೆಗೂ ನಾನು ಹೇಳಿರುವ ಯಾವ ಮಾತುಗಳು ಕೂಡ ಸುಳ್ಳಲಾಗಿಲ್ಲ ಎಂದರು.
ಉಪಚುನಾವಣೆ ನಡೆದಿರುವ ಆರ್‍ಆರ್ ನಗರ ಮತ್ತು ಶಿರಾದಲ್ಲಿ ಬಿಜೆಪಿ ಅಭ್ಯರ್ಥಿಗಳು ನಿರೀಕ್ಷೆಗೂ ಮೀರಿದ ಮತಗಳಿಂದ ಗೆಲ್ಲುತ್ತಾರೆ. ಈ ಬಗ್ಗೆ ಯಾರಿಗೂ ಯಾವುದೇ ರೀತಿಯ ಅನುಮಾನ ಬೇಡ ಎಂದು ಅಚಲ ವಿಶ್ವಾಸ ವ್ಯಕ್ತಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.