'ಯಡಿಯೂರಪ್ಪ ತಡ ಮಾಡದೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು'

By Suvarna NewsFirst Published Dec 23, 2020, 3:40 PM IST
Highlights

ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ವಿರುದ್ಧ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು, (ಡಿ.23):  ಅಕ್ರಮ ಡಿನೋಟಿಫಿಕೇಶನ್ ಪ್ರಕರಣದ ರದ್ಧತಿಗೆ ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ಹೈಕೋರ್ಟ್​​ನಲ್ಲಿ ವಜಾಗೊಂಡಿದೆ. ಈ ಹಿನ್ನೆಲೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಬಿಎಸ್‌ವೈ ವಿರುದ್ಧ ಹರಿಹಾಯ್ದಿದ್ದಾರೆ.

ಟ್ವೀಟ್ ಮಾಡಿರುವ  ಸುರ್ಜೇವಾಲಾ, ಅಕ್ರಮ ಡಿನೋಟಿಫಿಕೇಶನ್ ಪ್ರಕರಣದ ತನಿಖೆ ನಡೆಯುತ್ತಿರುವಾಗ ಯಡಿಯೂರಪ್ಪ ಒಂದು ಸೆಕೆಂಡ್​ ಕೂಡ ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಲು ಹಕ್ಕಿದೆಯೇ? ನ್ಯಾಯಯುತ ತನಿಖೆಯಾಗಬೇಕಾದ್ರೆ ತಡ ಮಾಡದೇ ರಾಜೀನಾಮೆ ನೀಡಬೇಕು. ನಾ ಖಾವೂಂಗಾ ನಾ ಖಾನೆ ದೂಂಗಾ ಎಂಬ ಪ್ರಧಾನಿ ಮೋದಿಯ ವಾಗ್ದಾನಕ್ಕೆ ಈಗ ಪರೀಕ್ಷೆಯ ಸಮಯ ಎಂದಿದ್ದಾರೆ.

ಹೈಕೋರ್ಟ್ ಬಿಗ್ ಶಾಕ್: ಬಿಎಸ್ ಯಡಿಯೂರಪ್ಪಗೆ ಮತ್ತೆ ಸಂಕಷ್ಟ

ಬೆಳ್ಳಂದೂರು ಬಳಿಯ ಜಮೀನು ಡಿನೋಟೀಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು. ಆದರೆ ಪ್ರಕರಣ ರದ್ದು ಮಾಡಲು ಹೈಕೋರ್ಟ್ ಮಂಗಳವಾರ ಏಕಸದಸ್ಯಪೀಠ ನಿರಾಕರಿಸಿದೆ. ಈ ಹಿನ್ನೆಲೆಯಲ್ಲಿ ಈ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪನವರಿಗೆ ಸಂಕಷ್ಟ ಎದುರಾಗಿದೆ.

ವಾಸುದೇವರೆಡ್ಡಿ ಎಂಬುವವರು 2013ರಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಲೋಕಾಯುಕ್ತ ವಿಶೇಷ ಕೋರ್ಟ್ ತನಿಖೆಗೆ ಆದೇಶ ನೀಡಿತ್ತು.  ಮಾಜಿ ಸಚಿವ ಆರ್.ವಿ.ದೇಶಪಾಂಡೆ ವಿರುದ್ಧವೂ ಕೇಸ್ ದಾಖಲಾಗಿತ್ತು. ನ್ಯಾ.ಜಾನ್ ಮೈಕೆಲ್ ಕುನ್ಹಾ ಅವರಿದ್ದ ಏಕಸದಸ್ಯಪೀಠ ಆದೇಶ ಹೊರಡಿಸಿದೆ.
 

click me!