ಚಾಮರಾಜನಗರ ಭೇಟಿಯಿಂದ ಸಿಎಂ ಸ್ಥಾನ ಗಟ್ಟಿ: ಸಿದ್ದರಾಮಯ್ಯ

Published : Apr 26, 2025, 12:10 PM ISTUpdated : Apr 26, 2025, 12:15 PM IST
ಚಾಮರಾಜನಗರ ಭೇಟಿಯಿಂದ ಸಿಎಂ ಸ್ಥಾನ ಗಟ್ಟಿ: ಸಿದ್ದರಾಮಯ್ಯ

ಸಾರಾಂಶ

ಚಾಮರಾಜನಗರಕ್ಕೆ ಭೇಟಿ ನೀಡಿದ್ದರಿಂದ ನನ್ನ ಸಿಎಂ ಸ್ಥಾನ ಗಟ್ಟಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಚಾಮರಾಜನಗರ (ಏ.26): ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎಂಬುದು ಸತ್ಯಕ್ಕೆ ದೂರವಾದ ಮಾತು. ಚಾಮರಾಜನಗರಕ್ಕೆ ಭೇಟಿ ನೀಡಿದ್ದರಿಂದ ನನ್ನ ಸಿಎಂ ಸ್ಥಾನ ಗಟ್ಟಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶ್ರೀ ಮಲೆಮಹದೇಶ್ವರ ಬೆಟ್ಟದಲ್ಲಿ ಮಹದೇಶ್ವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚಾಮರಾಜನಗರಕ್ಕೆ ಭೇಟಿ ನೀಡಿದರೆ ಅಧಿಕಾರ ಹೋಗುತ್ತದೆ ಎಂಬುದು ಸೇರಿ ಇಂತಹ ಮೌಢ್ಯಗಳೇ ಸಮಾಜದ ಪ್ರಗತಿಗೆ ಮಾರಕವಾಗಿದೆ. ನಾನು ಇದುವರೆಗೆ ಸುಮಾರು 20 ಬಾರಿ ಜಿಲ್ಲೆಗೆ ಬಂದಿದ್ದು, ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದೇನೆ ಎಂದು ಮಂದಹಾಸ ಬೀರಿದರು.

ಮಹದೇಶ್ವರ ಬೆಟ್ಟ ಅಭಿವೃದ್ಧಿ: ಗುರುವಾರ ನಡೆದ ಮಲೆಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರ ಸಭೆಯಲ್ಲಿ ಮಹದೇಶ್ವರ ಬೆಟ್ಟದಲ್ಲಿ ಶುಚಿತ್ವ, ಮದ್ಯಪಾನ ನಿಷೇಧ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೊಳಿಸಲು ನಿರ್ಣಯ ಕೈಗೊಳ್ಳಲಾಗಿದೆ. ಮೈಸೂರು ವಿಭಾಗದ ಚಾಮರಾಜನಗರ ಜಿಲ್ಲೆ ಹಿಂದುಳಿದ ಜಿಲ್ಲೆಯಾಗಿದ್ದು, ಈ ಭಾಗಕ್ಕೆ ವಿಶೇಷ ಗಮನ ನೀಡುವ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗಿದೆ ಎಂದರು. ದೇವಸ್ಥಾನದಲ್ಲಿ ವಿತರಿಸಲಾಗುವ ಲಾಡು ಪ್ರಸಾದ ಗುಣಮಟ್ಟ ಹಾಗೂ ಕಡಿಮೆ ದರದಲ್ಲಿ ನೀಡುವ ಬಗ್ಗೆ ಕ್ರಮ ಕೈಗೊಳ್ಳಬೇಕು. ಮಲೆಮಹದೇಶ್ವರ ಸನ್ನಿಧಿಯ ಸುತ್ತಮುತ್ತಲ ಪ್ರದೇಶದಲ್ಲಿ ಮೂಲಸೌಕರ್ಯ ಅಭಿವೃದ್ಧಿಪಡಿಸಬೇಕೆಂದು ನಿರ್ಣಯಿಸಲಾಗಿದೆ ಎಂದು ತಿಳಿಸಿದರು.

ಮಹದೇಶ್ವರ ಬೆಟ್ಟದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ನಿರ್ಣಯ: ಸಿದ್ದು

ಇಂದಿರಾ ಕ್ಯಾಂಟೀನ್‌ನಲ್ಲಿ  ಚೌಚೌಬಾತ್‌ ಸವಿದ ಸಿಎಂ: ಚಾಮರಾಜನಗರ ಜಿಲ್ಲಾ ಪ್ರವಾಸ ನಡೆಸಿದ ಸಿಎಂ ಸಿದ್ದರಾಯ್ಯ ಅವರು ಹನೂರು ಪಟ್ಟಣದ ಕರ್ನಾಟಕ ರಾಜ್ಯ ಸಾರಿಗೆ ಬಸ್ ನಿಲ್ದಾಣದ ಪಕ್ಕದಲ್ಲಿ ಆರಂಭಿಸಿರುವ ಇಂದಿರಾ ಕ್ಯಾಂಟೀನ್ ಅನ್ನು ಉದ್ಘಾಟಿಸಿದರು. ನಂತರ ಉಪ್ಪಿಟ್ಟು ಕೇಸರಿ ಬಾತ್ ರುಚಿ ನೋಡಿ ಉತ್ತಮ ಗುಣಮಟ್ಟವನ್ನು ಕಾಯ್ದುಕೊಳ್ಳುವ ಮೂಲಕ ಬಡ ಜನತೆಗೆ ಇಷ್ಟವಾಗುವ ರೀತಿ ಊಟ-ಉಪಹಾರ ನೀಡಬೇಕು ಎಂದು ಸೂಚಿಸಿದರು. ಬಳಿಕ ಜಿಲ್ಲಾಡಳಿತ ಭವನದ ಆವರಣದಲ್ಲಿ ಬಸವೇಶ್ವರ ಮೂರ್ತಿ ಅನಾವರಣ ಮಾಡಿದರು. ಇದೇ ವೇಳೆ ಕನಕ, ಭಗೀರಥ, ವಾಲ್ಮೀಕಿ ಪ್ರತಿಮೆ ಸ್ಥಾಪನೆಗೆ ಶಂಕುಸ್ಥಾಪನೆ ನೆರವೇರಿಸಿದರು.

ಪ್ರಜಾಸೌಧಕ್ಕೆ ಪೂಜೆ ಮಾಡದೆ ಸಿಎಂ ವಾಪಸ್‌: ಟೆಂಡರ್ ಪ್ರಕ್ರಿಯೆ ಮುಗಿಯದ ಕಾರಣ ಪ್ರಜಾಸೌಧಕ್ಕೆ ಪೂಜೆ ಮಾಡದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ವಾಪಸ್‌ ತೆರಳಿದ ಘಟನೆ ನಡೆದಿದೆ. ಹನೂರು ಪಟ್ಟಣದ ಕಂದಾಯ ಇಲಾಖೆ ವ್ಯಾಪ್ತಿಯ ಹುಲುಸುಗುಡ್ಡೆ ಸಮೀಪದ ಹುಲ್ಲೇಪುರ ಸರ್ವೆ ನಂಬರ್ 312 / ಇ ರಲ್ಲಿ ಎರಡು ಎಕರೆ ವಿಸ್ತೀರ್ಣದಲ್ಲಿ 8.60 ವೆಚ್ಚದಲ್ಲಿ ಪ್ರಜಾಸೌಧ ನಿರ್ಮಾಣಕ್ಕೆ ಶಂಕುಸ್ಥಾಪನೆ ದಿನಾಂಕ ನಿಗದಿಯಾಗಿತ್ತು. ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಮಲೆಮಹದೇಶ್ವರ ಬೆಟ್ಟದಲ್ಲಿ ಕ್ಯಾಬಿನೆಟ್ ಸಭೆ ಮುಗಿಸಿ ಶುಕ್ರವಾರ ಬೆಳಗ್ಗೆ ಮಾದೇಶ್ವರನಿಗೆ ಪೂಜೆ ಸಲ್ಲಿಸಿ ನಂತರ ಪಟ್ಟಣದಲ್ಲಿ ಪ್ರಜಾಸೌಧಕ್ಕೆ ಶಂಕುಸ್ಥಾಪನೆ ನೆರವೇರಿಸಲು ಸಮಯ ಮತ್ತು ದಿನಾಂಕ ನಿಗದಿಯಾಗಿತ್ತು.

ಸಿಐಡಿ ಚಾರ್ಜ್‌ಶೀಟ್‌ ಬೆನ್ನಲ್ಲೇ ಬ್ಯಾಂಕ್‌ ಸಾಲ ಕಟ್ಟಿದ ರಮೇಶ್

ಟೆಂಡರ್ ಆಗದೆ ಶಂಕು ಸ್ಥಾಪನೆ ಇಲ್ಲ ಸಿಎಂ: ಹನೂರು ಪಟ್ಟಣದಲ್ಲಿ ಪ್ರಮುಖವಾಗಿ ಪ್ರಜಾಸೌಧಕ್ಕೆ ಶಂಕುಸ್ಥಾಪನೆ ಮಾಡಲು ಟೆಂಡರ್ ಕೂಡ ಕರೆದಿಲ್ಲ. ಹನೂರು ಪಟ್ಟಣದಿಂದ ಈ ಸ್ಥಳ ದೂರ ಕೂಡ ಇರುವುದರಿಂದ ಮುಂದಿನ ದಿನಗಳಲ್ಲಿ ಮಾಡೋಣ ಎಂದು ಸಿಎಂ ಸಿದ್ದರಾಮಯ್ಯ ಕಾರಿನಿಂದ ಇಳಿಯದೆ ಮಾಹಿತಿ ಪಡೆದು ವಾಪಸ್ ತೆರಳಿದರು. ಕಳೆದ ಹಲವು ವರ್ಷಗಳಿಂದ ಬಹು ಬೇಡಿಕೆಯ ಪ್ರಜಾಸೌಧವನ್ನು ನಿರ್ಮಾಣ ಮಾಡಲು ಪಟ್ಟಣದಿಂದ 3 ಕಿ.ಮೀ. ದೂರದಲ್ಲಿರುವ ಹುಲ್ಲೇಪುರ ಸರ್ವೆ ನಂ. 312ರಲ್ಲಿ ಎರಡು ಎಕರೆ ಜಮೀನು ಗುರುತಿಸಿ ಹನೂರು ಭಾಗದ ಜನತೆಗೆ ಸುಸಜ್ಜಿತ ಪ್ರಜಾಸೌಧ ನಿರ್ಮಾಣಕ್ಕೆ ಸ್ಧಳ ನಿಗದಿ ಮಾಡಲಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ರಾಜ್ಯದಲ್ಲಿ ರಾಜಕೀಯ ಹೊಲಸೆದ್ದು, ಎಲ್ಲ ಪಕ್ಷಗಳು ಗಬ್ಬೆದ್ದು ಹೋಗಿವೆ: ಕೆ.ಎಸ್.ಈಶ್ವರಪ್ಪ
ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ