ವರಿಷ್ಠರ ಎಚ್ಚರಿಕೆ ಬಳಿಕವೂ ಕಾಂಗ್ರೆಸ್‌ನಲ್ಲಿ ಸಿಎಂ ಹೇಳಿಕೆ: ಹೈಕಮಾಂಡ್‌ ಸೂಚನೆಗೂ ಬೆಲೆಯಿಲ್ಲ

Published : Jan 27, 2025, 07:10 AM IST
ವರಿಷ್ಠರ ಎಚ್ಚರಿಕೆ ಬಳಿಕವೂ ಕಾಂಗ್ರೆಸ್‌ನಲ್ಲಿ ಸಿಎಂ ಹೇಳಿಕೆ: ಹೈಕಮಾಂಡ್‌ ಸೂಚನೆಗೂ ಬೆಲೆಯಿಲ್ಲ

ಸಾರಾಂಶ

ಸಿಎಂ ಮತ್ತು ಕೆಪಿಪಿಸಿ ಅಧ್ಯಕ್ಷರ ಬದಲಾವಣೆ ಕುರಿತು ಯಾವುದೇ ಹೇಳಿಕೆ ನೀಡದಂತೆ ಎಐಸಿಸಿ ವರಿಷ್ಟರು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ ನಂತರವೂ ಕಾಂಗ್ರೆಸ್‌ನಲ್ಲಿ ಸಿಎಂ ಬದಲಾವಣೆ ವಿಷಯವಾಗಿ ಚರ್ಚೆ ಮುಂದುವರಿದಿದೆ. 

ಬೆಂಗಳೂರು (ಜ.27): ಸಿಎಂ ಮತ್ತು ಕೆಪಿಪಿಸಿ ಅಧ್ಯಕ್ಷರ ಬದಲಾವಣೆ ಕುರಿತು ಯಾವುದೇ ಹೇಳಿಕೆ ನೀಡದಂತೆ ಎಐಸಿಸಿ ವರಿಷ್ಟರು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ ನಂತರವೂ ಕಾಂಗ್ರೆಸ್‌ನಲ್ಲಿ ಸಿಎಂ ಬದಲಾವಣೆ ವಿಷಯವಾಗಿ ಚರ್ಚೆ ಮುಂದುವರಿದಿದೆ. ಚಿತ್ರದುರ್ಗದಲ್ಲಿ ಭಾನುವಾರ ಮಾತನಾಡಿದ ಸಚಿವ ಡಿ, ಸುಧಾಕರ್‌, ‘ಸಿದ್ದರಾಮಯ್ಯನವರು ತಾವೇ 5 ವರ್ಷ ಸಿಎಂ ಎಂದು ಹೇಳಿಲ್ಲ, ಕಾಂಗ್ರೆಸ್‌ ಐದು ವರ್ಷವೂ ಅಧಿಕಾರದಲ್ಲಿ ಇರುತ್ತೆ ಎಂದಷ್ಟೇ ಹೇಳಿದ್ದಾರೆ’ ಎಂದಿದ್ದಾರೆ. ಈ ಮೂಲಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪರ ಪರೋಕ್ಷವಾಗಿ ಬ್ಯಾಟ್‌ ಬೀಸಿದ್ದಾರೆ.

ಆದರೆ, ಸುಧಾಕರ್‌ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ ಸಚಿವ ಜಮೀರ್‌ ಅಹಮದ್‌ ಖಾನ್, ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹಾಗೂ ಚಾಮರಾಜನಗರ ಸಂಸದ ಸುನೀಲ್‌ ಬೋಸ್‌ ಅವರು, ‘ಸಿದ್ದು ಅವರೇ ಪೂಣಾರ್ವಧಿ ಸಿಎಂ ಆಗಿ ಮುಂದುವರಿಯುತ್ತಾರೆ, ಸಿಎಂ ಬದಲಾವಣೆ ಚರ್ಚೆ ಅಪ್ರಸ್ತುತ’ ಎಂದು ಪ್ರತಿಪಾದಿಸಿದ್ದಾರೆ.

ಸುಧಾಕರ್ ಹೇಳಿದ್ದೇನು?: ಚಿತ್ರದುರ್ಗದಲ್ಲಿ ಭಾನುವಾರ ಧ್ವಜಾರೋಹಣ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಸುಧಾಕರ್‌, ಡಿಕೆಶಿ ಪರ ಪರೋಕ್ಷವಾಗಿ ಬ್ಯಾಟ್‌ ಬೀಸಿದರು. ಸಿಎಂ ಬದಲಾವಣೆ ಕುರಿತು ಪ್ರತಿಕ್ರಿಯಿಸಿ, ‘ಸಿದ್ದು ಅವರು ನಾನೇ ಪೂರ್ಣಾವಧಿ ಅಧಿಕಾರಲ್ಲಿರುತ್ತೇನೆ ಎಂದು ಹೇಳಿಲ್ಲ, ನಾವೇ ಐದು ವರ್ಷ ಅಧಿಕಾರದಲ್ಲಿ ಇರ್ತೇವೆ ಎಂದಿದ್ದಾರೆ. ಅಂದರೆ, ಕಾಂಗ್ರೆಸ್‌ ಸರ್ಕಾರ 5 ವರ್ಷ ಅವಧಿ ಪೂರೈಸುತ್ತೆ’ ಎಂದರು. ಬಳಿಕ, ಕೊಪ್ಪಳದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಲ್ಪಸಂಖ್ಯಾತರ ಇಲಾಖೆಯ ಸಚಿವ ಜಮೀರ್ ಅಹಮದ್, ಸಚಿವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದರು. ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಆಗಿ ಇರುತ್ತಾರೆ, ಈಗ ಸಿಎಂ ಖುರ್ಚಿ ಖಾಲಿ ಇಲ್ಲ’ ಎಂದು ಸಮರ್ಥಿಸಿಕೊಂಡರು. ಇದರ ಜೊತೆಗೆ ಕೆಪಿಸಿಸಿ ಅಧ್ಯಕ್ಷರ ಖುರ್ಚಿಯೂ ಖಾಲಿ ಇಲ್ಲ ಎಂದರು.

ಸಾಲಗಾರರಿಗೆ ಕಿರುಕುಳ ಕೊಟ್ಟರೆ ಕ್ರಿಮಿನಲ್‌ ಕೇಸ್‌: ಮೈಕ್ರೋಫೈನಾನ್ಸ್‌ಗಳ ವಿರುದ್ಧ ಸುಗ್ರೀವಾಜ್ಞೆ ಅಸ್ತ್ರ

ಇದೇ ವೇಳೆ, ಸುದ್ದಿಗಾರರ ಜೊತೆ ಮಾತನಾಡಿದ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಅವರು, ಸಿಎಂ ಸಿದ್ದರಾಮಯ್ಯ ಅವರನ್ನು ಹಾಡಿ ಹೊಗಳಿದರು. ‘ಅವರಂತಹ ಮುಖ್ಯಮಂತ್ರಿ ಮತ್ತೊಬ್ಬರಿಲ್ಲ. ಇದಕ್ಕಾಗಿಯೇ ನಾನು ಅವರ ಜೊತೆಗೆ ಇದ್ದೇನೆ. ಅವರು 5 ವರ್ಷಗಳ ಕಾಲ ಸಿಎಂ ಆಗಿರಬೇಕು ಎನ್ನುವುದರಲ್ಲಿ ಮೊದಲಿಗ’ ಎಂದರು. ಈ ಮಧ್ಯೆ, ಚಾಮರಾಜನಗರದಲ್ಲಿ ಮಾತನಾಡಿದ ಸಂಸದ ಸುನೀಲ್‌ ಬೋಸ್‌, ಸಿಎಂ ಕುರ್ಚಿಯಲ್ಲಿ ಸಿದ್ದರಾಮಯ್ಯ ಕುಳಿತಿದ್ದು, ಅವರೇ 5 ವರ್ಷ ಮುಂದುವರಿಯುತ್ತಾರೆ. ಶಾಸಕರ ಬೆಂಬಲ, ಹೈಕಮಾಂಡ್ ಬೆಂಬಲ ಇರುವ ತನಕ ಅವರೇ ಮುಖ್ಯಮಂತ್ರಿ. 2.5 ವರ್ಷ ಅಧಿಕಾರ ಹಂಚಿಕೆ ಎಂಬ ಒಪ್ಪಂದ ಆದಂತೆ ಕಾಣುತ್ತಿಲ್ಲ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿದ್ಧರಾಮಯ್ಯ ಮಾತು ಎತ್ತಿದ್ರೆ ಸಾಬ್ರು ಸಾಬ್ರು ಅಂತ ಜಪ ಮಾಡ್ತಾರೆ: ಶಾಸಕ ಯತ್ನಾಳ್ ವ್ಯಂಗ್ಯ!
ನಾನು ಹತ್ತು ಲಕ್ಷದ ವಾಚಾದ್ರೂ ಕಟ್ಟುತ್ತೇನೆ, ಅದು ನನ್ನ ಆಸ್ತಿ: ಬಿಜೆಪಿಗೆ ತಿರುಗೇಟು ಕೊಟ್ಟ ಡಿಕೆಶಿ