ಬೆಂಗಳೂರಿನ ಆರ್.ಆರ್.ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ಕುಸುಮಾ ಅವರಿಗೆ ಬಿಗ್ ಶಾಕ್.
ಬೆಂಗಳೂರು, (ಅ.14) : ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ರಂಗೇರುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ದಿ. ಐಎಎಸ್ ಅಧಿಕಾರಿ ಡಿ.ಕೆ. ರವಿ ಪತ್ನಿ ಹಾಗೂ ಹನುಮಂತರಾಯಪ್ಪರ ಪುತ್ರಿ ಕುಸುಮಾ ಅಖಾಡಕ್ಕಿಳಿದಿದ್ದಾರೆ.
ಜ್ಯೋತಿಷಿಗಳ ಸಲಹೆಯಂತೆ ನಿನ್ನೆ (ಮಂಗಳವಾರ) ನಾಮಪತ್ರ ಸಲ್ಲಿಸಿರುವ ಕುಸುಮಾ, ಇಂದು (ಬುಧವಾರ) ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗು ಮಾಜಿ ಸಿಎಂ ಸಿದ್ದರಾಮಯ್ಯನವರ ಜತೆ ತೆರಳೆ ಎರಡನೇ ಬಾರಿ ನಾಮಪತ್ರ ಸಲ್ಲಿಸಿದರು.
undefined
ಆದ್ರೆ, 2ನೇ ಬಾರಿ ನಾಮೊತ್ರ ಸಲ್ಲಿಸುವ ವೇಳೆ ಸಿದ್ದರಾಮಯ್ಯನವರ ಕಾರು ಚಾಲಕನ ಎಡವಟ್ಟಿನಿಂದಾಗಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಕುಸುಮಾ ನಾಮಪತ್ರ ಸಲ್ಲಿಕೆ : ಪತಿ ಹೆಸರಿನ ಕಲಂನಲ್ಲಿ ಭರ್ತಿ ಮಾಡಿದ್ದೇನು..?
ಹೌದು....ಕುಸುಮಾ ಸೇರಿದಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಎಸ್ಕಾರ್ಟ್ ಹಾಗೂ ಪೈಲೆಟ್ ವಾಹನ ಚಾಲರ ವಿರುದ್ಧ ರಾಜರಾಜೇಶ್ವರಿ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
ನಾಮಪತ್ರ ಸಲ್ಲಿಸುವ ಕಚೇರಿಯ 100 ಮೀಟರ್ ದೂರದಲ್ಲಿ ಬ್ಯಾರಿಕೇಡ್ ಹಾಕಲಾಗಿತ್ತು. ಆದ್ರೆ, ಸಿದ್ದರಾಮಯ್ಯನವರ ಚಾಲಕರು ಬ್ಯಾರಿಕೇಡ್ ತೆಗೆದು ನೂರು ಮೀಟ್ ವ್ಯಾಪ್ತಿಯೊಳಗೆ ಕಾರು ಚಲಾಯಿಸಿಕೊಂಡು ಹೋಗಿದ್ದಾರೆ. ಇದರಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಕೇಸ್ ದಾಖಲಾಗಿದೆ.
ಐಪಿಸಿ ಸೆಕ್ಷನ್ 353 (ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿ) ಹಾಗೂ 188 (ಸರ್ಕಾರಿ ಅಧಿಕಾರಿಯ ಆದೇಶ ಪಾಲಿಸದಿರುವುದು) ಅಡಿಯಲ್ಲಿ ದೂರು ದಾಖಲಾಗಿದೆ.