ಕಾಂಗ್ರೆಸ್ ‌ಸೇರಿದ‌ ಹಾಸ್ಯ ನಟ ಸಾಧುಕೋಕಿಲ: ಕೆಪಿಸಿಸಿ ಸಾಂಸ್ಕೃತಿಕ ಘಟಕದ ಅಧ್ಯಕ್ಷರಾಗಿ ನೇಮಕ

By Sathish Kumar KH  |  First Published Mar 2, 2023, 5:08 PM IST

ರಾಜ್ಯದಲ್ಲಿ ಮುಂಬರುವ ಚುನಾವಣೆಯ ಹಿನ್ನೆಲೆಯಲ್ಲಿ ಹಾಸ್ಯನಟ, ಸಂಗೀತ ನಿರ್ದೇಶಕ ಸಾಧು ಕೋಕಿಲ ಕಾಂಗ್ರೆಸ್‌ ಸೇರ್ಪಡೆ ಆಗಿದ್ದಾರೆ. ಇದೇ ವೇಳೆ ರಾಜ್ಯ ಕೆಪಿಸಿಸಿ ಸಾಂಸ್ಕೃತಿಕ ಘಟಕದ ಅಧ್ಯಕ್ಷರ ಜವಾಬ್ದಾರಿಯನ್ನೂ ಕೊಡಲಾಗಿದೆ. 


ಬೆಂಗಳೂರು (ಮಾ.02): ರಾಜ್ಯದಲ್ಲಿ ಮುಂಬರುವ ಚುನಾವಣೆಯ ಹಿನ್ನೆಲೆಯಲ್ಲಿ ಹಾಸ್ಯನಟ, ಸಂಗೀತ ನಿರ್ದೇಶಕ ಸಾಧು ಕೋಕಿಲ ಕಾಂಗ್ರೆಸ್‌ ಸೇರ್ಪಡೆ ಆಗಿದ್ದಾರೆ. ಇದೇ ವೇಳೆ ರಾಜ್ಯ ಕೆಪಿಸಿಸಿ ಸಾಂಸ್ಕೃತಿಕ ಘಟಕದ ಅಧ್ಯಕ್ಷರ ಜವಾಬ್ದಾರಿಯನ್ನೂ ಕೊಡಲಾಗಿದೆ. 

ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಪಕ್ಷದ ಶಲ್ಯವನ್ನು ಹಾಕಿ ಹಾಗೂ ಹೂಗುಚ್ಛ ನೀಡಿ ಸಾಧುಕೋಕಿಲ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ. ಇನ್ನು ಪಕ್ಷ ಸೇರ್ಪಡೆಯ ಬೆನ್ನಲ್ಲೇ ಕೆಪಿಸಿಸಿ ಸಾಂಸ್ಕೃತಿಕ ಘಟಕದ ಅಧ್ಯಕ್ಷರನ್ನಾಗಿ ಸಾಧು ಕೋಕಿಲ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಈ ಮೂಲಕ ಕಾಂಗ್ರೆಸ್‌ಗೆ ಇನ್ನಷ್ಟು ಶಕ್ತಿ ತುಂಬುವ ವಿಶ್ವಾಸವನ್ನು ಡಿ.ಕೆ. ಶಿವಕುಮಾರ್‌ ವ್ಯಕ್ತಪಡಿಸಿದ್ದಾರೆ.

Latest Videos

undefined

ಕಲಬುರಗಿ: ಬಿಜೆಪಿ, ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರ್ಪಡೆ

ಕೆಪಿಸಿಸಿ ಆದೇಶ ಪತ್ರದಲ್ಲಿ ಏನಿದೆ.? : ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ ಸಾಂಸ್ಕೃತಿಕ ಘಟಕದ ಅಧ್ಯಕ್ಷರನ್ನಾಗಿ ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ. ತಾವುಗಳು ತಕ್ಷಣ ತಮಗೆ ನೀಡಿರುವ ಜವಾಬ್ದಾರಿಯನ್ನು ವಹಿಸಿಕೊಂಡು, ಕೆಪಿಸಿಸಿಯ ಮಾರ್ಗದರ್ಶನದಲ್ಲಿ ಮತ್ತು ರಾಜ್ಯದ ನಾಯಕರ ಸಹಕಾರದೊಂದಿಗೆ ಸಾಂಸ್ಕೃತಿಕ ಘಟಕದ ಮೂಲಕ ಸಂಘಟನೆಗೆ ಮುಂದಾಗಬೇಕು. ಆ ಮೂಲಕ ಪಕ್ಷದ ಬಲವರ್ಧನೆಯಲ್ಲಿ ಕಾರ್ಯೋನ್ಮುಖರಾಗಬೇಕು ಎಂದು ಕೋರಿದೆ. ಈ ದಿಸೆಯಲ್ಲಿ ತಮಗೆ ಹೆಚ್ಚಿನ ಯಶಸ್ಸು ಲಭಿಸಲೆಂದು ಶುಭ ಕೋರುತ್ತೇನೆ ಎಂದು ಉಲ್ಲೇಖ ಮಾಡಲಾಗಿದೆ.

ಕಾಂಗ್ರೆಸ್‌ಗೆ ಶಕ್ತಿ ತುಂಬುವ ಭರವಸೆ: ಈ ಬಗ್ಗೆ ಸಾಮಾಜಿಕ ಜಾಲತಾಣದ ಮೂಲಕ ಶುಭ ಕೋರಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು, 'ಕನ್ನಡದ ಖ್ಯಾತ ಸಂಗೀತ ನಿರ್ದೇಶಕರಾದ ಶ್ರೀ ಸಾಧು ಕೋಕಿಲಾ ಅವರನ್ನು ಕೆಪಿಸಿಸಿ ಸಾಂಸ್ಕೃತಿಕ ಘಟಕದ ಅಧ್ಯಕ್ಷರನ್ನಾಗಿ ಅಧಿಕೃತವಾಗಿ ಇಂದು ನೇಮಕ ಮಾಡಿ ಶುಭ ಕೋರಿದೆ. ಸಂಗೀತ, ನಿರ್ದೇಶನ, ನಟನೆಯ ಮೂಲಕ ಕನ್ನಡ ನಾಡಿನ ಮನೆಮಾತಾಗಿರುವ ಸಾಧು ಕೋಕಿಲಾ ಅವರು ಕಾಂಗ್ರೆಸ್‌ಗೆ ಇನ್ನಷ್ಟು ಶಕ್ತಿ ತುಂಬುತ್ತಾರೆ ಎನ್ನುವ ವಿಶ್ವಾಸ ನನಗಿದೆ ಎಂದು ಬರೆದುಕೊಂಡಿದ್ದಾರೆ.

ಕನ್ನಡದ ಖ್ಯಾತ ಸಂಗೀತ ನಿರ್ದೇಶಕರಾದ ಶ್ರೀ ಸಾಧು ಕೋಕಿಲಾ ಅವರನ್ನು ಕೆಪಿಸಿಸಿ ಸಾಂಸ್ಕೃತಿಕ ಘಟಕದ ಅಧ್ಯಕ್ಷರನ್ನಾಗಿ ಅಧಿಕೃತವಾಗಿ ಇಂದು ನೇಮಕ ಮಾಡಿ ಶುಭ ಕೋರಿದೆ. ಸಂಗೀತ, ನಿರ್ದೇಶನ, ನಟನೆಯ ಮೂಲಕ ಕನ್ನಡ ನಾಡಿನ ಮನೆಮಾತಾಗಿರುವ ಸಾಧು ಕೋಕಿಲಾ ಅವರು ಕಾಂಗ್ರೆಸ್‌ಗೆ ಇನ್ನಷ್ಟು ಶಕ್ತಿ ತುಂಬುತ್ತಾರೆ ಎನ್ನುವ ವಿಶ್ವಾಸ ನನಗಿದೆ.

-ಶುಭವಾಗಲಿ pic.twitter.com/og31KBCeO0

— DK Shivakumar (@DKShivakumar)

ಜೆಡಿಎಸ್‌ ಮತ್ತೊಂದು ವಿಕೆಟ್‌ ಪತನ: ಕಾಂಗ್ರೆಸ್‌ ಸೇರಲಿದ್ದಾರೆ ಶಿವಲಿಂಗೇಗೌಡ 

ಜೆಡಿಎಸ್‌ ಪಕ್ಷದ ಮತ್ತೊಂದು ವಿಕೆಟ್‌ ಪತನ: ಜೆಡಿಎಸ್‌ ಪಕ್ಷದ ಮತ್ತೊಂದು ವಿಕೆಟ್‌ ಪತನವಾಗಿದ್ದು,ಶಾಸಕ ಶಿವಲಿಂಗೇಗೌಡ ಕಾಂಗ್ರೆಸ್‌ ಸೇರ್ಪಡೆ ಡೇಟ್‌ ಫಿಕ್ಸ್‌ ಆಗಿದೆ. ಮಾರ್ಚ್ 5 ರಂದು ಶಾಸಕ  ಶಿವಲಿಂಗೇಗೌಡ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರ್ಪಡೆ ಆಗಲಿದ್ದಾರೆ. ಶಿವಲಿಂಗೇಗೌಡ ಅರಸೀಕೆರೆಯಲ್ಲಿ ಕಾರ್ಯಕರ್ತ ಸಭೆ ಕರೆದಿದ್ದು,  ಕಾರ್ಯಕರ್ತರ ಒಕ್ಕೊರಲ ಅಭಿಪ್ರಾಯದಿಂದ ಶಿವಲಿಂಗೇಗೌಡ ಕಾಂಗ್ರೆಸ್‌ ಸೇರಲಿದ್ದಾರೆ.

click me!