
ಬೆಂಗಳೂರು(ಆ.26): ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರ ಸಿನಿಮಾದ ನಿರ್ದೇಶಕ, ನಿರ್ಮಾಪಕ ಯಾರೆಂಬುದು ಸದ್ಯದಲ್ಲೇ ಗೊತ್ತಾಗಲಿದೆ. ಅವರ ಆರೋಪಗಳು ಟೂಲ… ಕಿಟ್‌ನ ಮತ್ತೊಂದು ಭಾಗ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.
ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಬಿಎಂಪಿ ಚುನಾವಣೆ ಹತ್ತಿರ ಬರುತ್ತಿದ್ದಂತೆ ಸರ್ಕಾರದ ಮೇಲೆ ಈ ಆರೋಪ ಮಾಡಲಾಗುತ್ತಿದೆ. ದಾಖಲೆ ನೀಡಿ ಎಂದರೆ ನೀಡುವುದಿಲ್ಲ. ಆರೋಪ ಮಾಡುವುದು ಅತ್ಯಂತ ಸುಲಭ. ಕೆಂಪಣ್ಣ ಯಾರು, ಅವರಿಗೆ ಎಲ್ಲಿಂದ ಪ್ರಚೋದನೆ ನೀಡುತ್ತಿದ್ದಾರೆ ಎಂಬುದು ತಿಳಿಯಬೇಕಿದೆ. ಯಾವುದೇ ವಿಚಾರವನ್ನು ನ್ಯಾಯಾಂಗ ತನಿಖೆಗೆ ನೀಡಲು ಒಂದು ಮೂಲಭೂತ ಪ್ರಕರಣ ಇರಬೇಕು. ಒಂದು ನಿರ್ದಿಷ್ಟವಿಚಾರವೂ ಇರಬೇಕು. ಕೆಂಪಣ್ಣ ಆರೋಪದ ಹಿಂದಿನ ನಿರ್ದೇಶಕ ಯಾರೆಂಬುದು ಸದ್ಯದಲ್ಲೇ ಗೊತ್ತಾಗಲಿದೆ ಎಂದರು.
ಸ್ವಾತಂತ್ರ್ಯ ಕಳೆದುಕೊಂಡ ಕಾರಣದ ಅರಿವಿರಲಿ: ಸಿ.ಟಿ.ರವಿ
ಈ ಹಿಂದೆ ವೀರಶೈವ-ಲಿಂಗಾಯತ ಸಮುದಾಯವನ್ನು ಒಡೆಯಲು ಯತ್ನಿಸಿದ್ದರು. ಸುಮ್ಮನೆ ನ್ಯಾಯಾಂಗ ತನಿಖೆಗೆ ನೀಡಲು ಸಾಧ್ಯವಿಲ್ಲ. ಒಂದು ಹತ್ಯೆಯೇ ಆಗಿದ್ದರೆ, ಎಲ್ಲಿ, ಯಾರು ಮತ್ತು ಹೇಗೆ ಎಂಬುದು ಮುಖ್ಯವಾಗುತ್ತದೆ. ನಿರ್ದಿಷ್ಟವಾಗಿ ಪ್ರಕರಣ ಇದ್ದರೆ ಹೇಳಲಿ ಎಂದು ಸವಾಲು ಹಾಕಿದರು.
ಮದರಸಾ ಶಿಕ್ಷಣದ ಬಗ್ಗೆ ಮಾಹಿತಿ ಕೇಳುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಮಾಹಿತಿ ಕೇಳುವುದರಲ್ಲಿ ತಪ್ಪೇನಿದೆ? ಇವತ್ತು ತಾಲಿಬಾನ್ ಏನಾಗಿದೆ? ಶಿಕ್ಷಣ ಇಲಾಖೆ ಮದರಸಾ ಬಗ್ಗೆ ಗಮನ ನೀಡುವುದರಲ್ಲಿ ಏನು ತಪ್ಪಿದೆ ಎಂದು ಮರು ಪ್ರಶ್ನೆ ಹಾಕಿದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಮಾಡುವುದರಲ್ಲಿ ಏನು ತಪ್ಪಿದೆ? ಬಿಜೆಪಿ ಸರ್ಕಾರ ಇದ್ದಾಗ ಯಾಕೆ ಮಾಡಬಾರದು? ಹಬ್ಬ ಮಾಡುವವರು ಯಾರೂ ಬಾಂಬ್ ಹಾಕುವುದಿಲ್ಲ ಅಲ್ಲವೇ? ಹಬ್ಬ ಮಾಡುವವರು ಹೆಚ್ಚೆಂದರೆ ಗಣಪತಿ ಬಪ್ಪ ಮೋರೆಯಾ ಎಂದು ಕೂಗಬಹುದು. ಅಷ್ಟುಗ್ಯಾರಂಟಿ ನಾನು ಕೊಡಬಲ್ಲೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.