ಬೆಂಗಳೂರಿನ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕನ್ನಡಿಗ ಅಭ್ಯರ್ಥಿಗಳಿಗೆ ಶೇ.25 ರಷ್ಟು ಮೀಸಲಾತಿ ಪಡೆಯಲು ಸರ್ಕಾರ ಬದ್ಧ. ಈ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ಪ್ರಬಲವಾಗಿ ವಾದ ಮಂಡಿಸಲಿದ್ದು, ಅನಿವಾರ್ಯ ಪರಿಸ್ಥಿತಿ ಎದುರಾದರೆ ಯಾವುದೇ ಕ್ರಮಕ್ಕೂ ಸಿದ್ಧ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಮಾಧುಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ವಿಧಾನಸಭೆ (ಫೆ.22): ಬೆಂಗಳೂರಿನ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕನ್ನಡಿಗ ಅಭ್ಯರ್ಥಿಗಳಿಗೆ ಶೇ.25 ರಷ್ಟು ಮೀಸಲಾತಿ ಪಡೆಯಲು ಸರ್ಕಾರ ಬದ್ಧ. ಈ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ಪ್ರಬಲವಾಗಿ ವಾದ ಮಂಡಿಸಲಿದ್ದು, ಅನಿವಾರ್ಯ ಪರಿಸ್ಥಿತಿ ಎದುರಾದರೆ ಯಾವುದೇ ಕ್ರಮಕ್ಕೂ ಸಿದ್ಧ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಮಾಧುಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಮಂಗಳವಾರ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಎಸ್.ಸುರೇಶ್‌ಕುಮಾರ್ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ದೇಶದ ಎಲ್ಲಾ ಕಾನೂನು ವಿಶ್ವವಿದ್ಯಾಲಯಗಳು ಆಯಾ ರಾಜ್ಯಗಳ ವಿದ್ಯಾರ್ಥಿಗಳಿಗೆ ಮೀಸಲಾತಿ ನೀಡುತ್ತಿವೆ. ಬೆಂಗಳೂರಿನಲ್ಲಿರುವ ಈ ವಿಶ್ವವಿದ್ಯಾಲಯ ಮಾತ್ರ ಉಡಾಫೆ ತೋರುತ್ತಿದೆ. ಈ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಿದ್ದು, ಖ್ಯಾತ ವಕೀಲ ತುಷಾರ್ ಮೆಹ್ತಾ ಅವರಿಂದ ವಾದ ಮಂಡಿಸುತ್ತಿದ್ದೇವೆ. ಜತೆಗೆ ಸುಪ್ರೀಂ ಕೋರ್ಟ್ ಮುಖ್ಯ ನಾರ್ಯಮೂರ್ತಿಗಳೂ ಸಹ ರಾಜ್ಯದ ಪರ ಸಹಾನುಭೂತಿ ಮಾತುಗಳನ್ನು ಆಡಿದ್ದಾರೆ ಎಂದು ಹೇಳಿದರು.
ಮೇಲ್ಮನೆಯಲ್ಲಿ ಬ್ರಿಗೇಡ್ ಗ್ರೂಪ್ ಜಾಗ ಜಟಾಪಟಿ: ತನಿಖೆಗೆ ಮರಿತಿಬ್ಬೇಗೌಡ ಪಟ್ಟು
ಕಾಡ್ಗಿಚ್ಚಿಗೆ ಬಲಿಯಾದ ಸುಂದರೇಶ್ ಕುಟುಂಬಕ್ಕೆ 50 ಲಕ್ಷ ಪರಿಹಾರ: ಸಕಲೇಶಪುರ ಅರಣ್ಯದಲ್ಲಿ ಸಂಭವಿಸಿದ ಕಾಡ್ಗಿಚ್ಚಿನಿಂದಾಗಿ ಮೃತಪಟ್ಟಿರುವ ಅರಣ್ಯ ಕಾವಲುಗಾರ ಸುಂದರೇಶ್ ಅವರ ಕುಟುಂಬಕ್ಕೆ 50 ಲಕ್ಷ ರು. ಪರಿಹಾರ ನೀಡಲಾಗಿದೆ. ಜತೆಗೆ ಮೃತರ ಪತ್ನಿಗೆ ಸರ್ಕಾರಿ ಕೆಲಸ ನೀಡಲಾಗುವುದು ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಭರವಸೆ ನೀಡಿದ್ದಾರೆ.
ಶೂನ್ಯವೇಳೆಯಲ್ಲಿ ಜೆಡಿಎಸ್ ಸದಸ್ಯ ಎಚ್.ಕೆ. ಕುಮಾರಸ್ವಾಮಿ ಪ್ರಸ್ತಾಪಕ್ಕೆ ಮುಖ್ಯಮಂತ್ರಿಗಳ ಪರವಾಗಿ ಉತ್ತರಿಸಿದ ಅವರು, ಕಾಡ್ಗಿಚ್ಚಿನಿಂದ ಮೃತಪಟ್ಟಸುಂದರೇಶ್ ಕುಟುಂಬದ ಬೆಂಬಲಕ್ಕೆ ಸರ್ಕಾರ ನಿಂತಿದೆ. ಕಾಡಿನ ಬೆಂಕಿ ಅವಘಡಗಳಲ್ಲಿ ಮೃತಪಟ್ಟವರಿಗೆ ನೀಡುತ್ತಿದ್ದ 30 ಲಕ್ಷ ರು. ಪರಿಹಾರದ ಬದಲಿಗೆ 50 ಲಕ್ಷ ರು. ನೀಡಲಾಗಿದೆ. ಕಾಡ್ಗಿಚ್ಚಿನಲ್ಲಿ ಗಾಯಗೊಂಡ ಮತ್ತೊಬ್ಬರಿಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸಲಿದೆ ಎಂದರು.
ಇದಕ್ಕೂ ಮುನ್ನ ಮಾತನಾಡಿದ ಎಚ್.ಕೆ. ಕುಮಾರಸ್ವಾಮಿ, ಕಾಡ್ಗಿಚ್ಚಿನಲ್ಲಿ ಗಾರ್ಡ್ ಸುಂದರೇಶ್ ಮೃತಪಟ್ಟಿದ್ದರಿಂದ ಅವರ ಕುಟುಂಬ ತುಂಬಾ ಕಷ್ಟದಲ್ಲಿದೆ. ಜೊತೆಗೆ 5 ಜನರು ಗಾಯಗೊಂಡಿದ್ದು, ಈ ಪೈಕಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಹೆಚ್ಚಿನ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದರು.
ಮೇಲ್ಮನೆಯಲ್ಲಿ ಮಾತಿನ ಚಕಮಕಿ: ರಾಜ್ಯ ಗುತ್ತಿಗೆದಾರರ ಸಂಘ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಶೇ.40ರಷ್ಟುಕಮಿಷನ್ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿರುವ ವಿಚಾರ ಮೇಲ್ಮನೆಯಲ್ಲಿ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷದ ಸದಸ್ಯರ ನಡುವೆ ಮಾತಿನ ಚಕಮಕಿಗೆ ಕಾರಣವಾಯಿತು. ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯ ಚರ್ಚೆಗೆ ಮುಖ್ಯಮಂತ್ರಿ ಪರವಾಗಿ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ನೀಡಿದ ಉತ್ತರಕ್ಕೆ ಸ್ಪಷ್ಟನೆ ಕೇಳುವ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಅವರು ಈ ಶೇ.40ರ ಕಮಿಷನ್ ವಿಚಾರ ಪ್ರಸ್ತಾಪಿಸಿದರು.
ಏ.1ರಿಂದ ಸ್ತ್ರೀ ನೌಕರರಿಗೆ ಉಚಿತ ಬಸ್‌ಪಾಸ್: ಸಿಎಂ ಬೊಮ್ಮಾಯಿ ಸೂಚನೆ
ರಾಜ್ಯ ಗುತ್ತಿಗೆದಾರರ ಸಂಘ ರಾಜ್ಯ ಸರ್ಕಾರದ ವಿರುದ್ಧ ಶೇ.40ರಷ್ಟು ಕಮಿಷನ್ ಆರೋಪ ಮಾಡಿ ಪ್ರಧಾನ ಮಂತ್ರಿಗೆ ಪತ್ರ ಬರೆದಿದೆ. ಒಂದೂ ವರ್ಷ ಕಳೆದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಶೇ.40ರ ಕಮಿನಷ್‌ನಲ್ಲಿ ವಿಶ್ವಗುರುವಿಗೂ ಪಾಲು ಹೋಗಿದೆಯಾ ಎಂದು ಪ್ರಶ್ನಿಸಿದರು. ಪ್ರಧಾನಿ ಮೋದಿ ವಿಚಾರ ಪ್ರಸ್ತಾಪಿಸಿದ್ದಕ್ಕೆ ಆಡಳಿತ ಪಕ್ಷದ ಸದಸ್ಯರು ಹರಿಪ್ರಸಾದ್ ವಿರುದ್ಧ ಮುಗಿಬಿದ್ದರು. ಯಾರದೋ ಹೆಸರು ಹೇಳಿ ಆರೋಪ ಮಾಡಿದ ತಕ್ಷಣ ತನಿಖೆ ಮಾಡಲು ಸಾಧ್ಯವಿಲ್ಲ. ತಾಕತ್ ಇದ್ದರೆ, ಧಮ್ ಇದ್ದರೆ ಆರೋಪವನ್ನೂ ಸಾಬೀತುಪಡಿಸಬೇಕು. ವಿನಾಕಾರಣ ಪ್ರಧಾನಿ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದರು.