ಹೊಸ ತಾಲೂಕುಗಳಿಗೆ ಹಂತ-ಹಂತವಾಗಿ ಮೂಲಸೌಕರ್ಯ ಕಲ್ಪಿಸಲು ಬದ್ಧ: ಸಚಿವ ಕೃಷ್ಣ ಬೈರೇಗೌಡ

By Kannadaprabha News  |  First Published Jul 31, 2023, 11:59 PM IST

ರಾಜ್ಯದಲ್ಲಿ ಹೊಸದಾಗಿ ರಚಿಸಲಾಗಿರುವ 63 ತಾಲೂಕುಗಳಲ್ಲಿ ತಾಲೂಕು ಮಟ್ಟದ ಕಚೇರಿ ಪೈಕಿ 20 ತಾಲೂಕುಗಳಲ್ಲಿ ಮೂಲಸೌಕರ್ಯ ಕಲ್ಪಿಸಿದ್ದು, ಉಳಿದ ತಾಲೂಕುಗಳಲ್ಲಿ ಹಂತ-ಹಂತವಾಗಿ ಮೂಲಸೌಕರ್ಯ ಕಲ್ಪಿಸುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. 


ಕಲಬುರಗಿ (ಜು.31): ರಾಜ್ಯದಲ್ಲಿ ಹೊಸದಾಗಿ ರಚಿಸಲಾಗಿರುವ 63 ತಾಲೂಕುಗಳಲ್ಲಿ ತಾಲೂಕು ಮಟ್ಟದ ಕಚೇರಿ ಪೈಕಿ 20 ತಾಲೂಕುಗಳಲ್ಲಿ ಮೂಲಸೌಕರ್ಯ ಕಲ್ಪಿಸಿದ್ದು, ಉಳಿದ ತಾಲೂಕುಗಳಲ್ಲಿ ಹಂತ-ಹಂತವಾಗಿ ಮೂಲಸೌಕರ್ಯ ಕಲ್ಪಿಸುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಸೋಮವಾರ ಡಿ.ಸಿ.ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ನಂತರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ನೂತನ ತಾಲೂಕುಗಳಲ್ಲಿ ಆದ್ಯತೆ ಮೇಲೆ ಮೂಲಸೌಕರ್ಯ ನೀಡಲಾಗುವುದು ಎಂದರು.

ನೆರೆ ಹಾವಳಿ ಪರಿಹಾರಕ್ಕೆಂದೆ ಜಿಲ್ಲಾಧಿಕಾರಿಗಳ ಪಿ.ಡಿ.ಖಾತೆಗೆ 141 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಇನ್ನು ಧೀರ್ಘಾವಧಿ ಯೋಜನೆಗಳ ಸಾಕಾರಕ್ಕೆ 39 ಕೋಟಿ ರೂ. ಹಾಗೂ ಇನ್ನಿತರ ಕೆಲಸಗಳಿಗೆ 13 ಕೋಟಿ ರೂ. ಅನುದಾನ ಒದಗಿಸಲಾಗಿದೆ. ನೆರೆ ಹಾವಳಿ ಪರಿಹಾರ ಮತ್ತು ಮಳೆ ಹಾನಿಯಿಂದ ತ್ವರಿತ ರೀತಿಯಲ್ಲಿ ಕೆಲಸ ನಿರ್ವಹಿಸಲು ಯಾವುದೇ ಅನುದಾನ ಕೊರತೆಯಿಲ್ಲ. ಅವಶ್ಯಕತೆ ಇದ್ದಲ್ಲಿ ಇನ್ನೂ ಅನುದಾನ ನಿಡಲಾಗುವುದು ಎಂದರು. ಕಲಬುರಗಿ ವಿಭಾಗದಲ್ಲಿ ಪಹಣಿ ತಿದ್ದುಪಡಿ, ವರ್ಗಾವಣೆ, ಕಂದಾಯ ನ್ಯಾಯಲಯಗಳ ಪ್ರಕರಣಗಳು ಸೇರಿದಂತೆ ಒಟ್ಟು 1.50 ಲಕ್ಷ ಕೇಸ್ ಬಾಕಿ ಇವೆ. ಇದರಲ್ಲಿ ಶೇ.75ರಷ್ಟು ಕ್ಲಿಷ್ಟಕರ ಅಲ್ಲದ ಪ್ರಕರಣಗಳಿದ್ದು,  ಇವುಗಳನ್ನು ಮುಂದಿನ 3 ತಿಂಗಳಲ್ಲಿ ಅಭಿಯಾನದ ರೀತಿಯಲ್ಲಿ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ವಿವರಿಸಿದರು.

Tap to resize

Latest Videos

undefined

ಕಾಂಗ್ರೆಸ್‌ ಗ್ಯಾರಂಟಿಯಿಂದ ಕುಟುಂಬದ ಆರ್ಥಿಕ ಸ್ಥಿತಿ ಸದೃಢ: ಸಚಿವ ಚಲುವರಾಯಸ್ವಾಮಿ

ಹೊಸದಾಗಿ ಸಬ್ ರಿಜಿಸ್ಟ್ರಾರ್ ಕಚೇರಿ ಸ್ಥಾಪನೆಗೆ ಮಾಹಿತಿ ಸಂಗ್ರಹ: ರಾಜ್ಯದಲ್ಲಿ ಹೊಸದಾಗಿ ಸಬ್ ರಿಜಿಸ್ಟಾರ್ ಕಚೇರಿ ಸ್ಥಾಪನೆ ಸಂಬಂಧ ಪ್ರಸ್ತುತ ಇರುವ ಎಸ್.ಆರ್.ಓ. ಕಚೇರಿಯಲ್ಲಿ ದೈನಂದಿನ ವ್ಯವಹಾರಗಳ ಮಾಹಿತಿ ಕಲೆ ಹಾಕಲಾಗುತ್ತಿದೆ. 2 ತಿಂಗಳಿನಲ್ಲಿ ಮಾಹಿತಿ ಸಿಗಲಿದ್ದು, ತದನಂತರ ಹೆಚ್ಚಿನ ಕಾರ್ಯದೊತ್ತಡ ಇರುವ ತಾಲೂಕಿನಲ್ಲಿ ಹೊಸದಾಗಿ ಎಸ್.ಆರ್.ಓ. ಕಚೇರಿ ಸ್ಥಾಪಿಸಲು ನಿರ್ಧಾರ ಕೈಗೊಳ್ಳುವುದಾಗಿ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ.

ನೋಂದಣಿ ಸೋರಿಕೆ ತಡೆಗೆ ಕ್ರಮ: ಸಬ್ ರಿಜಿಸ್ಟಾರ್ ಕಚೇರಿಯಲ್ಲಿ ಆಸ್ತಿಗಳ ಮಾರಾಟ, ಒಪ್ಪಂದ ಪ್ರಕರಣದಲ್ಲಿ ನಿಗದಿತ ಮೌಲ್ಯಕ್ಕಿಂತ ಕಡಿಮೆ ಮೌಲ್ಯ ದಾಖಲಿಸಿ ಸರ್ಕಾರಕ್ಕೆ ಬರಬೇಕಾದ ಕಂದಾಯ ಸೋರಿಕೆಯಾಗುತ್ತಿರುವುದು ಗಮನಕ್ಕೆ ಬಂದಿದ್ದು, ಈ ಕುರಿತು ಪರಿಶೀಲನೆಗೆ ರಾಜ್ಯ ಲೆಕ್ಕಪತ್ರ ಇಲಾಖೆಯ ಅಧಿಕಾರಿಗಳ ತಂಡ ಸಬ್ ರಿಜಿಸ್ಟ್ರಾರ್ ಕಚೇರಿಗೆ ಕಳುಹಿಸಿ ತಪಾಸಣೆ ಮಾಡಲಾಗುತ್ತದೆ. ಈ ಮೂಲಕ ಸರ್ಕಾರಕ್ಕೆ ಆಗುತ್ತಿರುವ ನಷ್ಠ ತಪ್ಪಿಸಲಾಗುವುದು ಎಂದರು.

ನಗರಸಭೆಯ ಭ್ರಷ್ಟಾಚಾರ ಕ್ಲೀನ್‌ ಮಾಡುವೆ: ಶಾಸಕ ಪ್ರದೀಪ್‌ ಈಶ್ವರ್‌

ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಏಜೆಂಟ್ ಹಾವಳಿ ತಡೆಗೆ ಸರ್ಕಾರ ಮುಂದಾಗಬೇಕು ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ ಅವರು ಮೂರನೇ ವ್ಯಕ್ತಿ ಹಾವಳಿ ತಪ್ಪಿಸಲೆಂದೆ ಕಾವೇರಿ 2.0 ತಂತ್ರಾಂಶ ಜಾರಿಗೆ ತರಲಾಗಿದೆ. ಸಾರ್ವಜನಿಕರು ನೋಂದಣಿ ಮುನ್ನ ತಮ್ಮ ದಾಖಲೆಗಳನ್ನು ಆನ್‍ಲೈನ್ ಮೂಲಕ ಸಬ್ ರಜಿಸ್ಟಾರ್ ಕಚೇರಿಗೆ ಸಲ್ಲಿಸಿದಾಗ ಸದರಿ ದಾಖಲೆಗಳು ಸರಿಯಾಗಿವೆ ಅಥವಾ ಇಲ್ಲ ಎಂಬುದನ್ನು ಆನ್‍ಲೈನ್ ಮೂಲಕವೇ 3 ದಿನದಲ್ಲಿ ನೊಂದಣಿ ಕಚೇರಿಯಿಂದ ಅರ್ಜಿದಾರರಿಗೆ ಮಾಹಿತಿ ನೀಡಲಾಗುತ್ತದೆ. ನಂತರ ಅರ್ಜಿದಾರ ನಿಗದಿತ ಶುಲ್ಕ ಪಾವತಿಸಿ ನೋಂದಣಿಗೆ ದಿನಾಂಕ ಮತ್ತು ಸಮಯ ಅರ್ಜಿದಾರನೇ ನಿಗದಿಗೊಳಿಸಲು ಅವಕಾಶ ನೀಡಲಾಗಿದೆ ಎಂದರು.

click me!