
ಮೈಸೂರು, (ಮೇ.29) : ವಿಧಾನಪರಿಷತ್ ಸದಸ್ಯರ ಆಯ್ಕೆ ವಿಷಯವನ್ನು ಸಚಿವ ಸಂಪುಟ ಸದಸ್ಯರೆಲ್ಲರೂ ಸೇರಿ ಮುಖ್ಯಮಂತ್ರಿಗಳ ಪರಮಾಧಿಕಾರಕ್ಕೆ ಬಿಟ್ಟಿದ್ದೇವೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಸ್ಪಷ್ಟಪಡಿಸಿದರು.
ಪಿರಿಯಾಪಟ್ಟಣ ತಾಲೂಕಿನ ಚಿಕ್ಕಹೊಸೂರು ಗ್ರಾಮ ಹಾಗೂ ಸುತ್ತಲಿನ 15 ಗ್ರಾಮಗಳಿಗೆ ಕಾವೇರಿ ನದಿ ಮೂಲದಿಂದ ಬಹುಗ್ರಾಮ ಕುಡಿಯುವ ನೀರಿನ ಯೋಜನಾ ಘಟಕಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೆಲವು ಸ್ಥಾನಗಳಿಗೆ ಚುನಾವಣೆಗಳು ಆಗಬೇಕಿದೆ. ಒಟ್ಟು 16 ಸ್ಥಾನಗಳಿಗೆ ಆಯ್ಕೆಯಾಗಬೇಕಿದ್ದು ಅದನ್ನು ಯಡಿಯೂರಪ್ಪನವರ ಪರಮಾಧಿಕಾರಕ್ಕೆ ಬಿಟ್ಟಿದ್ದೇವೆ ಎಂದು ತಿಳಿಸಿದರು.
ಮತ್ತೆ ರಾಜ್ಯ ರಾಜಕಾರಣಕ್ಕೆ ಜನಾರ್ಧನ ರೆಡ್ಡಿ? ಅಚ್ಚರಿಗೆ ಕಾರಣವಾಯ್ತು ಗಣಿ ಧಣಿ ನಡೆ
ಮೈಸೂರಿನ ಬಿಜೆಪಿ ಪ್ರಮುಖ ನಾಯಕರು ಹಾಗೂ ಮಾಜಿ ಸಚಿವರಾದ ಎಚ್. ವಿಶ್ವನಾಥ್ ಸೇರಿದಂತೆ, ಎಂಟಿಬಿ ನಾಗರಾಜ್, ಜಿ.ಶಂಕರ್ ಎಲ್ಲರ ಬಗ್ಗೆಯೂ ಸ್ಥಾನ ನೀಡುವಂತೆ ನಾನು ಹಾಗೂ ಗೆಳೆಯರು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇವೆ. ಆದರೆ, ಅವರ ನಿರ್ಧಾರವೇ ಅಂತಿಮ. ಸಾಮಾಜಿಕ, ವಿಜ್ಞಾನ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದವರಿಗೂ ಸ್ಥಾನ ದೊರೆಯಲಿದೆ ಎಂದರು.
ಪಕ್ಷದಲ್ಲಿ ಯಾವುದೇ ಒಡಕಿಲ್ಲ
ಆಯಾ ಜಿಲ್ಲೆಗಳಲ್ಲಿ ಪಕ್ಷಕ್ಕೆ ದುಡಿದವರು ಪರಿಷತ್ತಿನ ಸ್ಥಾನಕ್ಕಾಗಿ ಲಾಬಿ ಮಾಡುವುದು ಸಹಜ. ಪಕ್ಷದಲ್ಲಿ ಒಂದೇ ಒಂದು ಪರ್ಸೆಂಟ್ ಸಹ ಒಡಕಿಲ್ಲ. ಮುಖ್ಯಮಂತ್ರಿಗಳು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಿಸುತ್ತಿದ್ದಾರೆ. ಅವರು ಅಂತಿಮವಾಗಿ ಯಾರಿಗೆ ಸ್ಥಾನ ನೀಡಬೇಕೆಂದು ನಿರ್ಧರಿಸುತ್ತಾರೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.