ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ಗೆ ದಿಲ್ಲಿಯಲ್ಲಿ ಕಸರತ್ತು..!

By Girish Goudar  |  First Published Sep 21, 2023, 9:20 PM IST

ಲೋಕಸಭಾ ಕ್ಷೇತ್ರದ ಟಿಕೆಟ್‌ಗಾಗಿ ಕುಷ್ಟಗಿ ಮಾಜಿ ಶಾಸಕ ಅಮರೇಗೌಡ ಭಯ್ಯಾಪುರ, ಹಿಟ್ನಾಳ್ ಕುಟುಂಬ ತೀವ್ರ ಪೈಪೋಟಿ ನಡೆಸಿವೆ. ಸಿಎಂ ಸಿದ್ದರಾಮಯ್ಯ ದೆಹಲಿ ಭೇಟಿಯ ವೇಳೆ ಶಾಸಕ ರಾಘವೇಂದ್ರ ಹಿಟ್ನಾಳ, ಮಾಜಿ ಜಿಲ್ಲಾ ಪಂಚಾಯತಿ ಅಧ್ಯಕ್ಷ ರಾಜಶೇಖರ್ ನಾಯಕರನ್ನ ಭೇಟಿಯಾಗಿದ್ದಾರೆ. 

ಕೊಪ್ಪಳ(ಸೆ.21):  ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಭಾರೀ ಕಸರತ್ತು ನಡೆಯುತ್ತಿದೆ. ಹೌದು, ಟಿಕೆಟ್‌ಗಾಗಿ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ, ಮಾಜಿ ಜಿಲ್ಲಾ ಪಂಚಾಯತಿ ಅಧ್ಯಕ್ಷ ರಾಜಶೇಖರ್ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. 

ಲೋಕಸಭಾ ಕ್ಷೇತ್ರದ ಟಿಕೆಟ್‌ಗಾಗಿ ಕುಷ್ಟಗಿ ಮಾಜಿ ಶಾಸಕ ಅಮರೇಗೌಡ ಭಯ್ಯಾಪುರ, ಹಿಟ್ನಾಳ್ ಕುಟುಂಬ ತೀವ್ರ ಪೈಪೋಟಿ ನಡೆಸಿವೆ. ಸಿಎಂ ಸಿದ್ದರಾಮಯ್ಯ ದೆಹಲಿ ಭೇಟಿಯ ವೇಳೆ ಶಾಸಕ ರಾಘವೇಂದ್ರ ಹಿಟ್ನಾಳ, ಮಾಜಿ ಜಿಲ್ಲಾ ಪಂಚಾಯತಿ ಅಧ್ಯಕ್ಷ ರಾಜಶೇಖರ್ ನಾಯಕರನ್ನ ಭೇಟಿಯಾಗಿದ್ದಾರೆ. 

Tap to resize

Latest Videos

undefined

ಸನಾತನ ಧರ್ಮದ ಬಗ್ಗೆ ಕೆಲವರಿಗೆ ಸರಿಯಾಗಿ ಗೊತ್ತಿಲ್ಲ: ರಾಯರೆಡ್ಡಿ

ಸಿಎಂ ಮೂಲಕ ದಿಲ್ಲಿ ನಾಯಕರಿಗೆ ಹಿಟ್ನಾಳ ಸೋದರರು ಒತ್ತಡ ಹಾಕುತ್ತಿದ್ದಾರೆ. ಕಳೆದ ಲೋಕಸಭಾ ಚುನಾವಣೆದಲ್ಲಿ ಕೆ.ರಾಜಶೇಖರ್ ಹಿಟ್ನಾಳ ಪರಾಭವ ಹೊಂದಿದ್ದರು. 

ಈ ಬಾರಿಯ ಟಿಕೆಟ್‌ಗಾಗಿ ಅಮರೇಗೌಡ ಭಯ್ಯಾಪುರ, ಹಿಟ್ನಾಳ ಕುಟುಂಬದ ಮಧ್ಯೆ ಭಾರೀ ಪೈಪೋಟಿ ಆರಂಭವಾಗಿದೆ. ಲೋಕಸಭೆ ಚುನಾವಣೆ ಇನ್ನೂ ಎಂಟು ತಿಂಗಳ ಬಾಕಿ ಇರುವಾಗಲೇ ಟಿಕೆಟ್‌ಗಾಗಿ ತೀವ್ರ ಕಸರತ್ತು ನಡೆಯುತ್ತಿದೆ. ಯಾರಿಗೆ ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಅನ್ನೋದು ಭಾರೀ ಕುತೂಹಲ ಕೆರಳಿಸಿದೆ. ಇದಕ್ಕೆಲ್ಲಾ ಕಾಲವೇ ಉತ್ತರ ನೀಡಬೇಕಿದೆ. 

click me!