
ನವದೆಹಲಿ(ಮಾ. 31) ಸಚಿವ ಸ್ಥಾನ ಹಂಚಿಕೆ ವೇಳೆ, ಸಂಪುಟ ವಿಸ್ತರಣೆ ವೇಳೆ ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದಿತ್ತು. ಇದೀಗ ಹಿರಿಯ ಸಚಿವರೊಬ್ಬರು ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧವೇ ಹೈಕಮಾಂಡ್ ಗೆ ದೂರು ಸಲ್ಲಿಸಿರುವ ಸುದ್ದಿ ಸ್ಫೋಟವಾಗಿದೆ.
ಯಡಿಯೂರಪ್ಪ ವಿರುದ್ಧ ಪಕ್ಷದ ಉಸ್ತುವಾರಿ ಅರುಣ್ ಸಿಂಗ್ ಗೆ ಸಚಿವ ಕೆಎಸ್ ಈಶ್ವರಪ್ಪದೂರು ನೀಡಿದ ನಂತರ ಕಾಂಗ್ರೆಸ್ ಸಹ ಈ ವಿಚಾರದಲ್ಲಿ ಪ್ರತಿಕ್ರಿಯೆ ನೀಡಿದೆ.
ಗೆಳೆಯನ ವಿರುದ್ಧ ಈಶ್ವರಪ್ಪ ದೂರು ಕೊಡಲು ಕಾರಣವೇನು?
ಕಳೆದ ಒಂದೂವರೆ ವರ್ಷದಿಂದ ನಾನು ಗ್ರಾಮೀಣಾಭಿವೃದ್ಧಿ ಮಂತ್ರಿ ಆಗಿ ಕೆಲಸ ಮಾಡುತ್ತಿದ್ದೇನೆ. ಒಂದೂವರೆ ವರ್ಷದಿಂದಲೂ ಮುಖ್ಯಮಂತ್ರಿಗಳೇ ನನ್ನ ಗಮನಕ್ಕೆ ತರದೆ, ಇಲಾಖೆಯ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಈಶ್ವರಪ್ಪ ಉಲ್ಲೇಖಿಸಿದ್ದರು.
ಕಾಂಗ್ರೆಸ್ ಏನು ಹೇಳುತ್ತಿತ್ತೋ ಅದೇ ವಿಚಾರವನ್ನು ಯಡಿಯೂರಪ್ಪ ಸಂಪುಟದ ಸಚಿವರೇ ಹೇಳಿದ್ದಾರೆ. ಕಳ್ಳತನದ ದಾರಿಯಲ್ಲಿ ಅಧಿಕಾರ ಹಿಡಿದಿರುವ ಸರ್ಕಾರ ಇದೆ. ಭ್ರಷ್ಟಾಚಾರದ ಕೂಪವಾಗಿರುವ ಆಡಳಿತವನ್ನು ಒಬ್ಬರೇ ವ್ಯಕ್ತಿ ನಿಯಂತ್ರಣ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣ್ ದೀಪ್ ಸುರ್ಜೇವಾಲಾ ಆರೋಪಿಸಿದ್ದಾರೆ.
ಈಶ್ವರಪ್ಪ ಬರೆದ ಪತ್ರ ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾದರೆ ಅಚ್ಚರಿ ಇಲ್ಲ. ಬಿಜೆಪಿಯಲ್ಲಿ ಎಲ್ಲವೂ ಸರಿ ಇಲ್ಲ ಎಂಬ ಮಾತುಗಳು ಕೇಳಿಬರುತ್ತಿದ್ದು ಈಗ ಒಂದು ಹಂತ ಮುಂದಕ್ಕೆ ಹೋಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.