
ಮಂಗಳೂರು, (ಜೂನ್.18): ಖಾಸಗಿ ನರ್ಸಿಂಗ್ ಹೋಮ್ಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಾಜಿ ಸಚಿವ ಎಚ್.ಡಿ ರೇವಣ್ಣ ವಿರುದ್ಧ ದೂರು ದಾಖಲಾಗಿದೆ.
ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಐ.ಎಂ.ಎ ಡಾ.ಗಣೇಶ್ ಪ್ರಸಾದ್ ದೂರು ನೀಡಿದ್ದಾರೆ. ಹಾಸನ ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆಗಳಿಂದ ದಂದೆ ನಡೆಯುತ್ತಿದೆ. ಸುಲಿಗೆ ನಿಲ್ಲಿಸದಿದ್ದರೆ ಜನರಿಗೆ ಹೇಳಿ ಹೊಡೆಸುತ್ತೇನೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿಕೆ ಕೊಟ್ಟಿದ್ದರು.
ಬೇಡಿಕೆ ಮುಂದಿಟ್ಟುಕೊಂಡು ಹಳೇ ಸ್ನೇಹಿತ ಸಚಿವ ಬೊಮ್ಮಾಯಿ ಭೇಟಿ ಮಾಡಿದ ರೇವಣ್ಣ
ಅವರ ಹೇಳಿಕೆಯ ಆಧಾರದ ಮೇಲೆ ನರ್ಸಿಂಗ್ ಹೋಮ್ ಗಳ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಟೌನ್ ಪೊಲೀಸ್ ಠಾಣೆ ದೂರು ನೀಡಲಾಗಿದ್ದು, ರೇವಣ್ಣ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ಒತ್ತಾಯಿಸಿದ್ದಾರೆ.
ಖಾಸಗಿ ನರ್ಸಿಂಗ್ ಹೋಮ್ಗಳು ಕೊವಿಡ್ನ ಸಂಕಷ್ಟದ ಕಾಲದಲ್ಲಿ ಜನರ ಸುಲಿಗೆ ಮಾಡುತ್ತಿವೆ. ಖಾಸಗಿ ನರ್ಸಿಂಗ್ ಹೋಮ್ಗಳು ಸುಲಿಗೆ ನಡೆಸುವುದನ್ನು ನಿಲ್ಲಿಸದಿದ್ದರೆ ಜನರನ್ನು ಕಳಿಸಿ ಹೊಡೆಸುತ್ತೇವೆ ಎಂದು ರೇವಣ್ಣ ಹೇಳಿದ್ದರು. ಇದು ವಿವಾದದ ಸ್ವರೂಪ ಪಡೆದುಕೊಂಡಿತ್ತು .
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.