
ಬೆಂಗಳೂರು, (ಮಾ.19): ರಮೇಶ್ ಜಾರಕಿಹೊಳಿ ರಾಸಲೀಲೆ ಸಿ.ಡಿ. ಪ್ರಕರಣವನ್ನು ಈಗಾಗಲೇ ಎಸ್‌ಐಟಿ ತನಿಖೆ ನಡೆಸುತ್ತಿದೆ. ಮತ್ತೊಂದೆಡೆ ರಾಜಕೀಯ ನಾಯಕರ ನಡುವೆ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ.
ಇನ್ನು ಮಾಜಿ ಸಚಿವರ ರಾಸಲೀಲೆ ಸಿ.ಡಿ ಪ್ರಕರಣದಲ್ಲಿ 5 ಕೋಟಿ ರೂ. ಡೀಲ್ ಆಗಿದೆ ಎಂದಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ತನಿಖೆ ನಡೆಸುವಂತೆ ಎಸಿಬಿಗೆ ದೂರು ದಾಖಲಿಸಲಾಗಿದೆ.
'ಜಾರಕಿಹೊಳಿ ರಾಸಲೀಲೆಯಲ್ಲಿ ದೊಡ್ಡ ದೊಡ್ಡವರ ಕೈವಾಡ, 5 ಕೋಟಿ ಡೀಲ್ '
ಹೌದು... ಮಾಜಿ ಸಚಿವ ಹಾಗೂ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ವಕೀಲ ಮಂಜುನಾಥ್ ಹಾಗೂ ಸಿದ್ದೇಶ್ ಎಂಬುವವರು ದೂರು ನೀಡಿದ್ದಾರೆ. 5 ಕೋಟಿ ಹಣದ ವ್ಯವಹಾರ ಗೊತ್ತಿದ್ರೂ ಸದನದಲ್ಲಿ ಪ್ರಸ್ತಾಪಿಸಿಲ್ಲ. ಯಾವುದೇ ತನಿಖಾ ಸಂಸ್ಥೆಗೆ ಮಾಹಿತಿ ನೀಡಿಲ್ಲ. ಕೇವಲ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ಮಾಜಿ ಸಚಿವರ ಇಷ್ಟೊಂದು ದೊಡ್ಡ ಹಣದ ಮೂಲವೇನು.? ಈ ಹಣವನ್ನ ಯಾರು ಯಾರಿಗೆ ಹೇಗೆ ನೀಡಿದ್ದಾರೆ..? ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳಲು ದೂರಿನಲ್ಲಿ ಮನವಿ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.