ಸರ್ಕಾರಿ ಜಾಗ ಒತ್ತುವರಿ ಪತ್ತೆಗೆ 'ಲ್ಯಾಂಡ್‌ ಆಡಿಟ್‌' ನಡೆಸಿ: ಸಿಎಂ ಸಿದ್ದರಾಮಯ್ಯ

Published : Sep 20, 2023, 08:59 AM IST
ಸರ್ಕಾರಿ ಜಾಗ ಒತ್ತುವರಿ ಪತ್ತೆಗೆ 'ಲ್ಯಾಂಡ್‌ ಆಡಿಟ್‌' ನಡೆಸಿ: ಸಿಎಂ ಸಿದ್ದರಾಮಯ್ಯ

ಸಾರಾಂಶ

ನಗರದ ಸುತ್ತಮುತ್ತ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಸ್ವಾಧೀನ ಮಾಡಿಕೊಂಡಿರುವುದನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಲು "ಲ್ಯಾಂಡ್‌ ಆಡಿಟ್‌" ನಡೆಸಿ ಎಂದು ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. 

ಬೆಂಗಳೂರು (ಸೆ.20): ನಗರದ ಸುತ್ತಮುತ್ತ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಸ್ವಾಧೀನ ಮಾಡಿಕೊಂಡಿರುವುದನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಲು "ಲ್ಯಾಂಡ್‌ ಆಡಿಟ್‌" ನಡೆಸಿ ಎಂದು ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ನಗರದ ನೂರು ಕಿ.ಮೀ. ವ್ಯಾಪ್ತಿಯಲ್ಲಿ ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡು ರೆಸಾರ್ಟ್‌, ಸ್ಟೇ ಹೋಂಗಳನ್ನು ನಿರ್ಮಿಸಿರುವ ಬಗ್ಗೆ ದೂರುಗಳು ದಾಖಲಾಗಿವೆ. ನಗರದ ಸುತ್ತಮುತ್ತ ಸುಮಾರು 72 ಸಾವಿರ ಎಕರೆ ಭೂಮಿ ಒತ್ತುವರಿಯಾಗಿದೆ. 

ಐದಾರು ಸಾವಿರ ಎಕರೆ ಭೂಮಿಯನ್ನು ರೆಸಾರ್ಟ್‌ಗಳು ಕಾನೂನು ಬಾಹಿರವಾಗಿ ಸ್ವಾಧೀನಪಡಿಸಿಕೊಂಡಿವೆ ಎಂದು ದೂರು ಬಂದ ಹಿನ್ನೆಲೆಯಲ್ಲಿ ಲ್ಯಾಂಡ್‌ ಆಡಿಟ್‌ (ಭೂಮಿ ಲೆಕ್ಕ ಪರಿಶೋಧನೆ)ಗೆ ಸೂಚನೆ ನೀಡಲಾಗಿದೆ. ಇದಕ್ಕೂ ಮುನ್ನ ಕೆಪಿಸಿಸಿ ವಕ್ತಾರ ರಮೇಶ್‌ ಬಾಬು ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದು, ನಗರದ ಸುತ್ತಮುತ್ತ ಭೂಮಿಯ ಬೆಲೆ ಬಹಳಷ್ಟಿದೆ. ಕೆಲವರು ವಾಣಿಜ್ಯ ಉದ್ದೇಶಕ್ಕೆ ಮತ್ತು ವೈಯಕ್ತಿಕ ಲಾಭಕ್ಕಾಗಿ ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡು ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದಾರೆ. 

Hassan: ಎಣ್ಣೆ ಕುಡಿಯುವ ಬೆಟ್ ಕಟ್ಟಿ ಯಮರಾಜನ ಫ್ಲೈಟ್‌ ಹತ್ತಿದ ವ್ಯಕ್ತಿ!

ನಗರದ ಸುತ್ತಮುತ್ತ ಸಾವಿರಕ್ಕೂ ಅಧಿಕ ರೆಸಾರ್ಟ್‌, ಸ್ಟೇ ಹೋಂಗಳು ತಲೆಎತ್ತಿದ್ದು ಬಹುತೇಕರು ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಗಮನ ಸೆಳೆದಿದ್ದರು. ಸರ್ಕಾರ ಒತ್ತುವರಿ ತೆರವುಗೊಳಿಸಿ ವಶಕ್ಕೆ ಪಡೆದು ಬಹಿರಂಗ ಹರಾಜು ಹಾಕಿದರೆ ಸಾವಿರಾರು ಕೋಟಿ ರುಪಾಯಿ ಆದಾಯ ಬರಲಿದೆ. ಆದ್ದರಿಂದ ಲ್ಯಾಂಡ್‌ ಆಡಿಟ್‌ ನಡೆಸಬೇಕು ಎಂದು ರಮೇಶ್‌ ಬಾಬು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲು ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.

ನಟ ಪ್ರಕಾಶ್ ರಾಜ್‌ಗೆ ಜೀವ ಬೆದರಿಕೆ ಹಾಕಿದ ಯೂಟ್ಯೂಬ್​ ವಾಹಿನಿ ವಿರುದ್ಧ ಎಫ್​ಐಆರ್‌: ಆರೋಪ ಏನು?

ವಿಶ್ವಕರ್ಮ ಅಧ್ಯಯನ ಕೇಂದ್ರ ಸ್ಥಾಪನೆಗೆ ಕ್ರಮ: ರಾಜ್ಯದಲ್ಲಿ ವಿಶ್ವಕರ್ಮ ಅಧ್ಯಯನ ಕೇಂದ್ರ ಸ್ಥಾಪನೆ ಮಾಡಲು ಕ್ರಮ ವಹಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಕನ್ನಡ ಮತ್ತು ಸಂಸ್ಕಂತಿ ಇಲಾಖೆ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಭಾನುವಾರ ಆಯೋಜಿಸಿದ್ದ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿಂದುಳಿದವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ಇರಬೇಕಾಗುತ್ತದೆ. ಕರಕುಶಲಕರ್ಮಿಗಳಿಗೆ ಇಲಾಖೆ ರಚಿಸಬೇಕು ಎಂಬ ಬೇಡಿಕೆಯ ಬಗ್ಗೆ ಪರಿಶೀಲನೆ ಮಾಡಲಾಗುವುದು. ನೇಕಾರರಿಗೆ ಇರುವ ಸೌಲಭ್ಯಗಳ ಮಾದರಿಯಲ್ಲಿ ವಿಶ್ವಕರ್ಮ ಸಮುದಾಯಗಳಿಗೂ ಅಗತ್ಯ ಸೌಲಭ್ಯಗಳನ್ನು ಒದಗಿಸುವುದು ಹಾಗೂ ವಿಶ್ವಕರ್ಮ ಅಭಿವೃದ್ಧಿ ನಿಗಮಕ್ಕೆ ಹೆಚ್ಚಿನ ಅನುದಾನ ನೀಡುವುದು, ವಿಶ್ವಕರ್ಮ ಅಧ್ಯಯನ ಕೇಂದ್ರ ಸ್ಥಾಪಿಸಬೇಕೆಂಬ ಸಮುದಾಯದ ಬೇಡಿಕೆ ಈಡೇರಿಸುವ ಸಂಬಂಧ ಅಗತ್ಯ ಕ್ರಮ ವಹಿಸುವುದಾಗಿ ಭರವಸೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!