ಸಿದ್ದರಾಮಯ್ಯರನ್ನು ಗೆಲ್ಲಿಸಲು ಬಿಜೆಪಿ ಅನುಕೂಲ ಮಾಡಿ ಕೊಡುತ್ತಿದೆ. ಅದಕ್ಕಾಗೇ ಬಿಜೆಪಿಯಲ್ಲಿ ಸಮರ್ಥ ಅಭ್ಯರ್ಥಿ ಹಾಕುತ್ತಿಲ್ಲ. ಬಿಜೆಪಿ-ಜೆಡಿಎಸ್ ಒಳ ಒಪ್ಪಂದವಲ್ಲ, ಕಾಂಗ್ರೆಸ್-ಬಿಜೆಪಿ ಒಳ ಒಪ್ಪಂದ ಆಗಿದೆ. ಜೆಡಿಎಸ್ 123 ಸ್ಥಾನ ಗೆಲ್ಲಲು ಹೋರಾಟ ಮಾಡಿಕೊಂಡು ಬರುತ್ತಿದೆ: ಎಚ್.ಡಿ.ಕುಮಾರಸ್ವಾಮಿ
ಪಿರಿಯಾಪಟ್ಟಣ(ಏ.07): ವರುಣ ಕ್ಷೇತ್ರದಲ್ಲಿ ಕಾಂಗ್ರೆಸ್-ಬಿಜೆಪಿ ಮೈತ್ರಿ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದರು. ಪಿರಿಯಾಪಟ್ಟಣ ತಾಲೂಕಿನ ಕಂಪಲಾಪುರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯರನ್ನು ಗೆಲ್ಲಿಸಲು ಬಿಜೆಪಿ ಅನುಕೂಲ ಮಾಡಿ ಕೊಡುತ್ತಿದೆ. ಅದಕ್ಕಾಗೇ ಬಿಜೆಪಿಯಲ್ಲಿ ಸಮರ್ಥ ಅಭ್ಯರ್ಥಿ ಹಾಕುತ್ತಿಲ್ಲ. ಬಿಜೆಪಿ-ಜೆಡಿಎಸ್ ಒಳ ಒಪ್ಪಂದವಲ್ಲ, ಕಾಂಗ್ರೆಸ್-ಬಿಜೆಪಿ ಒಳ ಒಪ್ಪಂದ ಆಗಿದೆ. ಜೆಡಿಎಸ್ 123 ಸ್ಥಾನ ಗೆಲ್ಲಲು ಹೋರಾಟ ಮಾಡಿಕೊಂಡು ಬರುತ್ತಿದೆ ಎಂದರು.
ಹಾಸನ ಟಿಕೆಟ್:
undefined
ಹಾಸನ ಟಿಕೆಟ್ ಪಕ್ಷದ ಕಾರ್ಯಕರ್ತನಿಗೆ ಕೊಡೋದು ಎಂದು ಮೊದಲೇ ಹೇಳಿದ್ದೇನೆ. ನಮ್ಮ ಕುಟುಂಬದಿಂದ ಯಾರೂ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಮೋದಿಯಂಥ ಸ್ಟಾರ್ ನಟರೇ ಅಟ್ರ್ಯಾಕ್ಷನ್ ಮಾಡೋಕೆ ಆಗ್ತಿಲ್ಲ; ಸುದೀಪ್, ಪವನ್ ಕಲ್ಯಾಣ್ ಏನು ಮಾಡ್ತಾರೆ?: ಎಚ್‌ಡಿಕೆ ಲೇವಡಿ
ಅನಿತಾ ಸ್ಪರ್ಧೆ ಇಲ್ಲ:
ಭವಾನಿಗೆ ಟಿಕೆಟ್ ಕೊಟ್ಟರೆ ಅನಿತಾ ಕುಮಾರಸ್ವಾಮಿ ಸ್ಪರ್ಧಿಸುತ್ತಾರೆಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅನಿತಾ ಕುಮಾರಸ್ವಾಮಿ ಸ್ಪರ್ಧೆ ಪ್ರಶ್ನೆಯೇ ಇಲ್ಲ. ಎರಡು ಬಾರಿ ಪಕ್ಷ ದಲ್ಲಿ ಅಭ್ಯರ್ಥಿ ಇಲ್ಲದಕ್ಕೆ ಅನಿವಾರ್ಯವಾಗಿ ಅವರು ಸ್ಪರ್ಧೆ ಮಾಡಿದ್ದರು. ಪಕ್ಷ ಸಂಘಟನೆಗೆ ಬೇಕಾದ್ರೆ ಹೋಗಿ ಬರುತ್ತಾರೆ ಎಂದರು.
ದತ್ತಾ ಬಗ್ಗೆ ಮಾತಾಡಲ್ಲ:
ವೈಎಸ್‌ವಿ ದತ್ತಾಗೆ ಕಾಂಗ್ರೆಸ್ ಟಿಕೆಟ್ ತಪ್ಪಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅವರು, ದತ್ತಾ ನಮ್ಮ ಪಕ್ಷ ಬಿಟ್ಟು ಹೋಗಿದ್ದಾರೆ. ಅವರು ಯಾಕೆ ಟಿಕೆಟ್ ಮಿಸ್ ಮಾಡಿ ಕೊಂಡರೋ ಗೊತ್ತಿಲ್ಲ. ಅವರ ಬಗ್ಗೆ ನಾನು ಮಾತನಾಡಲ್ಲ ಎಂದರು.