ಹಿಂದೂ ಹುಲಿ ಯತ್ನಾಳ್‌, ಸೋಲಿಸಲು ಒಂದಾದ ಕೈ-ದಳದ ಮುಸ್ಲಿಂ ಅಭ್ಯರ್ಥಿಗಳು: ಕುಮಾರಣ್ಣಂಗೆ ಶಾಕ್‌!

By Sathish Kumar KH  |  First Published Apr 30, 2023, 4:21 PM IST

ವಿಜಯಪುರ ನಗರ ವಿಧಾನಸಭಾ ಕ್ಷೇತ್ರದಲ್ಲಿ ಹಿಂದೂ ಹುಲಿ ಎಂದು ಹೇಳುವ ಬಸವನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು ಸೋಲಿಸಲು ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮುಸ್ಲಿಂ ಪಕ್ಷಬೇಧವನ್ನು ಬಿಟ್ಟು ಅಭ್ಯರ್ಥಿಗಳು ಒಂದಾಗಿದ್ದಾರೆ. 


ವಿಜಯಪುರ (ಏ.30): ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಸ್ವತಂತ್ರ ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ಭಾರಿ ಕಸರತ್ತು ಮಾಡುತ್ತಿವೆ. ಆದರೆ, ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ತನಗೆ ಬಿ-ಫಾರಂ ಕೊಟ್ಟ ಹೈಕಮಾಂಡ್‌ಗೆ ಮಾಹಿತಿಯನ್ನೇ ತಿಳಿಸಿದೆ ಎದುರಾಳಿ ಅಭ್ಯರ್ಥಿಗೆ ಬೆಂಬಲ ಸೂಚಿಸಿದ ಅಚ್ಚರಿಯ ಘಟನೆ ನಡೆದಿದೆ. ಈ ಮೂಲಕ ಹಿಂದೂ ಅಭ್ಯರ್ಥಿ ಯತ್ನಾಳ್‌ ಅವರನ್ನು ಸೋಲಿಸಲು ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮುಸ್ಲಿಂ ಅಭ್ಯರ್ಥಿಗಳು ಒಂದಾಗಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. 

ಹೌದು, ಹೀಗೆ ಮತದಾನಕ್ಕೂ ಮುನ್ನವೇ ಶಸ್ತ್ರತ್ಯಾಗ ಮಾಡಿ, ಶತ್ರುವಿನ ಶತ್ರು ಮಿತ್ರ ಎನ್ನುವಂತೆ ನಡೆದುಕೊಂಡ ಜೆಡಿಎಸ್‌ನ ಅಭ್ಯರ್ಥಿ ಬಂದೇನವಾಜ್‌ ಮೆಹಬರಿ ಆಗಿದ್ದಾರೆ. ಇವರು ವಿಜಯಪುರದಲ್ಲಿ ಧರ್ಮಾಧಾರಿತ ಚುನಾವಣೆ ನಡೆಯುತ್ತಿದ್ದು, ಹಿಂದು- ಮುಸ್ಲಿಂ ನಡುವೆ ನೇರ ಪೈಪೋಟಿಯಿದೆ. ನಾನು ಜೆಡಿಎಸ್‌ನಿಂದ ಸ್ಪರ್ಧೆ ಮಾಡಿ ಪ್ರಚಾರ ಮಾಡಿದರೂ ಬೆಂಬಲ ಸಿಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ನಾನು ಸ್ಪರ್ಧೆಯಿಂದ ಹಿಂದೆ ಸರಿದು ನಮ್ಮ ಧರ್ಮದ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಸೂಚಿಸುತ್ತೇನೆ ಎಂದು ಸ್ವತಃ ಅಭ್ಯರ್ಥಿ ಮಹಾಬರಿ ಹೇಳಿಕೊಂಡಿದ್ದಾರೆ.

Tap to resize

Latest Videos

ತಮಿಳುನಾಡಿನವರು ಕನ್ನಡಿಗರ ಮೇಲೆ ಸವಾರಿ ಮಾಡ್ತಿದ್ದಾರೆ! ಮಾಜಿ ಪ್ರಧಾನಿ ದೇವೇಗೌಡರ ಆತಂಕ

ಮತದಾನಕ್ಕೂ ಮುನ್ನ ಅಚ್ಚರಿಯ ಬೆಳವಣಿಗೆ: ವಿಜಯಪುರ ನಗರದ ಚುನಾವಣಾ ಅಖಾಡದಲ್ಲಿ ಅಚ್ಚರಿಯ ಬೆಳವಣಿಗೆ ಕಂಡುಬಂದಿದೆ. ವಿಜಯಪುರ ನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಕಣದಿಂದ ಹಿಂದಕ್ಕೆ ಸರಿದಿದ್ದಾರೆ. ಜೆಡಿಎಸ್ ಅಭ್ಯರ್ಥಿ ಬಂದೇನವಾಜ ಮಾಬರಿ ಅಚ್ಚರಿಯ ನಡೆಗೆ ಕಾರಣವಾಗಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಚುನಾವಣೆಯಲ್ಲಿ ಸ್ಪರ್ಧಿಸಲ್ಲ, ಸೈಲೆಂಟ್ ಆಗಿರುತ್ತೇನೆ. ವಿಜಯಪುರ ನಗರ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷಕ್ಕೆ ಸಂಘಟನೆ ಇಲ್ಲ, ಕಾರ್ಯಕರ್ತರ ಪಡೆ ಇಲ್ಲ. ಕಳೆದ ಎರಡು ದಿನ ಪ್ರಚಾರ ನಡೆಸಿದಾಗ ಯಾವುದೇ ಉತ್ತಮ ಪ್ರತಿಕ್ರಿಯೆ ಸಿಕ್ಕಿಲ್ಲ. ಹೀಗಾಗಿ ಕಣದಿಂದ ಹಿಂದಕ್ಕೆ ಸರಿದಿದ್ದೇನೆ. ಸ್ವಯಂ ಪ್ರೇರಣೆಯಿಂದ ಕಣದಿಂದ ಹಿಂದಕ್ಕೆ ಸರಿಯುತ್ತಿದ್ದೇನೆ. ಈ ಹಿಂದೆ ಬಸವನಗೌಡ ಪಾಟೀಲ್‌ ಯತ್ನಾಳ್ ಜೆಡಿಎಸ್ ಪಕ್ಷ ಸೇರಿ ಸಂಘಟನೆಯನ್ನ ಹಾಳು ಮಾಡಿದ್ದಾರೆ ಎಂದು ಮಹಬರಿ ಆರೋಪ ಮಾಡಿದರು. 

ಹಿಂದೂ ಅಭ್ಯರ್ಥಿ ಸೋಲಿಸಲು ರಣತಂತ್ರ: ಇನ್ನು ಮುಖ್ಯವಾಗಿ ವಿಜಯಪುರ ನಗರ ವಿಧಾನಸಭಾ ಕ್ಷೇತ್ರದಲ್ಲಿ ದಲ್ಲಿ ಧರ್ಮಾಧಾರಿತವಾಗಿ ಚುನಾವಣೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಯ ಹಿಂದೂ ಅಭ್ಯರ್ಥಿಯನ್ನು ಸೋಲಿಸಲು ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಅಭ್ಯರ್ಥಿಗಳು ಒಂದಾಗಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಸ್ಲಿಂ ಅಭ್ಯರ್ಥಿ ಪರವಾಗಿ ಕೆಲಸ ಮಾಡಲು ಜೆಡಿಎಸ್‌ ಪಕ್ಷದ ಮುಸ್ಲಿಂ ಅಭ್ಯರ್ಥಿ ಮುಂದಾಗಿದ್ದಾರೆ. ಜೆಡಿಎಸ್ ಪಕ್ಷದಿಂದ ಚುನಾವಣೆಗೆ ನಿಂತಿದ್ದ ಬಂದೇನವಾಜ ಮಹಬರಿ ಕಣದಿಂದ ಹಿಂದೆ ಸರಿದ ಬೆನ್ನಲ್ಲೇ ಕಾಂಗ್ರೆಸ್‌ ಪಾಳಯದಲ್ಲಿ ಮತ್ತಷ್ಟು ಹುರುಪು ಬಂದಂತಾಗಿದೆ. 

ಕಾಂಗ್ರೆಸ್ ಪಕ್ಷಕ್ಕೆ‌ ನನ್ನ ಸಪೋರ್ಟ್ ಎಂದ ಜೆಡಿಎಸ್ ಅಭ್ಯರ್ಥಿ: ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಬ್ದುಲ್ ಹಮೀದ್ ಮುಶ್ರೀಫ್‌ಗೆ ನನ್ನ ಬೆಂಬಲವಿದೆ ಎಂದು ಜೆಡಿಎಸ್ ಅಭ್ಯರ್ಥಿ ಬಂದೇನವಾಜ ಮಹಬರಿ ಹೇಳಿಕೊಂಡಿದ್ದಾರೆ. ಆದರೆ, ಕ್ಷೇತ್ರದಲ್ಲಿ ಬಿ-ಫಾರಂ ಕೊಟ್ಟು ಸ್ಪರ್ಧೆ ಮಾಡುವಂತೆ ತಿಳಿಸಿ ಪ್ರಚಾರ ಮಾಡಿದ ಜೆಡಿಎಸ್‌ ಹೈಕಮಾಂಡ್‌ಗೆ ಪಕ್ಷದಲ್ಲಿದ್ದುಕೊಂಡೇ ಚೂರಿ ಹಾಕುವ ಕೆಲಸ ಮಾಡಿದ್ದಾರೆ ಎಂದು ಕೆಲವರು ಹೇಳುತ್ತಿದ್ದಾರೆ. ಇನ್ನು ಮಾಧ್ಯಮ ಸುದ್ದಿಗೋಷ್ಟಿಯಲ್ಲಿ ಜೆಡಿಎಸ್‌ ಅಭ್ಯರ್ಥಿ ಬಂದೇನವಾಜ ಮಹಬರಿ ನನ್ನ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಎಂದು ಹೇಳಿಕೊಂಡಿದ್ದಾರೆ.

ರಾಮಾಯಣದಲ್ಲಿ ಹನುಮಂತನಂತೆ, ಈಗ ಮೋದಿ ದೇಶಕ್ಕಾಗಿ ತ್ಯಾಗ ಮಾಡ್ತಿದ್ದಾರೆ

ಕಾಂಗ್ರೆಸ್‌ ಪರ ಪ್ರಚಾರಕ್ಕೆ ಶೆಟ್ಟರ್‌ ಎಂಟ್ರಿ: ರಾಜ್ಯದಲ್ಲಿ ಬಿಜೆಪಿಯಿಂದ ಎಲ್ಲ ಅಧಿಕಾರವನ್ನು ಅನುಭವಿಸಿ ಕಾಂಗ್ರೆಸ್‌ಗೆ ಹೋಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಬಗ್ಗೆ ಬಸವನಗೌಡ ಪಾಟೀಲ್‌ ಯತ್ನಾಳ್‌ ಅವರು ಕಿಡಿ ಕಾರಿದ್ದರು. ಆದರೆ, ಈಗ ವಿಜಯಪುರ ಕಾಂಗ್ರೆಸ್‌ ಅಭ್ಯರ್ಥಿ ಪರವಾಗಿ ಪ್ರಚಾರ ಮಾಡಲು ನಾಳೆ (ಸೋಮವಾರ) ಜಗದೀಶ್‌ ಶೆಟ್ಟರ್‌ ವಿಜಯಪುರ ನಗರಕ್ಕೆ ಆಗಮಿಸಲಿದ್ದಾರೆ. ಇಲ್ಲಿ ಮುಸ್ಲಿಂ ಮತಗಳ ಜೊತೆಗೆ ಒಂದಿಷ್ಟು ಹಿಂದೂ ಮತಗಳನ್ನು ಸೆಳೆಯುವ ಹಿನ್ನೆಲೆಯಲ್ಲಿ ಶೆಟ್ಟರ್‌ ಅವರನ್ನು ಕರೆತರಲಾಗುತ್ತಿದ್ದು, ಲಿಂಗಾಯತ ಮತಗಳನ್ನು ಸೆಳೆಯಲು ಕಾಂಗ್ರೆಸ್ ಪ್ಲಾನ್‌ ಮಾಡಿಕೊಂಡಿದೆ.

click me!