
ಚಾಮರಾಜನಗರ (ಸೆ.30): ದೇಶದ ಏಕತೆಗಾಗಿ ರಾಷ್ಟ್ರ ನಾಯಕ ರಾಹುಲ್ ಗಾಂಧಿ ಆರಂಭಿಸಿರುವ ಭಾರತ್ ಜೋಡೋ ಯಾತ್ರೆ ಕರ್ನಾಟಕಕ್ಕೆ ಕಾಲಿಟ್ಟಿದೆ. ರಾಜ್ಯ ಪ್ರವೇಶಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಚಾಮರಾಜನಗರ ಜಿಲ್ಲೆ ಬಂಡೀಪುರದ ಬಳಿ ಸಿದ್ದರಾಮಯ್ಯ ಅವರು ಬರ ಮಾಡಿಕೊಂಡರು. ರಾಹುಲ್ ಗಾಂಧಿ ರಾಜ್ಯಕ್ಕೆ ಎಂಟ್ರಿ ಆಗುತ್ತಿದಂತೆ ಒಗ್ಗಟ್ಟಿನ ತಂತ್ರ ಹೆಣೆಯುತ್ತಿದ್ದಾರೆ. ಬೆಳಿಗ್ಗೆಯೂ ಡೋಲು ಬಾರಿಸುವಾಗ ಸಿದ್ದು, ಡಿಕೆಶಿ ಕೈ ಹಿಡಿದು ಡೋಲು ಬಾರಿಸಿದ್ದ ರಾಹುಲ್. ಇದೀಗ ಟ್ವೀಟ್ ನಲ್ಲೂ ಒಗ್ಗಟ್ಟಿನ ಮಂತ್ರ ಜಪಿಸುತ್ತಿದ್ದಾರೆ. 'ಕೂಡಿ ಬಾಳಿದರೇ ಸ್ವರ್ಗ' ಎಂದು ರಾಹುಲ್ ಗಾಂಧಿ ಕನ್ನಡದಲ್ಲಿ ಬರೆದು ಟ್ವೀಟ್ ಮಾಡಿದ್ದಾರೆ. ಇದೇ ವೇಳೆ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಕೊರೋನಾ ಅವಧಿಯಲ್ಲಿ ಆಮ್ಲಜನಕ ಕೊರತೆಯಿಂದ ಮೃತಪಟ್ಟ 36 ಜನರ ಕುಟುಂಬಗಳೊಂದಿಗೆ ರಾಹುಲ್ ಗಾಂಧಿ ಸಂವಾದ ನಡೆಸಿ, ನೋವು ಹೇಳಿಕೊಂಡ ಸಂತ್ರಸ್ತರಿಗೆ ಭರವಸೆ ಕೊಟ್ಟರು. ಕೇಂದ್ರ ಸರ್ಕಾರ ಜನರ ಆರೋಗ್ಯಕ್ಕೆ ಗಮನ ಕೊಡುತ್ತಿಲ್ಲ. ಅನಿವಾರ್ಯವಾಗಿ ಸರ್ಕಾರದ ಆಸ್ಪತ್ರೆಗೆ ಹೋಗಿದ್ದೀರ. ಆಸ್ಪತ್ರೆಯ ನಿರ್ಲಕ್ಷದಿಂದ ರೋಗಿಗಳು ಪ್ರಾಣ ಕಳೆದುಕೊಂಡ್ರು. ಕೇಂದ್ರ ಸರ್ಕಾರ ಇತ್ತ ಗಮನ ಕೂಡ ಹರಿಸಲಿಲ್ಲ. ನಾನು ಮಾತು ಕೊಡುತ್ತೇನೆ, ಈ ಘಟನೆಯ ಸಂತ್ರಸ್ತರಿಗೆ ನ್ಯಾಯ ಕೊಡಿಸುತ್ತೇನೆ ಎಂದು ರಾಹುಲ್ ಹೇಳಿದರು.
ನಮಗೆ ಗ್ಯಾರಂಟಿ ಇದೆ ಮುಂದೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತೆ. ಆಕ್ಸಿಜನ್ ದುರಂತದ ಪರಿಹಾರ ಹೆಚ್ಚಿಸುತ್ತೇವೆ. ಈ ದುರಂತದ ಬಗ್ಗೆ ಉನ್ನತ ಮಟ್ಟದ ತನಿಖೆ ಮಾಡಿಸುತ್ತೇವೆ. ಜನರ ಸಾವಿಗೆ ಕಾರಣರಾದವರಿಗೆ ತಕ್ಕ ಶಿಕ್ಷೆ ಕೊಡುತ್ತೇವೆ. ಇದು ಕಾಂಗ್ರೆಸ್ ಪಕ್ಷದ ವಾಗ್ದಾಣ ಎಂದು ಇದೇ ವೇಳೆ ರಾಹುಲ್ ಹೇಳಿದರು.
ಇನ್ನು ಭಾರತ ಯಾತ್ರಿಗಳ ಜೊತೆಗೆ ಡಿಕೆ ಶಿವಕುಮಾರ್ ತಾವೂ ಕೂಡ ವಿಶ್ರಾಂತಿ ಪಡೆದರು. ಭಾರತ ಯಾತ್ರಿಗಳಿಗೆ ಹಾಸಿಗೆ ವ್ಯವಸ್ಥೆ ಇದ್ದು, ಪಾದಯಾತ್ರೆಯ ಬ್ರೇಕ್ ನಲ್ಲಿ ಡಿಕೆ ಶಿವಕುಮಾರ್ ಕೊಂಚ ರಿಲ್ಯಾಕ್ಸ್ ಮಾಡಿದರು.
Bharat Jodo Yatra: ರಾಹುಲ್ ಯಾತ್ರೆ ಬ್ಯಾನರ್ ಹರಿದ ಕಿಡಿಗೇಡಿಗಳು: ಪೊಲೀಸರಿಗೆ ದೂರು
20 ದಿನಗಳ ಕಾಲ ಕೇರಳದಲ್ಲಿ ಯಾತ್ರೆ ನಡೆಸಿ ಶುಕ್ರವಾರ ಕರ್ನಾಟಕ ಪ್ರವೇಶಿಸಿರುವ ರಾಹುಲ್ ಗಾಂಧಿ ಅವರು ಮುಂದಿನ 21 ದಿನಗಳ ಕಾಲ ಕರುನಾಡಿನಲ್ಲಿ ಬೃಹತ್ ಯಾತ್ರೆಯನ್ನು ಕೈಗೊಳ್ಳಲಿದ್ದಾರೆ. ಯಾತ್ರೆಯು ರಾಜ್ಯದ ಎಂಟು ಜಿಲ್ಲೆಗಳಲ್ಲಿ 21 ದಿನ ಸುಮಾರು 511 ಕಿ.ಮೀ ಸಂಚರಿಸಲಿದೆ.
ಬಳ್ಳಾರಿಯಲ್ಲಿ ಸಮಾವೇಶ: ಈ ಸಂವಾದಗಳಿಗೆ ಮೇರು ಮುಕುಟವಾಗಿ ಯಾತ್ರೆ ಬಳ್ಳಾರಿ ಪ್ರವೇಶಿಸಿದಾಗ ಬೃಹತ್ ಸಾರ್ವಜನಿಕ ಸಮಾವೇಶವನ್ನು ಆಯೋಜಿಸಲಾಗಿದ್ದು, ಲಕ್ಷಾಂತರ ಜನರು ಸೇರುವ ಈ ಸಮಾವೇಶವನ್ನು ಉದ್ದೇಶಿಸಿ ರಾಹುಲ್ ಗಾಂಧಿ ಮಾತನಾಡಲಿದ್ದಾರೆ.
ಬಿಜೆಪಿ ಮಾಡಿದ ಉತ್ತಮ ರಸ್ತೆಯಲ್ಲಿ ಕಾಂಗ್ರೆಸ್ ಯಾತ್ರೆ ಸಾಗಲಿ, ಫ್ಲೆಕ್ಸ್ ಹರಿದ ಆರೋಪಕ್ಕೆ ಛಲವಾದಿ ತಿರುಗೇಟು!
ರಾಜ್ಯದಲ್ಲಿ ಭಾರತ್ ಜೋಡೋ ಕಳೆ ಕಟ್ಟುವಂತೆ ಮಾಡಲು ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರಿಗೂ ಆಹ್ವಾನ ನೀಡಲಾಗಿದ್ದು, ಈ ಪೈಕಿ ಸೋನಿಯಾ ಗಾಂಧಿ ಅವರು ಸಮಾವೇಶ ಅಥವಾ ಸಂವಾದದಲ್ಲಿ ಭಾಗಿಯಾಗುವ ಸಾಧ್ಯತೆಯಿದೆ. ಇನ್ನೂ ಪ್ರಿಯಾಂಕಾ ಗಾಂಧಿ ಅವರು ತಮ್ಮ ಸಹೋದರನೊಂದಿಗೆ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಲಿದ್ದಾರೆ. ಆದರೆ, ಸೋನಿಯಾ ಹಾಗೂ ಪ್ರಿಯಾಂಕಾ ಅವರು ಯಾತ್ರೆಯಲ್ಲಿ ಪಾಲ್ಗೊಳ್ಳುವ ದಿನ ಇನ್ನೂ ನಿರ್ಧಾರವಾಗಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.