ನಿಗಮ-ಮಂಡಳಿ ಪಟ್ಟಿಗೆ ಜ.26ವರೆಗೆ ಕಾಂಗ್ರೆಸ್‌ ಬ್ರೇಕ್‌: ಕಾರಣ ಇಲ್ಲಿದೆ!

By Kannadaprabha News  |  First Published Jan 21, 2024, 6:23 AM IST

ಕಾರ್ಯಕರ್ತರಿಗೆ ಯಾವ ನಿರ್ದಿಷ್ಟ ನಿಗಮ ಮಂಡಳಿ ನೀಡಬೇಕು ಎಂಬುದು ಇನ್ನೂ ನಿರ್ಧಾರವಾಗದ ಹಿನ್ನೆಲೆಯಲ್ಲಿ ಹಿನ್ನೆಲೆಯಲ್ಲಿ ನೇಮಕಾತಿ ಪಟ್ಟಿ ಬಿಡುಗಡೆಗೆ ಜ.26ರವರೆಗೆ ತಡೆ ಬಿದ್ದಿದೆ. 


ಬೆಂಗಳೂರು (ಜ.21): ಕಾರ್ಯಕರ್ತರಿಗೆ ಯಾವ ನಿರ್ದಿಷ್ಟ ನಿಗಮ ಮಂಡಳಿ ನೀಡಬೇಕು ಎಂಬುದು ಇನ್ನೂ ನಿರ್ಧಾರವಾಗದ ಹಿನ್ನೆಲೆಯಲ್ಲಿ ಹಿನ್ನೆಲೆಯಲ್ಲಿ ನೇಮಕಾತಿ ಪಟ್ಟಿ ಬಿಡುಗಡೆಗೆ ಜ.26ರವರೆಗೆ ತಡೆ ಬಿದ್ದಿದೆ. ಈಗಾಗಲೇ 37 ಮಂದಿ ಶಾಸಕರು ಹಾಗೂ 39 ಮಂದಿ ಕಾರ್ಯಕರ್ತರು ಸೇರಿ 76 ನಿಗಮ-ಮಂಡಳಿ ನೇಮಕಕ್ಕೆ ನಿರ್ಧರಿಸಿ ಪಟ್ಟಿ ಸಿದ್ಧಪಡಿಸಲಾಗಿದೆ. ಈ ಪೈಕಿ 37 ಮಂದಿ ಶಾಸಕರಿಗೆ ಯಾವ್ಯಾವ ನಿಗಮ-ಮಂಡಳಿ ಅಧಿಕಾರ ನೀಡಬೇಕು ಎಂಬುದು ಅಖೈರುಗೊಂಡಿದೆ. ಆದರೆ ಕಾರ್ಯಕರ್ತರಿಗೆ ಯಾವ್ಯಾವ ನಿಗಮ-ಮಂಡಳಿ ಅಧಿಕಾರ ಹಂಚಿಕೆಯಾಗಬೇಕು ಎಂಬ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ.

ಹೀಗಾಗಿ ಕಾರ್ಯಕರ್ತರಿಗೆ ನಿರ್ದಿಷ್ಟ ನಿಗಮ ಮಂಡಳಿ ನೀಡುವ ಪ್ರಕ್ರಿಯೆ ನಡೆಯಬೇಕಿದೆ. ಮೂಲಗಳ ಪ್ರಕಾರ ಈ ಪ್ರಕ್ರಿಯೆ ನಡೆಸಲು ಜ.26ಕ್ಕೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲ ಅವರು ಮತ್ತೊಮ್ಮೆ ರಾಜ್ಯಕ್ಕೆ ಆಗಮಿಸಲಿದ್ದಾರೆ. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರೊಂದಿಗೆ ಚರ್ಚಿಸಿ ಯಾವ್ಯಾವ ಕಾರ್ಯಕರ್ತರಿಗೆ ಯಾವ್ಯಾವ ನಿಗಮ-ಮಂಡಳಿ ನೀಡಬೇಕು ಎಂಬ ಬಗ್ಗೆ ಚರ್ಚೆ ಮಾಡಲಿದ್ದಾರೆ. ಈ ಚರ್ಚೆಯ ನಂತರವೇ ನಿಗಮ ಮಂಡಳಿ ಅಧ್ಯಕ್ಷರ ನೇಮಕ ಪಟ್ಟಿ ಯಾವಾಗ ಹೊರ ಬೀಳಲಿದೆ ಎಂಬುದು ನಿರ್ಧಾರವಾಗಲಿದೆ ಎಂದು ಮೂಲಗಳು ಹೇಳಿವೆ.

Tap to resize

Latest Videos

ಯಾವುದೇ ಕ್ಷಣದಲ್ಲಿ ನಿಗಮ ಮಂಡಳಿ ನೇಮಕ ಪ್ರಕಟ: ರಾಜ್ಯದ ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನಗಳಿಗೆ 36 ಶಾಸಕರು ಹಾಗೂ 39 ಕಾರ್ಯಕರ್ತರ ಪಟ್ಟಿ ಅಂತಿಮಗೊಂಡಿದ್ದು, ಯಾವುದೇ ಕ್ಷಣದಲ್ಲಾದರೂ ಹೊರಬೀಳಲಿದೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಇಟಲಿ ಮನಸ್ಥಿತಿಯವರಿಂದ ರಾಮನ ಬಗ್ಗೆ ಅಪೇಕ್ಷೆ ಅಸಾಧ್ಯ: ಶಾಸಕ ಅರವಿಂದ ಬೆಲ್ಲದ

ನಾನು ನಿನ್ನೆಯೂ ಹೇಳಿದ್ದೇನೆ, ಈಗಲೂ ಹೇಳುತ್ತಿದ್ದೇನೆ. ನಿಗಮ ಮಂಡಳಿ ಅಧ್ಯಕ್ಷರ ಪಟ್ಟಿ ಅಂತಿಮಗೊಂಡಿದೆ. ಯಾವುದೇ ಕ್ಷಣದಲ್ಲಿ ಬೇಕಾದರೂ ಪ್ರಕಟವಾಗಲಿದೆ. ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರಲು ಕಾರಣಕರ್ತರಾದ ನಮ್ಮ ಕಾರ್ಯಕರ್ತರಿಗೆ ಹೆಚ್ಚಿನ ಸ್ಥಾನಗಳನ್ನು ನೀಡಲಾಗಿದೆ. ಪಟ್ಟಿಯಲ್ಲಿ 36 ಶಾಸಕರು ಮತ್ತು 39 ಕಾರ್ಯಕರ್ತರ ಹೆಸರುಗಳನ್ನು ನಿಗಮ ಮಂಡಳಿ ಅಧ್ಯಕ್ಷ ಸ್ಥಾನಗಳಿಗೆ ಅಂತಿಮಗೊಳಿಸಲಾಗಿದ್ದು ಶೀಘ್ರದಲ್ಲೇ ಪ್ರಕಟಿಸುತ್ತೇವೆ ಎಂದರು.

click me!