ಆರ್.ಆರ್. ನಗರ ಉಪಚುನಾವಣೆ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಮೂರು ಪಕ್ಷಗಳು ಗೆಲುವಿಗಾಗಿ ನಾನಾ ಕಸರತ್ತು ನಡೆಸಿವೆ. ಇದರ ಮಧ್ಯೆ ಕಾಂಗ್ರೆಸ್ ಒಂದು ಹೆಜ್ಜೆ ಮುಂದೆ ಹೋಗಿದೆ.
ಬೆಂಗಳೂರು, (ಅ.13): ಆರ್.ಆರ್.ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್‌ಗಿನಂತ ಮೊದಲ ತನ್ನ ಪಕ್ಷದ ಅಭ್ಯರ್ಥಿಯನ್ನು ಘೋಷಿಸಿತ್ತು.
ಇದೀಗ ಬಿಜೆಪಿ-ಜೆಡಿಎಸ್ ಪಕ್ಷಗಳಿಗಿಂತ ಕಾಂಗ್ರೆಸ್ ಮತ್ತೊಂದೆಜ್ಜೆ ಮುಂದೆ ಇಟ್ಟಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಎಚ್. ಕುಸುಮಾ ಅವರು ಇಂದು (ಮಂಗಳವಾರ) ನಾಮಪತ್ರ ಸಲ್ಲಿಸಿದ್ದಾರೆ.
ಈ ಮೊದಲು ಆಗಿದ್ದ ನಿಗದಿಯಂತೆ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಕುಸುಮಾ ಅವರು ನಾಳೆ (ಬುಧವಾರ) ನಾಮಪತ್ರ ಸಲ್ಲಿಸಬೇಕಾಗಿತ್ತು. ಆದರೆ ಜ್ಯೋತಿಷಿ ಸಲಹೆಯಂತೆ ಮಂಗಳವಾರ ಒಳ್ಳೆಯ ಮುಹೂರ್ತ ಎಂದಿರುವ ಕಾರಣ, ಒಂದು ದಿನ ಮುಂಚಿತವಾಗಿ ನಾಮಪತ್ರ ಸಲ್ಲಿಸಿದರು.
ಆರ್ ಆರ್ ನಗರದಲ್ಲಿ ಕುಸುಮಾ ಗೆಲ್ಲೋದು ಖಚಿತ : ಬೆನ್ನಿಗಿದೆ ಕೈ ಮಹಿಳೆಯರ ಸಪೋರ್ಟ್
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಆಪ್ತ ಜ್ಯೋತಿಷಿ ಡಾ.ಬಿ.ಪಿ ಆರಾಧ್ಯ ಅವರ ಸಲಹೆಯ ಮೇರೆಗೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬಧವಾರ ರಾತಾಬಲ ಇಲ್ಲದ ಕಾರಣ ಮಂಗಳವಾರ 12 ಗಂಟೆಯಿಂದ 12. 15 ನಿಮಿಷದ ಒಳಗೆ ನಾಮಪತ್ರ ಸಲ್ಲಿಸಲು ಡಾ.ಆರಾಧ್ಯ ಅವರು ಸಲಹೆ ನೀಡಿದ್ದರು.
ಮುನಿರತ್ನ ವಿರುದ್ಧ ಕುಸುಮಾ ಕಣಕ್ಕಿಳಿಸಿದರೆ ಅವರನ್ನು ಸೋಲಿಸಬಹುದು ಎಂದು ಡಿಕೆ ಶಿವಕುಮಾರ್ ಅವರಿಗೆ ಜ್ಯೋತಿಷಿ ಡಾ.ಆರಾಧ್ಯ ಅವರು ಸಲಹೆ ನೀಡಿದ್ದರು ಎನ್ನಲಾಗಿದೆ. ಕುಸುಮಾ ಅಭ್ಯರ್ಥಿಯಾಗಿ ಆಯ್ಕೆ ಮಾಡುವ ವೇಳೆಯಲ್ಲೂ ಡಿಕೆಶಿಯವರು ಜ್ಯೋತಿಷಿ ಸಲಹೆ ಪಡೆದಿದ್ದರು ಎಂದು ಮೂಲಗಳು ತಿಳಿಸಿವೆ.
ಕುಸುಮಾ ಅವರ ಹುಟ್ಟಿದ ದಿನ ಮಂಗಳವಾರ. ಹೀಗಾಗಿ ತಾರಾಬಲದ ಮೇಲೆ ಮಂಗಳವಾರವಾದ ಇಂದು ಒಂದು ನಾಮಪತ್ರ ಸಲ್ಲಿಸಲು ಸೂಚಿಸಿದ್ದರು. ಇನ್ನು ಬುಧವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ ಸಮ್ಮುಖದಲ್ಲಿ ಕುಸುಮಾ ಅವರು 2ನೇ ನಾಮಪತ್ರ ಸಲ್ಲಿಸಲಿದ್ದಾರೆ.
ತುಮಕೂರು ಜಿಲ್ಲೆಯ ಶಿರಾ ಮತ್ತು ಬೆಂಗಳೂರಿನ ಆರ್.ಆರ್.ನಗರ ಕ್ಷೇತ್ರಗಳಿಗೆ ನ.03ರಂದು ಮತದಾನ ನಡೆಯಲಿದ್ದು, ನ.10ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಸಲು ಅ.16 ಕೊನೆಯ ದಿನವಾಗಿದೆ.