Gujarat election results: ಸೋಲಿಗೆ ಹೆದರಿ ಸಾಯಲು ಯತ್ನಿಸಿದ ಕಾಂಗ್ರೆಸ್ ಅಭ್ಯರ್ಥಿ

By Anusha KbFirst Published Dec 8, 2022, 3:41 PM IST
Highlights

ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಕಮಲ ಪಾಳಯ ಭರ್ಜರಿ ಗೆಲುವಿನೊಂದಿಗೆ ಹೊಸ ದಾಖಲೆ ನಿರ್ಮಿಸಿದೆ.  ಆದರೆ ಕಾಂಗ್ರೆಸ್ ಅಭ್ಯರ್ಥಿಯೊಬ್ಬರು ಸೋಲಿಗೆ ಹೆದರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಗುಜರಾತ್‌ನಲ್ಲಿ ನಡೆದಿದೆ.

ಅಹ್ಮದಾಬಾದ್: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಕಮಲ ಪಾಳಯ ಭರ್ಜರಿ ಗೆಲುವಿನೊಂದಿಗೆ ಹೊಸ ದಾಖಲೆ ನಿರ್ಮಿಸಿದೆ.  ಆದರೆ ಕಾಂಗ್ರೆಸ್ ಅಭ್ಯರ್ಥಿಯೊಬ್ಬರು ಸೋಲಿಗೆ ಹೆದರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಗುಜರಾತ್‌ನಲ್ಲಿ ನಡೆದಿದೆ. ಗುಜರಾತ್‌ನ ಗಾಂಧಿಧಾಮ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಭರತ್ ಬೈ ವೆಲ್ಜಿಬೈ ಸೋಲಂಕಿ ಎಂಬುವವರು 12,261 ಒಂದು ಮತಗಳಿಂದ ಹಿಂದೆ ಉಳಿದ ಹಿನ್ನೆಲೆಯಲ್ಲಿ ಸೋಲುವುದು ಖಚಿತವಾಗುತ್ತಿದ್ದಂತೆ ಆತ್ಮಹತ್ಯೆ ಯತ್ನಿಸಿದ್ದಾರೆ. ಅಲ್ಲದೇ ಬಿಜೆಪಿ ವಿರುದ್ಧ ಅವರು ಮತಪೆಟ್ಟಿಗೆಯನ್ನು ತಿರುಚಿದ ಆರೋಪ ಹೊರಿಸಿದ್ದಾರೆ.

ಕೆಲವೊಂದು ಮತ ಪೆಟ್ಟಿಗೆಗಳನ್ನು ಸರಿಯಾಗಿ ಸೀಲ್ ಮಾಡಿರಲಿಲ್ಲ ಎಂದು ದೂರಿದ ಅವರು 12,261 ಮತಗಳ ಅಂತರದಿಂದ ಸೋಲುವುದು ಖಚಿತವಾದಂತೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗಾಂಧಿಧಾಮ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಸೋಲಂಕಿ, ತಾವು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡವಿತ್‌ನಲ್ಲಿ ಉಪ್ಪಿನ ವ್ಯವಹಾರ ಹಾಗೂ ಕೃಷಿ ಮಾಡುತ್ತಿರುವುದಾಗಿ ತಮ್ಮ ಉದ್ಯೋಗ ಬಗ್ಗೆ ತಿಳಿಸಿದ್ದರು. 

Gandhidham - Kutch district me Congress candidate haar ke dar se suicide karne ki koshish ki. pic.twitter.com/yu9qhlIxvF

— Timir (@niyatimir)

ಕುತ್ತಿಗೆಗೆ ಕೇಸರಿ ಸಾಲನ್ನು ಗಟ್ಟಿಯಾಗಿ ಸುತ್ತಿ ಉರುಳು ಹಾಕಿಕೊಳ್ಳಲು ಅವರು ಯತ್ನಿಸಿದ್ದು, ಈ ವೇಳೆ ಅವರ ಜೊತೆ ಇದ್ದವರು ಅವರನ್ನು ತಡೆದಿದ್ದಾರೆ. ಇತ್ತ ಬಿಜೆಪಿ ಸತತ ಏಳನೇ ಬಾರಿ ಗುಜರಾತ್‌ನಲ್ಲಿ ಗೆಲುವು ದಾಖಲಿಸುವ ಮೂಲಕ ಹೊಸ ದಾಖಲೆ ಬರೆದಿದೆ. 182 ವಿಧಾನಸಭಾ ಕ್ಷೇತ್ರಗಳಿರುವ ಗುಜರಾತ್‌ನಲ್ಲಿ ಬಿಜೆಪಿ 157 ಸ್ಥಾನಗಳಲ್ಲಿ ಜಯಭೇರಿ ಬಾರಿಸುವ ಮೂಲಕ ಭರ್ಜರಿ ಗೆಲುವಿನ ಹುಮ್ಮಸ್ಸಿನಲ್ಲಿದೆ. ಇಲ್ಲಿ ಕಾಂಗ್ರೆಸ್ 16 ಸೀಟು ಗಳಿಸಿದ್ದರೆ, ಎಎಪಿ ಐದು ಹಾಗೂ ಸ್ವತಂತ್ರ ಅಭ್ಯರ್ಥಿಗಳು ನಾಲ್ಕು ಸೀಟುಗಳನ್ನು ಗಳಿಸಿದ್ದಾರೆ. 

 

 

ಇತ್ತ ಭರ್ಜರಿ ಗೆಲುವು ದಾಖಲಾಗುತ್ತಿದ್ದಂತೆ ಬಿಜೆಪಿಯ ಗುಜರಾತ್ ರಾಜ್ಯಾಧ್ಯಕ್ಷ ಸಿ.ಆರ್. ಪಾಟೀಲ್ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದುಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಅವರು ಎರಡನೇ ಬಾರಿಗೆ ಸೋಮವಾರ ಡಿಸೆಂಬರ್ 12 ರಂದು ಮಧ್ಯಾಹ್ನ 2 ಗಂಟೆಗೆ ಗುಜರಾತ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಹೇಳಿದ್ದಾರೆ. ಇತ್ತ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ 68 ವಿಧಾನಸಭಾ ಕ್ಷೇತ್ರಗಳ ಪೈಕಿ 39 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದು, ಅಲ್ಲಿ ಅಧಿಕಾರದ ಗದ್ದುಗೆ ಏರಲಿದೆ. ಇಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಕೇವಲ 26 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಇತರರು ಮೂರು ಸ್ಥಾನಗಳಲ್ಲಿ ಜಯಭೇರಿ ಬಾರಿಸಿದ್ದಾರೆ.

 

click me!