ಅಪ್ಪನ ಸ್ಥಾನ ಉಳಿಸಿಕೊಂಡ ಉಮೇಶ್‌ ಮೇಟಿ; ಬಿಜೆಪಿಯ ಚರಂತಿಮಠ ವಿರುದ್ಧ 22332 ಮತಗಳ ಅಂತರದ ಜಯ

Published : May 05, 2026, 05:31 AM IST
 Umesh Meti Defeats BJP Veeranna Charantimath

ಸಾರಾಂಶ

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ, ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಅವರು ಬಿಜೆಪಿಯ ಡಾ.ವೀರಣ್ಣ ಚರಂತಿಮಠ ವಿರುದ್ಧ 22,332 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. 

ಬಾಗಲಕೋಟೆ: ಬಹುನಿರೀಕ್ಷಿತ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ, ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಡಾ.ವೀರಣ್ಣ ಚರಂತಿಮಠ ವಿರುದ್ಧ 22,332 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಉಮೇಶ ಮೇಟಿ 98,919 ಮತ ಪಡೆದು ಗೆಲುವು ಸಾಧಿಸಿದರೆ, ಬಿಜೆಪಿಯ ವೀರಣ್ಣ ಚರಂತಿಮಠ 76,587 ಮತ ಪಡೆದು ಪರಾಜಯ ಹೊಂದಿದ್ದಾರೆ.

ಬಾಗಲಕೋಟೆಯಲ್ಲಿ ಕಾಂಗ್ರೆಸ್‌ನ ಎಚ್.ವೈ.ಮೇಟಿ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಏ.9ರಂದು ಮತದಾನ ನಡೆದಿತ್ತು. ಮೇಟಿ ಕುಟುಂಬದ ಮಕ್ಕಳಾದ ಮಲ್ಲಿಕಾರ್ಜುನ ಮೇಟಿ ಮತ್ತು ಉಮೇಶ್ ಮೇಟಿ ನಡುವೆ ಟಿಕೆಟ್‌ಗಾಗಿ ತೀವ್ರ ಪೈಪೋಟಿ ಏರ್ಪಟ್ಟು, ಭಿನ್ನಮತಕ್ಕೆ ಕಾರಣವಾಗಿತ್ತು. ಅಂತಿಮವಾಗಿ ಕಾಂಗ್ರೆಸ್‌ ಉಮೇಶ್ ಮೇಟಿಗೆ ಟಿಕೆಟ್‌ ನೀಡಿದ್ದು, ಅವರೀಗ 22,332 ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದಾರೆ. ಒಟ್ಟು 9 ಅಭ್ಯರ್ಥಿಗಳು ಕಣದಲ್ಲಿದ್ದು, ಉಳಿದವರು ಠೇವಣಿ ಉಳಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ.

ಮೊದಲ ಬಾರಿಗೆ ವಿಧಾನಸಭೆಗೆ

ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಬಿಜೆಪಿಯ ವೀರಣ್ಣ ಚರಂತಿಮಠ ಅವರನ್ನು 22,332 ಮತಗಳ ಅಂತರದಿಂದ ಸೋಲಿಸುವ ಮೂಲಕ ಕಾಂಗ್ರೆಸ್‌ನ ಉಮೇಶ ಮೇಟಿ ಮೊದಲ ಬಾರಿಗೆ ವಿಧಾನಸಭೆಯ ಮೆಟ್ಟಿಲು ತುಳಿದಿದ್ದಾರೆ. ನವನಗರದ ತೋಟಗಾರಿಕೆ ವಿವಿಯಲ್ಲಿ ನಡೆದ ಮತ ಎಣಿಕೆಯಲ್ಲಿ ಅಭೂತಪೂರ್ವ ಗೆಲುವು ಕಂಡ ಉಮೇಶ ಮೇಟಿಗೆ ಅನುಕಂಪದ ಅಲೆ, ಜೊತೆಗೆ ಆಡಳಿತಾರೂಢ ಸರ್ಕಾರ ಜೊತೆಯಾಗಿದ್ದರಿಂದ ಈ ಗೆಲುವು ಸಾಧ್ಯವಾಗಿದೆ.

ಧನ್ಯವಾದ ಸಲ್ಲಿಸಿದ ಉಮೇಶ್ ಮೇಟಿ

ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದ ನಗರ ಹಾಗೂ ಗ್ರಾಮೀಣ ಭಾಗದ ಎಲ್ಲಾ ಮತದಾರರಿಗೆ ಧನ್ಯವಾದಗಳು. ಈ ಗೆಲುವು ನನ್ನ ವೈಯಕ್ತಿಕ ಸಾಧನೆಯಲ್ಲ. ಇಡೀ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಹಾಗೂ ಗ್ಯಾರಂಟಿ ಸರಕಾರದ ಗೆಲುವಾಗಿದೆ ಎಂದು ಉಮೇಶ್ ಮೇಟಿ ಹೇಳುತ್ತಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Gangotri to Ganga Sagar- ಗಂಗೆ ಹರಿವಲ್ಲೆಲ್ಲಾ ಅರಳಿದ 'ಕಮಲ': ನಿಜವಾಯ್ತು ಆ ಮಾತು
West Bengal: ಟಿಎಂಸಿ ರೇ*ಪಿಸ್ಟ್ ಕಪಿಮುಷ್ಟಿಯಿಂದ ಹೆಣ್ಣುಮಕ್ಕಳ ಕಾಪಾಡಿದ ದಿಟ್ಟೆಗೆ ಭರ್ಜರಿ ಗೆಲುವು