
ಬೆಂಗಳೂರು, (ಅ.08): ಆರ್.ಆರ್. ನಗರ ಮತ್ತು ಶಿರಾ ಉಪ ಚುನಾವಣೆಯಲ್ಲಿ ಗೆಲ್ಲಲು ಕಾಂಗ್ರೆಸ್ ರಣತಂತ್ರ ರೂಪಿಸಿದೆ. ಈಗಾಗಲೇ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸಿರುವ ಕಾಂಗ್ರೆಸ್, ತಮ್ಮ ಹುರಿಯಾಳುಗಳಿಂದ ನಾಮಪತ್ರ ಸಲ್ಲಿಕೆಗೂ ಮುಹೂರ್ತ ಫಿಕ್ಸ್ ಮಾಡಿದೆ.
ರಾಜರಾಜೇಶ್ವರಿನಗರ ಉಪಚುನಾವಣೆ ಕೈ ಅಭ್ಯರ್ಥಿ ಕುಸುಮಾ ಅವರು ಅಕ್ಟೋಬರ್ 14ರಂದು ನಾಮಪತ್ರ ಸಲ್ಲಿಸಿದ್ರೆ, ಮಾರನೇ ದಿನ ಅಂದ್ರೆ ಮರು ದಿನ ಅಂದ್ರೆ ಅಕ್ಟೋಬರ್ 15ರಂದು ಶಿರಾ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ಟಿಬಿ ಜಯಚಂದ್ರ ಅವರು ನಾಮಪತ್ರ ಸಲ್ಲಿಸಲಿದ್ದಾರೆ.
ಬೈ ಎಲೆಕ್ಷನ್: ರಾಜಕೀಯ ಪಕ್ಷಗಳಿಗೆ ಬಿಗ್ ಶಾಕ್ ಕೊಟ್ಟ ಚುನಾವಣಾ ಆಯೋಗ
ಈ ಕುರಿತು ಮಾಹಿತಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು, ರಾಜರಾಜೇಶ್ವರಿನಗರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಕಾಂಗ್ರೆಸ್ ಸೇರಿದ್ದಾರೆ. ಇವರಿಗೆ ಟಿಕೆಟ್ ನೀಡಿದ್ದರಿಂದ ಪಕ್ಷದಲ್ಲಿ ಯಾವುದೇ ಅಸಮಾಧಾನವಿಲ್ಲ. ಎಲ್ಲಾ ಆಕಾಂಕ್ಷಿಗಳ ಜೊತೆಗೆ ಮಾತನಾಡಿದ್ದೇನೆ ಎಂದರು.
ಇನ್ನೂ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಲು ಎಲ್ಲಾ ರೀತಿಯ ತಯಾರಿಕೆ ಮಾಡಿಕೊಳ್ಳಲಾಗಿದೆ. ಅಕ್ಟೋಬರ್ 14ರಂದು ರಾಜರಾಜೇಶ್ವರಿ ನಗರ ಕಾಂಗ್ರೆಸ್ ಅಭ್ಯರ್ಥಿ, ಶಿರಾ ಕಾಂಗ್ರೆಸ್ ಅಭ್ಯರ್ಥಿ ಅಕ್ಟೋಬರ್ 15ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಅಂದು ನಾನು ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇರುತ್ತೇವೆ ಎಂದು ಎಂದು ತಿಳಿಸಿದರು.
ತುಮಕೂರು ಜಿಲ್ಲೆಯ ಶಿರಾ ಮತ್ತು ಬೆಂಗಳೂರಿನ ಆರ್.ಆರ್.ನಗರ ಕ್ಷೇತ್ರಗಳಿಗೆ ನ.03ರಂದು ಮತದಾನ ನಡೆಯಲಿದ್ದು, ನ.10ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಸಲು ಅ.16 ಕೊನೆಯ ದಿನವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.