ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ನ ಎರಡನೇ ಪಟ್ಟಿಅಂತಿಮಗೊಳಿಸುವ ಸಂಬಂಧ ಏ.4ರಂದು ಮಂಗಳವಾರ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿ (ಸಿಇಸಿ) ಸಭೆ ನಡೆಯಲಿದೆ.
ಬೆಂಗಳೂರು (ಏ.3) : ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ನ ಎರಡನೇ ಪಟ್ಟಿಅಂತಿಮಗೊಳಿಸುವ ಸಂಬಂಧ ಏ.4ರಂದು ಮಂಗಳವಾರ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿ (ಸಿಇಸಿ) ಸಭೆ ನಡೆಯಲಿದೆ.
124 ಅಭ್ಯರ್ಥಿಗಳ ಪಟ್ಟಿಯನ್ನು ಸಲೀಸಾಗಿ ಬಿಡುಗಡೆ ಮಾಡಿದ್ದ ಕಾಂಗ್ರೆಸ್ ಪಕ್ಷವು ಎರಡನೇ ಪಟ್ಟಿಯಲ್ಲಿ ಪ್ರಕಟಿಸಬೇಕಿರುವ 100 ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ತೀವ್ರ ಕಸರತ್ತು ನಡೆಸುತ್ತಿದೆ.
ಸ್ಮಶಾನದಲ್ಲಿ ಪೂಜೆ ಸಲ್ಲಿಸಿ ಪ್ರಚಾರಕ್ಕೆ ಚಾಲನೆ: ರಾಹುಕಾಲದಲ್ಲಿ ನಾಮಪತ್ರ ಸಲ್ಲಿಕೆ- ಸತೀಶ
ಈಗಾಗಲೇ ಗುರುವಾರ ಹಾಗೂ ಶುಕ್ರವಾರ ಮೋಹನ್ ಪ್ರಕಾಶ್(Mohan Prakash) ಅಧ್ಯಕ್ಷತೆಯ ಸ್ಕ್ರೀನಿಂಗ್ ಸಮಿತಿಯು ಎರಡು ದಿನ ಕಸರತ್ತು ನಡೆಸಿ 100 ಕ್ಷೇತ್ರಗಳ ಸಂಭಾವ್ಯರ ಪಟ್ಟಿಯನ್ನು ಎಐಸಿಸಿಗೆ ಸಲ್ಲಿಸಿದೆ. ಮಂಗಳವಾರ ನಡೆಯಲಿರುವ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆಯಲ್ಲೇ 100 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರುಗಳು ಆಖೈರುಗೊಳ್ಳಲಿವೆ ಎಂದು ಮೂಲಗಳು ತಿಳಿಸಿವೆ.
ಭಾನುವಾರ ಈ ಬಗ್ಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್(DK Shivakumar), ಮಂಗಳವಾರ ಸಿಇಸಿ ಸಭೆ ನಡೆಯಲಿದೆ. ಬಳಿಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjun kharge) ಅಂತಿಮ ಪಟ್ಟಿಬಿಡುಗಡೆ ಮಾಡಲಿದ್ದಾರೆ ಎಂದು ಹೇಳಿದರು.
ಸ್ಯಾಂಕಿ ಮೇಲ್ಸೇತುವೆ: ಪ್ರಿಯಾಂಕ್ ಖರ್ಗೆ -ಅಶ್ವತ್ಥ ನಾರಾಯಣ ನಡುವೆ ಜಟಾಪಟಿ!
ಪಕ್ಷದಲ್ಲಿ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ. ಆದರೆ ಯಾವುದೇ ಗೊಂದಲ ಇಲ್ಲ. ಬೇರೆ ಪಕ್ಷಗಳಲ್ಲಿ ಬೆದರಿಕೆ ತಂತ್ರ ನಡೆಯಬಹುದು, ಕಾಂಗ್ರೆಸ್ ಪಕ್ಷದಲ್ಲಿ ನಡೆಯುವುದಿಲ್ಲ. ಬಿಜೆಪಿಯಲ್ಲಿ ಬೆದರಿಕೆ ಇಲ್ಲವೇ? ಅವರು ಪಟ್ಟಿಪ್ರಕಟಿಸದಿರುವುದೇಕೆ? ದಿನಾಂಕ ಮುಂದೂಡುತ್ತಿರುವುದೇಕೆ? ಅವರ ಪಕ್ಷದಲ್ಲಿ ಆಂತರಿಕ ಸಮಸ್ಯೆ ಇದೆ. ಜೆಡಿಎಸ್‌ನಲ್ಲೂ ಆಂತರಿಕ ಸಮಸ್ಯೆ ಇದೆ. ಇದೇ ಕಾರಣಕ್ಕೆ ಅನೇಕ ನಾಯಕರು ಕಾಂಗ್ರೆಸ್ ಸೇರಿದ್ದಾರೆ ಎಂದರು.