
ಬೆಂಗಳೂರು(ಜು.05): ಹೊಸ ಕಾಂಗ್ರೆಸ್ ಸರ್ಕಾರ ಮೊದಲ ದಿನವೇ ಪ್ರಜಾಪ್ರಭುತ್ವ ವಿರೋಧಿ ನಡೆ ಅನುಸರಿಸಿದ್ದು, ಜನರಿಗೆ ಯಾವ ಗ್ಯಾರಂಟಿ ಹೇಳಿದ್ದರೋ ಅದನ್ನು ಅನುಷ್ಠಾನ ಮಾಡುವಲ್ಲಿ ಮೋಸ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯಿಂದ ಮನೆಯಲ್ಲಿ ಯಾರು ಯಜಮಾನಿ ಎಂದು ಗಲಾಟೆ ಶುರುವಾಗುವಂತೆ ಮಾಡಿದೆ. ಗೃಹಜ್ಯೋತಿ ಯೋಜನೆ ಘೋಷಿಸಿ ಮೂರು ಪಟ್ಟು ಬಿಲ್ ಹೆಚ್ಚಳ ಮಾಡಿ ಜನರಿಗೆ ಭಾರ ಮಾಡಿದೆ. ಬಸ್‌ಗಳಲ್ಲಿ ಗೊಂದಲ ಹೆಚ್ಚಾಗಿದೆ. ಶಾಲಾ ಮಕ್ಕಳಿಗೆ ಬಸ್ ಇಲ್ಲ. ಕಿಟಿಕಿಯಲ್ಲಿ ಬಸ್ ಹತ್ತುವಂತಾಗಿದೆ. ಯುವ ನಿಧಿ ಏನಾಗಿದೆ ಗೊತ್ತಿಲ್ಲ. ಅಕ್ಕಿಯಲ್ಲಿ ದೊಡ್ಡ ಗೋಲ್‌ಮಾಲ್ ನಡೆಯುತ್ತಿದೆ. ಎಷ್ಟು ಅಕ್ಕಿ ಕೊಡುತ್ತಾರೋ ಗೊತ್ತಿಲ್ಲ. ಈ ಸರ್ಕಾರದ ಮುಖವಾಡ ಬಯಲಾಗಿದೆ. ಇವರ ಬಣ್ಣ ಬಯಲಾಗಿದೆ ಎಂದು ವಾಗ್ದಾಳಿ ನಡೆಸಿದರು.
ರಾಜ್ಯಪಾಲರ ಬೊಗಳೆ ಭಾಷಣ ಸಪ್ಪೆ, ಸುಳ್ಳಿನ ಕಂತೆ: ಮಾಜಿ ಸಿಎಂ ಬೊಮ್ಮಾಯಿ ಟೀಕೆ
ಗ್ಯಾರಂಟಿ ಯೋಜನೆಗಳ ಗೊಂದಲಗಳ ಕುರಿತು ಚರ್ಚಿಸಲು ನಾವು ಅವಕಾಶ ಕೇಳಿದ್ದೇವೆ. ಅದಕ್ಕೆ ಅವಕಾಶ ನೀಡದೆ ಸರ್ಕಾರ ಹಟಮಾರಿತನ, ಮೊಂಡುತನ ಮಾಡುತ್ತಿದೆ. ಸಭಾಧ್ಯಕ್ಷರ ಮೇಲೆ ಒತ್ತಡ ತಂದು ಅವಕಾಶ ಕೊಡದಂತೆ ತಡೆಯುತ್ತಿದ್ದಾರೆ. ರಾಜ್ಯದಲ್ಲಿ ಬರ ಬಂದಿದೆ. ಕುಡಿಯುವ ನೀರಿನ ಸಮಸ್ಯೆ ಇದೆ. ಇದೆಲ್ಲದರ ಬಗ್ಗೆ ಚರ್ಚೆ ಮಾಡಬೇಕಿದೆ. ಸರ್ಕಾರ ಮೊದಲ ದಿನವೇ ವಿರೋಧ ಪಕ್ಷವನ್ನು ಬಾವಿಗೆ ತಳ್ಳುವ ಕೆಲಸ ಮಾಡಿದೆ. ಸರ್ಕಾರ ಧೋಖಾ ಮಾಡಿದ್ದು, ನಮ್ಮ ಬೇಡಿಕೆ ಇಷ್ಟೆ, ನೀವು ಕೊಟ್ಟ ಭರವಸೆ ಈಡೇರಿಸಲು ಒತ್ತಾಯಿಸಿದ್ದೇವೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.