
ಬೆಂಗಳೂರು, (ಮಾ.28): ರಾಸಲೀಲೆ ಸಿಡಿ ಪ್ರಕರಣದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಬಂಧಿಸುವಂತೆ ಆಗ್ರಹಿಸಿ ಬೆಂಗಳೂರು ನಗರ ಕಾಂಗ್ರೆಸ್ ಪ್ರಚಾರ ಸಮಿತಿ ಕಬ್ಬನ್ ಪಾರ್ಕ್ ಠಾಣೆಗೆ ಮನವಿ ಸಲ್ಲಿಸಿದೆ.
ಪ್ರಚಾರ ಸಮಿತಿಯ ಅಧ್ಯಕ್ಷ ವೈ.ಪುಟ್ಟರಾಜು ನೇತೃತ್ವದಲ್ಲಿ ಕಬ್ಬನ್ ಪಾರ್ಕ್ ಠಾಣೆಗೆ ತೆರಳಿ ಮನವಿ ಪತ್ರ ನೀಡಲಾಗಿದೆ.
ಸಿ.ಡಿ.ಕೇಸ್: ರಮೇಶ್ ಜಾರಕಿಹೊಳಿಗೆ ನೋಟಿಸ್!
ರಮೇಶ್ ಜಾರಕಿಹೊಳಿ ವಿರುದ್ಧ ಈಗಾಗಲೇ ಎಫ್‌ಐಆರ್ ದಾಖಲಾಗಿದ್ದರೂ, ಅವರನ್ನು ಬಂಧಿಸಿಲ್ಲ. ಇದು ಪೊಲೀಸ್ ಇಲಾಖೆ ಮೇಲೆ ಅನುಮಾನಕ್ಕೆ ಕಾರಣವಾಗಿವೆ. ಜಾರಕಿಹೊಳಿ ವಿರುದ್ಧ ಜಾಮೀನು ರಹಿತ ಸೆಕ್ಷನ್ ಗಳಿವೆ. ಪೊಲೀಸ್ ಇಲಾಖೆ ತಕ್ಷಣ ರಮೇಶ್ ಅವರನ್ನು ಬಂಧಿಸಬೇಕು ಹಾಗೂ ನೊಂದ ಯುವತಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ನಿಯೋಗ ಒತ್ತಾಯಿಸಿದೆ.
ಕಾಂಗ್ರೆಸ್ ಮುಖಂಡ ಮನೋಹರ್ ಮಾತನಾಡಿ, ತಕ್ಷಣವೇ ಪೊಲೀಸರು ರಮೇಶ್ ಜಾರಕಿಹೊಳಿ ಬಂಧಿಸಬೇಕು. ಎಸ್ಐಟಿ ಕೂಡಲೇ ಸಿಡಿ ಕೇಸ್ ಸಂಬಂಧ ಕ್ರಮ ತೆಗೆದುಕೊಳ್ಳಬೇಕು ಆಗ್ರಹಿಸಿದರು.
ಇನ್ನು ಕನಪುರದಲ್ಲಿ ಡಿಕೆಶಿ ಅವರನ್ನು ಸೋಲಿಸುವುದಾಗಿ ಜಾರಕಿಹೊಳಿ ಹೇಳಿಕೆ ಪ್ರತಿಕ್ರಿಯಿಸಿ, ರಮೇಶ್ ಜಾರಕಿಹೊಳಿ ಈ ಭಾಗದಲ್ಲಿ ಒಂದು ಗ್ರಾಮ ಪಂಚಾಯತಿ ಚುನಾವಣೆ ಗೆಲ್ಲುವುದಕ್ಕೆ ಆಗುವುದಿಲ್ಲ ಎಂದು ಅವರು ವ್ಯಂಗವಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.