Latest Videos

ಬಿಎಸ್‌ವೈ ಕುಟುಂಬ ನಾಶಕ್ಕೆ ಕಾಂಗ್ರೆಸ್‌ ಕುತಂತ್ರ: ಎಚ್‌.ಡಿ.ಕುಮಾರಸ್ವಾಮಿ

By Kannadaprabha NewsFirst Published Jun 15, 2024, 4:45 AM IST
Highlights

ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಕುಟುಂಬ ಮುಗಿಸಲು ಪ್ರಯತ್ನಿಸಿದ ಕಾಂಗ್ರೆಸ್‌ ಇದೀಗ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಕುಟುಂಬವನ್ನು ಮುಗಿಸಲು ಕುತಂತ್ರ ನಡೆಸಿದೆ ಎಂದು ಕೇಂದ್ರದ ಭಾರಿ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್‌.ಡಿ.ಕುಮಾರಸ್ವಾಮಿ ಆಪಾದಿಸಿದ್ದಾರೆ. 

ಬೆಂಗಳೂರು (ಜೂ.15): ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಕುಟುಂಬ ಮುಗಿಸಲು ಪ್ರಯತ್ನಿಸಿದ ಕಾಂಗ್ರೆಸ್‌ ಇದೀಗ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಕುಟುಂಬವನ್ನು ಮುಗಿಸಲು ಕುತಂತ್ರ ನಡೆಸಿದೆ ಎಂದು ಕೇಂದ್ರದ ಭಾರಿ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್‌.ಡಿ.ಕುಮಾರಸ್ವಾಮಿ ಆಪಾದಿಸಿದ್ದಾರೆ.  ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, 82 ವರ್ಷದ ರಾಜ್ಯದ ರೈತ ನಾಯಕ ಯಡಿಯೂರಪ್ಪ ಅವರ ಮೇಲೆ ಕಾಂಗ್ರೆಸ್‌ ಸೇಡಿನ ರಾಜಕಾರಣ ಮಾಡುತ್ತಿದೆ. ಅವರನ್ನು ಜೈಲಿಗೆ ಕಳಿಸಲೇಬೇಕು ಎಂಬಂತೆ ಕಾಂಗ್ರೆಸ್‌ ಕೆಲಸ ಮಾಡುತ್ತಿದೆ. ಯಡಿಯೂರಪ್ಪ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಕೆಲಸ ಮಾಡಲಾಗುತ್ತಿದೆ. 

ಆದರೆ, ಅವರ ಪ್ರಯತ್ನ ಫಲಪ್ರದ ಆಗುವುದಿಲ್ಲ ಎಂದು ಹೇಳಿದರು. ನಮ್ಮ ಕುಟುಂಬವನ್ನು ಮುಗಿಸಲು ಏನೇನೆಲ್ಲ ಮಾಡಿದರು ಎಂಬುದು ಗೊತ್ತಿದೆ. ಈಗ ಯಡಿಯೂರಪ್ಪ ಕುಟುಂಬ ಮುಗಿಸಲು ಹೊರಟಿದ್ದಾರೆ. ನಾಲ್ಕು ತಿಂಗಳ ಹಿಂದಿನ ಪ್ರಕರಣ ಇದು. ಇವತ್ತು ಯಡಿಯೂರಪ್ಪ ಅವರ ಮೇಲೆ ಜಾಮೀನುರಹಿತ ಕೇಸ್ ಹಾಕಲು ಹೊರಟಿದ್ದಾರೆ. ಯಡಿಯೂರಪ್ಪ ಅವರಿಗೆ ನ್ಯಾಯಾಲಯದಿಂದ ರಿಲೀಫ್‌ ಸಿಕ್ಕಿದೆ. ಸರ್ಕಾರದಲ್ಲಿ ಕಾನೂನು ಅನುಭವ ಇರುವವರು ಸಾಕಷ್ಟು ಮಂದಿ ಇದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ನಾಲ್ಕು ತಿಂಗಳ ನಂತರ ಪ್ರಕರಣವನ್ನು ಕೆದಕಿದ್ದಾರೆ ಎಂದು ಕುಮಾರಸ್ವಾಮಿ ಹರಿಹಾಯ್ದರು.

ಪೋಕ್ಸೋ ಪ್ರಕರಣದಿಂದ ಯಡಿಯೂರಪ್ಪರನ್ನು ಕುಗ್ಗಿಸುವ ಕುತಂತ್ರ: ಸಂಸದ ರಾಘವೇಂದ್ರ

ವಿವಿಧ ಕಾಮಗಾರಿಗಳ ಉದ್ಘಾಟನೆ: ಶಾಸಕರೂ ಆದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಶಾಸಕತ್ವದ ಅವಧಿಯಲ್ಲಿ ಚನ್ನಪಟ್ಟಣದಲ್ಲಿ ಕೈಗೊಂಡಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಜೂ.15ಂದು ಶನಿವಾರ ಉದ್ಘಾಟಿಸಲಿದ್ದು, ಮೈತ್ರಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಮನವಿ ಮಾಡಿದರು.

ಮೈತ್ರಿಕೂಟ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು. ಕೇಂದ್ರ ಸಚಿವರಾದ ನಂತರ ತಾಲೂಕಿಗೆ ಮೊದಲ ಬಾರಿಗೆ ಆಗಮಿಸುತ್ತಿರುವ ಕುಮಾರಸ್ವಾಮಿಯವರನ್ನು ಅದ್ಧೂರಿಯಾಗಿ ಸ್ವಾಗತಿಸಿ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಗಿತ್ತು. ಆದರೆ, ಕುಮಾರಸ್ವಾಮಿ ಸೂಚನೆ ಮೇರೆಗೆ ಕಾರ್ಯಕ್ರಮವನ್ನು ಬದಲಾಯಿಸಲಾಗಿದೆ. ಶನಿವಾರ ಪೂರ್ಣಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಎಚ್‌ಡಿಕೆ ಉದ್ಘಾಟಿಸಲಿದ್ದಾರೆ. ಮುಂದಿನ ದಿನಗಳಲ್ಲಿ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಪೋಕ್ಸೋ ಪ್ರಕರಣ: ಬಿಎಸ್‌ವೈಗಾಗಿ ದೆಹಲಿಯಲ್ಲಿ ಸಿಐಡಿ ಅಧಿಕಾರಿಗಳ ತಂಡದಿಂದ ತಲಾಶ್‌!

ಜೆಡಿಎಸ್ ತಾಲೂಕು ಅಧ್ಯಕ್ಷ ಎಚ್.ಸಿ.ಜಯಮುತ್ತು ಮಾತನಾಡಿ, ಕುಮಾರಸ್ವಾಮಿ ಕ್ಷೇತ್ರದಿಂದ ಆಯ್ಕೆಯಾಗಿ ಮುಖ್ಯಮಂತ್ರಿಯೂ ಆಗಿದ್ದಾರೆ. ಅವರ ಅವಧಿಯಲ್ಲಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು, ಅವುಗಳಲ್ಲಿ ಕೆಲವು ಪೂರ್ಣಗೊಂಡಿದ್ದವಾದರೂ ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಕಾರಣಕ್ಕೆ ಉದ್ಘಾಟನೆಗೊಂಡಿರಲಿ. ಇದೀಗ ಅವರು ಕೇಂದ್ರ ಸಚಿವರಾಗಿದ್ದು, ಅವರ ಅವಧಿಯಲ್ಲಿ ಕೈಗೊಂಡು ಕಾಮಗಾರಿಗಳನ್ನು ಅವರೆ ಉದ್ಘಾಟಿಸಲಿದ್ದಾರೆ ಎಂದರು.

click me!