
ಉಡುಪಿ(ಜ.04): ದೇಶದಲ್ಲಿ ಗಲಭೆ ನಡೆಸುವುದಕ್ಕೆ ಕಾಂಗ್ರಸ್ ಪಿತೂರಿ ನಡೆಸುತ್ತಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ಮತ್ತೊಂದು ಗೋದ್ರಾ ಘಟನೆ ನಡೆಯಬಹುದು ಎಂದಿದ್ದಾರೆ. ಅವರು ಹಿರಿಯ ಮುತ್ಸದ್ಧಿ, ರಾಜಕಾರಣಿ ಅವರೇ ಹೀಗೆ ಹೇಳುತ್ತಿದ್ದಾರೆ ಎಂದರೆ ಕಾಂಗ್ರೆಸ್ ಬಹುದೊಡ್ಡ ಪಿತೂರಿ ಮಾಡಲು ಹೊರಟಿದೆ, ಆದ್ದರಿಂದ ದೇಶದಲ್ಲಿ ಗಲಭೆಯಾದರೆ ಕಾಂಗ್ರೆಸ್ಸೇ ಕಾರಣವಾಗುತ್ತದೆ, ರಾಜ್ಯದಲ್ಲಿ ಗಲಭೆ ನಡೆದರೆ ಸಿದ್ದರಾಮಯ್ಯ ಕಾರಣ ಆಗುತ್ತಾರೆ ಎಂದವರು ಎಚ್ಚರಿಕೆ ನೀಡಿದರು.
ಅಯೋಧ್ಯೆಗೆ ಬಂದು ಪ್ರಾಯಶ್ಚಿತ್ತ ಮಾಡಿಕೊಳ್ಳಿ: ಕಾಂಗ್ರೆಸ್ ನಾಯಕರಿಗೆ ಸುನಿಲ್ ಕುಮಾರ್ ಸಲಹೆ
ಅಂದು ಆಯೋಧ್ಯೆಯಲ್ಲಿ ಕರಸೇವೆ ಮಾಡಿ ಬರುತ್ತಿರುವ 59 ಜನ ಹಿಂದೂಗಳ ಮೇಲೆ ಪೆಟ್ರೋಲ್ ಬಾಂಬ್ ಎಸೆದು ಹತ್ಯೆ ಮಾಡಿದ್ದರು, ನಂತರ ಶ್ರೀರಾಮ ಕಾಲ್ಪನಿಕ ಎಂದರು, ಈಗ ಮತ್ತೆ ಗೋದ್ರಾ ಘಟನೆ ಆಗುತ್ತದೆ ಎನ್ನುತ್ತಿದ್ದಾರೆ, ಭಕ್ತರಲ್ಲಿ ಭಯ ಭೀತಿ ಹೆಚ್ಚಿಸುವ ಹೇಳಿಕೆ ಇದು, ಇಂತಹ ಹೇಳಿಕೆಗಳಿಗೆ ಮಾಹಿತಿ, ಆಧಾರ ಇದ್ದರೆ ಸರ್ಕಾರ ವಿಚಾರಣೆ ಮಾಡಲಿ ಎಂದು ಕೋಟ ಆಗ್ರಹಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.