ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಗೆ ಡಿಕೆ ಶಿವಕುಮಾರ್ ಸಮಿತಿಯೊಂದನ್ನು ರಚಿಸಿದ್ದಾರೆ. ಸಮಿತಿಯಲ್ಲಿ ಯಾರು-ಯಾರು ಇದ್ದಾರೆ?
ಬೆಂಗಳೂರು/ಬೆಳಗಾವಿ, (ನ.11): ಶಿರಾ ಹಾಗೂ ಆರ್.ಆರ್.ನಗರ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಮುಗಿದ ಬೆನ್ನಲ್ಲೇ ಕಾಂಗ್ರೆಸ್ ಬೆಳಗಾವಿ ಲೋಕಸಭಾ ಬೈ ಎಲೆಕ್ಷನ್ ನತ್ತ ಚಿತ್ತ ಹರಿಸಿದೆ.
ಹೌದು...ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಸುರೇಶ ಅಂಗಡಿ ಅವರ ಅಕಾಲಿಕ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಪಕ್ಷದ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಸಲುವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಮಿತಿಯೊಂದನ್ನು ರಚಿಸಿದ್ದಾರೆ.
undefined
ಆರ್‌ಆರ್ ನಗರ, ಶಿರಾ ಬೈ ಎಲೆಕ್ಷನ್ ಮುಗಿಯುತ್ತಿದ್ದಂತೆಯೇ ಮತ್ತೆರೆಡು ಉಪಚುನಾವಣೆಗೆ ಸಿದ್ಧತೆ
ಅಧ್ಯಕ್ಷರಾಗಿ ಶಾಸಕ ಎಂ.ಬಿ ಪಾಟೀಲ್, ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರನ್ನು ಸಂಯೋಜಕರಾಗಿ ನೇಮಿಸಿದ್ದಾರೆ. ಎಲ್. ಹನುಮಂತಯ್ಯ, ಎಚ್.ಎಂ. ರೇವಣ್ಣ, ವೀರಕುಮಾರ ಎ. ಪಾಟೀಲ, ಅಜಯಕುಮಾರ್ ಸರ್‌ನಾಯಕ್, ಅನಿಲ್ ಲಾಡ್, ಜಿ.ಎಸ್. ಪಾಟೀಲ, ಬಸವರಾಜ ಶಿವಣ್ಣನವರ, ಶ್ರೀನಿವಾಸ ವಿ. ಮಾನೆ, ನಾಗರಾಜ್ ಚೆಬ್ಬಿ ಅವರನ್ನು ಸದಸ್ಯರನ್ನಾಗಿ ಆಯ್ಕೆ ಮಾಡಿದ್ದಾರೆ.
ಪಕ್ಷದ ಮುಖಂಡರು ಹಾಗೂ ಜನಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಿ, ಸೂಕ್ತ ಅಭ್ಯರ್ಥಿ ಆಯ್ಕೆ ಮಾಡಿ ಆಕಾಂಕ್ಷಿಗಳ ಪಟ್ಟಿ ತಯಾರಿಸಿ ಕೆಪಿಸಿಸಿಗೆ ಕೂಡಲೇ ಸಲ್ಲಿಸಬೇಕು ಎಂದು ಸೂಚಿಸಿದ್ದಾರೆ.
ರಾಜ್ಯದಲ್ಲಿ ಮತ್ತೆರೆಡು ಬೈ ಎಲೆಕ್ಷನ್: ವಿಜಯೇಂದ್ರಗೆ ಫುಲ್ ಡಿಮ್ಯಾಂಡ್
ಇದೇ ನವೆಂಬರ್‌ನಲ್ಲಿ ಬೆಳಗಾವಿ ಲೋಕಸಭಾ ಸೇರಿದಂತೆ ಬಸವಕಲ್ಯಾಣ ಹಾಗೂ ಮಸ್ಕಿ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗುವ ಸಾಧ್ಯತೆಗಳಿವೆ.
ಈಗಾಗಲೇ ಶಿರಾ ಹಾಗೂ ಆರ್‌ಆರ್ ನಗರ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಕಂಡಿದೆ. ಇದರಿಂದ ಎಚ್ಚತ್ತ ಡಿಕೆ ಶಿವಕುಮಾರ್ ಅವರು ಈಗಿನಿಂದಲೇ ಪಕ್ಷ ಸಂಘಟನೆಗೆ ಮುಂದಾಗಿದೆ.