ರಾಜ್ಯದಲ್ಲಿ ಮಳೆಯಬ್ಬರ : ಸರ್ಕಾರದ ವಿರುದ್ಧ ಕೈ ಸಮರ

By Suvarna NewsFirst Published Sep 21, 2020, 11:02 AM IST
Highlights

ರಾಜ್ಯದಲ್ಲಿ ಮಳೆ ಅಬ್ಬರಿಸುತ್ತಿದೆ. ಇದೇ ವೇಳೆ ಹಲವೆಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಕಾಂಗ್ರೆಸ್ ಕಲಾಪದಲ್ಲಿ ನಿಲುವಳಿ ಸೂಚನೆ ಮಂಡನೆಗೆ ನಿರ್ಧರಿಸಿದೆ.

ಬೆಂಗಳೂರು(ಸೆ.21): ರಾಜ್ಯದಲ್ಲಿ ಭಾರೀ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ಬಗ್ಗೆ ಕಾಂಗ್ರೆಸ್ ನಿಲುವಳಿ ಸೂಚನೆ ಮಂಡಿಸಲು ನಿರ್ಧರಿಸಿದೆ.

ನಿಲುವಳಿ ಸೂಚನೆ ನಿಯಮ 60ರ ಅಡಿಯಲ್ಲಿ ವಿಧಾನಸಭೆ ಅಧಿವೇಶನದ ಆರಂಭದ ದಿನವೇ ಕಾಂಗ್ರೆಸ್ ನಿಲುವಳಿ ಸೂಚನೆ ಮಂಡಿಸಲು ತೀರ್ಮಾನಿಸಿದೆ. 

' ಜೋಡೆತ್ತುಗಳ ನಡುವೆ ಮುನಿಸು : ಶಿರಾದಲ್ಲಿ ಬಿಜೆಪಿ ಗೆಲುವು ಕನ್ಫರ್ಮ್' ...

ರಾಜ್ಯದಲ್ಲಿ ಕುಂಭದ್ರೋಣ ಮಳೆ ಅಬ್ಬರಿಸುತ್ತಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ರೈತರ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ. 

ರಾಜ್ಯ ಬಿಜೆಪಿ ಸರ್ಕಾರ ಪ್ರವಾಹ ಪರಿಹಾರ ಕಾಮಗಾರಿಯನ್ನು ಸಮರ್ಥವಾಗಿ ನಿರ್ವಹಿಸಿಲ್ಲ. ಈಗಲೂ ರಾಜ್ಯದಲ್ಲಿ ಭಾರೀ ಮಳೆ ಆಗುತ್ತಿದೆ. ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ನಿಯಮ 60ರ ಅಡಿಯಲ್ಲಿ ನಿಲುವಳಿ ಸೂಚನೆ ಮಂಡನೆಗೆ ಕಾಂಗ್ರೆಸ್ ನಿರ್ಧರಿಸಿದೆ.

ಮೂಲೆ ಮೂಲೆಗೂ ಸ್ಯಾನಿಟೈಸೇಶನ್

ಇಂದಿನಿಂದ ವಿಧಾನಸಭಾ ಕಲಾಪ ಆರಂಭ ಹಿನ್ನೆಲೆ ವಿಧಾನಸೌಧದ ಮೂಲೆ ಮೂಲೆಗೂ ಸ್ಯಾನಿಟೈಸೇಷನ್ ಮಾಡಲಾಗಿದೆ.

ಕೊರೋನ ಇರುವ ಕಾರಣ ಬಹಳ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುತ್ತಿರುವ ಸಚಿವಾಲಯ, ಪ್ರತಿಯೊಂದು ಕೊಠಡಿ, ಗೋಡೆ, ಕಂಬಗಳಿಗೆಲ್ಲಾ ಸ್ಯಾನಿಟೈಸ್ ಮಾಡಿ ಸ್ವಚ್ಚ ಗೊಳಿಸಲಾಗುತ್ತಿದೆ. 

  ಈಗಾಗಲೇ ಇಲ್ಲಿನ ಎಲ್ಲ ಸಿಬ್ಬಂದಿಗಳಿಗೂ ಕೋವಿಡ್ ಟೆಸ್ಟ್ ಮಾಡಿಸಲಾಗಿದೆ. ಇದೀಗ ಸ್ಯಾನಿಟೈಸ್ ಮಾಡಿಸಲಾಗ್ತಿದೆ.  ಕಲಾಪ ಮುಗಿದ ನಂತರ ಸಂಜೆ ಮತ್ತೊಂದು ಸಲ ಕೂಡಾ ಸ್ಯಾನಿಟೈಸ್ ಮಾಡಲಾಗುತ್ತದೆ.  ದಿನಕ್ಕೆ ಎರಡು ಬಾರಿ ಸ್ಯಾನಿಟೈಸ್ ಮಾಡಿಸಲಾಗುತ್ತದೆ

click me!