
ಬೆಂಗಳೂರು, (ಮೇ.03): ಚಾಮರಾಜನಗರದಲ್ಲಿ ತಡರಾತ್ರಿ ಆಕ್ಸಿಜನ್ ಕೊರತೆಯಾದ ಪರಿಣಾಮ 24 ರೋಗಿಗಳು ಸಾವನ್ನಪ್ಪಿದ್ದಾರೆ. ಆಕ್ಸಿಜನ್ ಕೊರತೆಗೆ ಸರ್ಕಾರವೇ ಕಾರಣ ಎಂದು ಟೀಕಿಸಿರುವ ಕಾಂಗ್ರೆಸ್, ಆರೋಗ್ಯ ಇಲಾಖೆ ಸಚಿವ ಡಾ. ಕೆ. ಸುಧಾಕರ್ ವಿರುದ್ಧ ಕಿಡಿಕಾರಿದೆ.
ಡಾ. ಸುಧಾಕರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಸುಧಾಕರ್ ಅವರೇ, ಸಿ.ಡಿಗೆ ತಡೆಯಾಜ್ಞೆ ತರುವಲ್ಲಿ ತಾವು ತೋರಿದ ತರಾತುರಿಯನ್ನು ಆಕ್ಸಿಜನ್ ವಿಚಾರದಲ್ಲಿ ತೋರದಿದ್ದದ್ದು ಏಕೆ..? ಈ ಸಾವುಗಳ ಹೊಣೆ ನಿಮ್ಮದಲ್ಲದೆ ಇನ್ಯಾರದ್ದು ಎಂದು ಪ್ರಶ್ನಿಸಿದೆ. ಅಲ್ಲದೇ #ResignKillerSudhakar ಎಂದು ಹ್ಯಾಷ್ಟ್ಯಾಗ್ ಬಳಸಿ ಆಗ್ರಹಿಸಿದೆ.
'ಸಚಿವರು ಕೋರ್ಟ್ ಮೊರೆ ಹೋಗಿದ್ದಾರೆ ಅಂದ್ರೆ ಎಲ್ಲೋ ಒಂದ್ಕಡೆ ಅನುಮಾನ ಬಂದಿದೆ'
ಬಿಜೆಪಿ ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರದ್ದು ಎನ್ನಲಾದ ಸಿ.ಡಿ ಬಿಡುಗಡೆಯಾದ ಬೆನ್ನಲ್ಲೇ ಡಾ. ಸುಧಾಕರ್ ಆದಿಯಾಗಿ ಹಲವು ಸಚಿವರು ಕೋರ್ಟ್ ಮೊರೆ ಹೋಗಿದ್ದರು. ಮಾಧ್ಯಮಗಳಲ್ಲಿ ತಮ್ಮ ವಿರುದ್ಧ ಮಾನಹಾನಿಕರ ಸುದ್ದಿಗಳನ್ನ ಪ್ರಸಾರ ಮಾಡದಂತೆ ತಡೆಯಾಜ್ಞೆ ತಂದಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.