ಕಾಂಗ್ರೆಸ್ ಶಾಸಕ ಮುಂಬೈನಿಂದ ನೇರವಾಗಿ ಕೋರ್ಟ್‌ಗೆ: ಸಭೆಗೂ ಡೌಟ್

Published : Jan 17, 2019, 03:36 PM ISTUpdated : Jan 17, 2019, 03:38 PM IST
ಕಾಂಗ್ರೆಸ್ ಶಾಸಕ ಮುಂಬೈನಿಂದ ನೇರವಾಗಿ ಕೋರ್ಟ್‌ಗೆ: ಸಭೆಗೂ ಡೌಟ್

ಸಾರಾಂಶ

ಕಾಂಗ್ರೆಸ್ ಅತೃಪ್ತ ಶಾಸಕಮುಂಬೈನಿಂದ ನೇರವಾಗಿ ಕೋರ್ಟ್ ಬಂದಿದ್ದು, ಜನವರಿ 18ರಂದು ನಡೆಯುವ ಶಾಸಕಾಂಗ ಸಭೆಗೆ ಗೈರಾಗುವ ಸುಳಿವು ನೀಡಿದ್ದಾರೆ.

ಬೆಂಗಳೂರು, (ಜ.17): ಆಪರೇಷನ್​ ಕಮಲದ ವದಂತಿ ಬೆನ್ನಲ್ಲೇ ಕಾಂಗ್ರೆಸ್​-ಜೆಡಿಎಸ್​​ ನಾಯಕರ ಸಂಪರ್ಕಕ್ಕೆ ಸಿಗದೆ ದೂರ ಉಳಿದಿದ್ದ ಬಳ್ಳಾರಿ ಗ್ರಾಮಾಂತರ ಶಾಸಕ ಬಿ. ನಾಗೇಂದ್ರ ಕೊನೆಗೂ ಬೆಂಗಳೂರಿನಲ್ಲಿ ಪ್ರತ್ಯಕ್ಷವಾಗಿದ್ದಾರೆ. 

ಅಕ್ರಮ ಗಣಿಗಾರಿಕೆ ಕೇಸ್​ ಸಂಬಂಧ ಕೋರ್ಟ್​​ಗೆ ಹಾಜರಾಗಲು ನಾಗೇಂದ್ರ ಬೆಂಗಳೂರಿಗೆ ಆಗಮಿಸಿದ್ದಾರೆ. ರಮೇಶ್ ಜಾರಕಿಹೊಳಿ ಜೊತೆ ಮುಂಬೈನಲ್ಲಿ ಉಳಿದುಕೊಂಡಿದ್ದ ನಾಗೇಂದ್ರ ಇದೀಗ ಬೆಂಗಳೂರಿಗೆ ಬಂದಿದ್ದಾರೆ. 

ಆಪರೇಷನ್ ಕಮಲ: ಇನ್ನೂ ಏನು ಮುಗಿದಿಲ್ಲ, ಪಿಕ್ಚರ್ ಅಭೀ ಬಾಕಿ ಹೈ..!

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ನನ್ನ ಖಾಸಗಿ ಕೆಲಸದ ನಿಮಿತ್ತ ಮುಂಬೈಗೆ ತೆರಳಿದ್ದೆ. ನ್ಯಾಯಾಲಯದ ವಿಚಾರಣೆ ಹಿನ್ನಲೆಯಲ್ಲಿ ಆಗಮಿಸಿದ್ದೇನೆ.

 ನಾಳೆಯೂ ವಿಚಾರಣೆಗೆ ಹಾಜರಾಗುವ ಅವಶ್ಯತೆ ಇದೆ ಎಂದು ಹೇಳುವ ಮೂಲಕ ನಾಳಿನ (ಶುಕ್ರವಾರ) ಕಾಂಗ್ರೆಸ್ ಶಾಸಕಾಂಗ ಸಭೆಗೆ ಗೈರು ಹಾಜರಾಗುವ ಕುರಿತು ಸುಳಿವು ನೀಡಿದರು.

ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ಬಗ್ಗೆ ನನಗೆ ಗೊತ್ತಿಲ್ಲ ಎನ್ನುವ ಮೂಲಕ ಆಪರೇಶನ್ ಕಮಲದ ಕುರಿತು ಯಾವುದೇ ಮಾಹಿತಿ ನೀಡಲು ನಿರಾಕರಿಸಿದರು.

"

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ
ಹೈಕಮಾಂಡ್‌ ನಿರ್ಧಾರ ಫೈನಲ್, ಪದೇ ಪದೆ ಯಾಕೆ ಕೇಳ್ತೀರಿ?: ಸಿಎಂ ಸಿದ್ದರಾಮಯ್ಯ