ಬಿಜೆಪಿ ಪಕ್ಷದ ರೀತಿ ಕಾಂಗ್ರೆಸ್ ಪಕ್ಷಕ್ಕೆ ಆ ರೀತಿಯ ಸ್ಟಾರ್‌ಗಳ ಅನಿವಾರ್ಯತೆ ಇಲ್ಲ ಎಂದು ರಾಜ್ಯ ಕಾಂಗ್ರೆಸ್ ಚುನಾವಣಾ ಪ್ರಚಾರ ರಾಯಭಾರಿ ಎಸ್.ನಾರಾಯಣ್ ಹೇಳಿದರು. ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಚಾಮರಾಜನಗರ (ಏ.12): ಬಿಜೆಪಿ ಪಕ್ಷದ ರೀತಿ ಕಾಂಗ್ರೆಸ್ ಪಕ್ಷಕ್ಕೆ ಆ ರೀತಿಯ ಸ್ಟಾರ್‌ಗಳ ಅನಿವಾರ್ಯತೆ ಇಲ್ಲ ಎಂದು ರಾಜ್ಯ ಕಾಂಗ್ರೆಸ್ ಚುನಾವಣಾ ಪ್ರಚಾರ ರಾಯಭಾರಿ ಎಸ್.ನಾರಾಯಣ್ ಹೇಳಿದರು. ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಕಾರ್ಯಕರ್ತರೇ ಸ್ಟಾರ್‌ಗಳ ರೀತಿ ಪಕ್ಷದ ಪ್ರಚಾರವನ್ನು ನಡೆಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರೇ ಸ್ಟಾರ್‌ಗಳು. ಕಾಂಗ್ರೆಸ್ ಪಕ್ಷಕ್ಕೆ ಸಿನಿಮಾ ಸ್ಟಾರ್‌ಗಳ ಅನಿವಾರ್ಯತೆ ಇಲ್ಲ ಎಂದರು. ಮೂರು ದಿನದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಮೂರನೇಯ ಲಿಸ್ಟ್ ಬಿಡುಗಡೆಯಾಗಲಿದ್ದು, ಅಭ್ಯರ್ಥಿಗಳ ಪಟ್ಟಿಬಿಡುಗಡೆಯಾದ ನಂತರ ಮೂರು ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಬಿಡುಗಡೆಯಾಗಲಿದೆ ಎಂದರು.
ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯಾಗಲು ಕಾಂಗ್ರೆಸ್ ಪಕ್ಷಕ್ಕೆ ಮತದಾರರು ಮತ ನೀಡಬೇಕು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ರಾಜ್ಯದ ಅಭಿವೃದ್ಧಿಯಾಗಲಿದೆ ಎಂದರು. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣೆ ಉಸ್ತುವಾರಿ ನನಗೆ ನೀಡಿದ್ದು, ಜಿಲ್ಲೆಯ 4 ವಿಧಾನಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆ ಉತ್ತಮ ವಾತಾವರಣವಿದ್ದು, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಜಿಲ್ಲೆಯಲ್ಲಿ ಅಧಿಕಾರ ಹಿಡಿಯಲಿದ್ದು, ಜಿಲ್ಲೆ ಕಾಂಗ್ರೆಸ್ ಭದ್ರಕೋಟೆ ಆಗಲಿದೆ ಎಂದರು. ಜಿಲ್ಲೆಯ 4 ವಿಧಾನಸಭೆ ಕ್ಷೇತ್ರದ ಅಭ್ಯರ್ಥಿಗಳನ್ನು ಭೇಟಿ ಮಾಡಿ, ಸಮಸ್ಯೆಗಳನ್ನು ಪಟ್ಟಿಮಾಡಿ ಪಕ್ಷದ ವರಿಷ್ಠರಿಗೆ ಕಳುಹಿಸಿಕೊಡಲಾಗುವುದು.
undefined
ಕಾಫಿನಾಡಲ್ಲಿ ಚುನಾವಣಾ ಅಧಿಕಾರಿಗಳ ಭರ್ಜರಿ ಬೇಟೆ: 20 ಲಕ್ಷ ಮೌಲ್ಯದ ಹಣ, ವಸ್ತುಗಳು ಜಪ್ತಿ
ಪ್ರಚಾರ ಕಾರ್ಯಕ್ರಮವನ್ನು ಆಯೋಜಿಸಲು ಪಕ್ಷದ ಅಭ್ಯರ್ಥಿಗಳ ಜೊತೆಗೆ ಮಾತುಕತೆ ನಡೆಸಿ ಪ್ರಚಾರದ ದಿನಾಂಕ ನಿಗದಿಪಡಿಸಲಾಗುವುದು ಎಂದರು. ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಎಸ್.ಶಿವಕುಮಾರ್ ಮಾತನಾಡಿ, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಪದಾಧಿಕಾರಿಗಳ ನೇಮಕಾತಿ ಮಾಡಲಾಗಿದ್ದು, ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮತಿ ಜಿಲ್ಲಾ ಸಂಯೋಜಕರಾಗಿ 12 ಮಂದಿ, ಚಾಮರಾಜನಗರ ವಿಧಾನಸಭೆ ಕ್ಷೇತ್ರದ ಸಂಯೋಜಕರು ಮತ್ತು ಸಹ ಸಂಯೋಜಕರಾಗಿ 10 ಮಂದಿ, ಗುಂಡ್ಲುಪೇಟೆ ವಿಧಾನಸಭೆ ಕ್ಷೇತ್ರದ ಸಂಯೋಜಕರು ಹಾಗೂ ಸಂಯೋಜಕರಾಗಿ 8 ಮಂದಿ, ಹನೂರು ವಿಧಾನಸಭೆ ಕ್ಷೇತ್ರದ ಸಂಯೋಜಕರು ಹಾಗೂ ಸಹ ಸಂಯೋಜಕರಾಗಿ 10 ಮಂದಿ, ಕೊಳ್ಳೇಗಾಲ ವಿಧಾನಸಭೆ ಕ್ಷೇತ್ರದ ಸಂಯೋಜಕರು ಹಾಗೂ ಸಹಸಂಯೋಜಕರಾಗಿ 9 ಮಂದಿ ನೇಮಕಮಾಡಲಾಗಿದೆ ಎಂದರು.
ಸಂಪರ್ಕ ಕೊರತೆಯಿಂದಾಗಿ ರಘುಪತಿ ಭಟ್ಟರಿಗೆ ವಿಷಯ ತಿಳಿಸಲು ಸಾಧ್ಯವಾಗಿಲ್ಲ: ಕೋಟ ಶ್ರೀನಿವಾಸ ಪೂಜಾರಿ
ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಆಲೂರು ಪ್ರದೀಪ್, ಸಹ ಸಂಯೋಜಕರಾದ ವಕೀಲ ಅರುಣ್ ಕುಮಾರ, ಬಸಪ್ಪನಪಾಳ್ಯ ನಟರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮದ್ ಆಸ್ಗರ್, ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ಹಾಜರಿದ್ದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.