
ಗುವಾಹಟಿ: ಚುನಾವಣೆಗೆ ಸಜ್ಜಾಗುತ್ತಿರುವ ಅಸ್ಸಾಂನಲ್ಲಿ ಕಾಂಗ್ರೆಸ್‌ಗೆ ದೊಡ್ಡ ಆಘಾತವಾಗಿದೆ. 2021-25ರ ಅವಧಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾಗಿದ್ದ ಭೂಪೇನ್ ಬೊಹ್ರಾ, 36 ವರ್ಷಗಳಿಂದ ಪಕ್ಷಕ್ಕಾಗಿ ಶ್ರಮಿಸಿದ ತಮ್ಮನ್ನು ಪಕ್ಷದಲ್ಲಿ ಕಡೆಗಣಿಸಲಾಗುತ್ತಿದೆ. ರಾಜ್ಯದಲ್ಲಿ ಪಕ್ಷದ ಭವಿಷ್ಯ ಕಳವಳಕಾರಿಯಾಗಿದೆ ಎಂದು ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಪಕ್ಷದ ಹಾಲಿ ರಾಜ್ಯಾದ್ಯಕ್ಷ ಗೌರವ್ ಗೊಗೋಯ್ ಜೊತೆಗಿನ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ ಅವರು ಈ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ. ಈ ಬೆಳವಣಿಗೆ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಪಕ್ಷದ ರಾಜೀನಾಮೆ ತಿರಸ್ಕರಿಸಿರುವುದಾಗಿ ಹೇಳಿದೆ. ಅಲ್ಲದೆ ಬೊಹ್ರಾ ರಾಜೀನಾಮೆ ಹಿಂದಕ್ಕೆ ಪಡೆದುಕೊಂಡಿರುವುದಾಗಿ ಹೇಳಿದೆ. ಮತ್ತೊಂದೆಡೆ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ, ಬೊಹ್ರಾ ಜೊತೆಗೆ ಮಾತುಕತೆ ನಡೆಸಿ ಓಲೈಕೆ ಯತ್ನ ಮಾಡಿದ್ದಾರೆ. ಆದರೆ ರಾಜೀನಾಮೆ ಇನ್ನೂ ಹಿಂದಕ್ಕೆ ಪಡೆದಿಲ್ಲ ಮಂಗಳವಾರ ಬೆಳಗ್ಗೆ ಈ ಕುರಿತು ನಿರ್ಧಾರ ಪ್ರಕಟಿಸುವುದಾಗಿ ಭೂಪೇನ್ ಹೇಳಿದ್ದಾರೆ.
ಈ ನಡುವೆ ಭೂಪೇನ್ ಬಿಜೆಪಿಗೆ ಸೇರಲು ಬಂದರೆ ಅವರಿಗೆ ಮುಕ್ತ ಆಹ್ವಾನವಿದೆ. ಅವರನ್ನು ಸುರಕ್ಷಿತ ಸ್ಥಾನದಿಂದ ವಿಧಾನಸಭೆಗೆ ಆಯ್ಕೆ ಮಾಡುವುದಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಆಹ್ವಾನ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.