ಯಾರ ಜತೆಗೂ ಮೈತ್ರಿಯ ಅಗತ್ಯ ಬಿಜೆಪಿಗಿಲ್ಲ : ಈಶ್ವರಪ್ಪ

Kannadaprabha News   | Asianet News
Published : Oct 25, 2021, 08:26 AM ISTUpdated : Oct 25, 2021, 08:31 AM IST
ಯಾರ ಜತೆಗೂ ಮೈತ್ರಿಯ ಅಗತ್ಯ ಬಿಜೆಪಿಗಿಲ್ಲ :  ಈಶ್ವರಪ್ಪ

ಸಾರಾಂಶ

 ಬಿಜೆಪಿ ಮತ್ತು ಜೆಡಿಎಸ್‌ ಹೊಂದಾಣಿಕೆ ಮಾಡಿಕೊಂಡಿವೆ ಎಂಬ ಕಾಂಗ್ರೆಸ್‌ ಆರೋಪಕ್ಕೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಹತಾಶೆ, ಸೋಲಿನ ಭೀತಿಯಿಂದ ಕಾಂಗ್ರೆಸ್‌ನವರು ಈ ರೀತಿಯ ಆರೋಪ ಮಾಡುತ್ತಿದ್ದಾರೆ

 ವಿಜಯಪುರ (ಅ.25) :  ಬಿಜೆಪಿ (BJP) ಮತ್ತು ಜೆಡಿಎಸ್‌ (JDS) ಹೊಂದಾಣಿಕೆ ಮಾಡಿಕೊಂಡಿವೆ ಎಂಬ ಕಾಂಗ್ರೆಸ್‌ (congress) ಆರೋಪಕ್ಕೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ (KS Eshwarappa) ತಿರುಗೇಟು ನೀಡಿದ್ದಾರೆ. ಹತಾಶೆ, ಸೋಲಿನ ಭೀತಿಯಿಂದ ಕಾಂಗ್ರೆಸ್‌ನವರು (Congress) ಈ ರೀತಿಯ ಆರೋಪ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಸಿಂದಗಿಯಲ್ಲಿ (Sindagi) ಭಾನುವಾರ ಪ್ರಚಾರದ ವೇಳೆ ಮಾತನಾಡಿ, ಜನ ಕಾಂಗ್ರೆಸ್‌ನವರನ್ನು ತಿರಸ್ಕಾರ ಮಾಡುತ್ತಿರುವುದರಿಂದ ಅವರು ಹತಾಶೆಗೊಳಗಾಗಿ ಅವರು ಈ ಆರೋಪ ಮಾಡುತ್ತಿದ್ದಾರೆ. ಸೋತ ನಂತರ ಹೇಳಲು ನೆಪ ಬೇಕಲ್ವಾ? ಅದಕ್ಕಾಗಿ ಈ ಆರೋಪ ಮಾಡುತ್ತಿದ್ದಾರೆ. ನಾವು ಮುಳುಗುತ್ತಿದ್ದೇವೆ, ಹೇಗಾದರೂ ಮಾಡಿ ನಮ್ಮನ್ನು ರಕ್ಷಿಸಿ ಎನ್ನುವ ರೀತಿ ಕನಿಕರ ಹುಟ್ಟಿಸಲು ಯತ್ನಿಸುತ್ತಿದ್ದಾರೆ ಎಂದರು. ಬಿಜೆಪಿಯದೇನಿದ್ದರೂ ಏಕಾಂಗಿ ಹೋರಾಟ. ದೇಶದಲ್ಲೇ ಆಗಲಿ, ರಾಜ್ಯದಲ್ಲೇ ಆಗಲಿ ಬಿಜೆಪಿಗೆ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವ ಅಗತ್ಯವಿಲ್ಲ ಎಂದು ತಿಳಿಸಿದರು.

ಬಿಜೆಪಿ 20ರಿಂದ 25 ಸಾವಿರ ಮತಗಳ ಅಂತರದಿಂದ ಜಯ ಸಾಧಿಸುವುದು ನಿಶ್ಚಿತ

ಹಿಂದುಳಿದ ವರ್ಗಗಳ ಪರವಾಗಿ ಯಾರು ಏನು ಮಾಡಿದ್ದಾರೆ ಎಂಬ ಚರ್ಚೆಯ ಅಗತ್ಯವಿಲ್ಲ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಈ ವಿಚಾರವಾಗಿ ಪ್ರಧಾನಿ ಮೋದಿ (Narendra Modi) ವಿರುದ್ಧ ಮಾತನಾಡುತ್ತಾರೆ. ಅವರು ಮೋದಿ ಕ್ಷಮೆ ಕೋರಬೇಕು. ಯಾಕೆಂದರೆ 47 ಮಂದಿ ಹಿಂದುಳಿದವರು, ದಲಿತರಿಗೆ ಮೋದಿ ಸಚಿವ ಸಂಪುಟದಲ್ಲಿ ಸ್ಥಾನ ನೀಡಿದ್ದಾರೆ. ಇದಕ್ಕಾಗಿ ಮೋದಿ ಅವರಿಗೆ ಸಿದ್ದರಾಮಯ್ಯ ಅಭಿನಂದಿಸಬೇಕು ಎಂದರು.

ಎರಡೂ ಕ್ಷೇತ್ರದಲ್ಲೂ ಗೆಲುವು-ಸಿಂದಗಿ ಹಾಗೂ ಹಾನಗಲ್‌ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಜನ ಬಿಜೆಪಿ ಜತೆಗಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯಾವುದೇ ಕ್ಷಣದಲ್ಲಾದರೂ ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಉದಯ ಕದಲೂರು ಓಪನ್ ಹೇಳಿಕೆ
ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ