ಸಿದ್ದರಾಮಯ್ಯ ಗೆ ಬೆಂಬಲ ನೀಡದ ಮಾಜಿ ಶಾಸಕ ವಾಸುಗೆ ಕಾಂಗ್ರೆಸ್‌ನಿಂದ ಗೇಟ್ ಪಾಸ್‌?

Published : Jul 18, 2023, 09:02 AM IST
ಸಿದ್ದರಾಮಯ್ಯ ಗೆ ಬೆಂಬಲ ನೀಡದ ಮಾಜಿ ಶಾಸಕ ವಾಸುಗೆ ಕಾಂಗ್ರೆಸ್‌ನಿಂದ ಗೇಟ್ ಪಾಸ್‌?

ಸಾರಾಂಶ

ಮೈಸೂರು ಕಾಂಗ್ರೆಸ್‌ನಲ್ಲಿ ಹೆಚ್ಚಾಯ್ತು ಅಂತರಿಕ ಜಗಳ. ವಾಸು ವಿರುದ್ಧ ತಮ್ಮ ಬೆಂಬಲಿಗರನ್ನು ಚೂ ಬಿಟ್ಟ ಬಿಟ್ಟರಾ ಸಿಎಂ ಸಿದ್ದರಾಮಯ್ಯ. ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ಗೆ ಬೆಂಬಲ ನೀಡದ ಮಾಜಿ ಶಾಸಕ ವಾಸುಗೆ ಗೇಟ್ ಪಾಸ್‌? ವಾಸು ಅವರನ್ನ ಪಕ್ಷದಿಂದ ವಜಾ ಮಾಡುವಂತೆ ಸಿದ್ದರಾಮಯ್ಯ ಬೆಂಬಲಿಗನಿಂದ ಕಾಂಗ್ರೆಸ್ ಜಿಲ್ಲಾಧ್ಯಕ್ಷರಿಗೆ ಪತ್ರ.

ಮೈಸೂರು (ಜು.18) : ಮೈಸೂರು ಕಾಂಗ್ರೆಸ್‌ನಲ್ಲಿ ಹೆಚ್ಚಾಯ್ತು ಅಂತರಿಕ ಜಗಳ. ವಾಸು ವಿರುದ್ಧ ತಮ್ಮ ಬೆಂಬಲಿಗರನ್ನು ಚೂ ಬಿಟ್ಟ ಬಿಟ್ಟರಾ ಸಿಎಂ ಸಿದ್ದರಾಮಯ್ಯ. ವಿಧಾನಸಭಾ ಚುನಾವಣೆಯಲ್ಲಿ
ಸಿದ್ದರಾಮಯ್ಯ ಗೆ ಬೆಂಬಲ ನೀಡದ ಮಾಜಿ ಶಾಸಕ ವಾಸುಗೆ ಗೇಟ್ ಪಾಸ್‌? ವಾಸು ಅವರನ್ನ ಪಕ್ಷದಿಂದ ವಜಾ ಮಾಡುವಂತೆ ಸಿದ್ದರಾಮಯ್ಯ ಬೆಂಬಲಿಗನಿಂದ ಕಾಂಗ್ರೆಸ್ ಜಿಲ್ಲಾಧ್ಯಕ್ಷರಿಗೆ ಪತ್ರ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಕೆಲಸ ಮಾಡಿದ್ದಾರೆಂಬ ಆರೋಪ ಹಿನ್ನೆಲೆ ಮಾಜಿ ಶಾಸಕ ಪಿ ವಾಸು ಅವರನ್ನು ಪಕ್ಷದಿಂದ ಉಚ್ಛಾಟಿಸುವಂತೆ ಒತ್ತಾಯಿಸಿ ಮಾಜಿ ನಗರಸಭೆ ಸದಸ್ಯ, ಆರ್.ಸುನಂದಕುಮಾರ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್.ಮೂರ್ತಿಗೆ ಪತ್ರ ಬರೆದಿದ್ದಾರೆ.

ನನಗೆ ಟಿಕೆಟ್ ತಪ್ಪಿಸಿದ್ದೇ ಸಿದ್ದರಾಮಯ್ಯ: ಮಾಜಿ ಶಾಸಕ ವಾಸು ಕಿಡಿ

ಮುಖ್ಯಮಂತ್ರಿ ಸಿದ್ದರಾಮಯ್ಯರ ಬೆಂಬಲಿಗರಾಗಿರುವ ಸುನಂದಕುಮಾರ್. ವಾಸು ಪಕ್ಷ ವಿರೋಧಿ ಕೆಲಸ ಮಾಡಿದ್ದಾರೆ. ಕಾಂಗ್ರೆಸ್‌ನಲ್ಲಿ ಇದ್ದುಕೊಂಡು ಬಿಜೆಪಿ ಪರವಾಗಿ ಮತಯಾಚನೆ ಮಾಡಿದ್ದಾರೆ. ಬಿಜೆಪಿಯಲ್ಲಿ ತಮ್ಮ ಮಗ ಸ್ಪರ್ಧಿಸಿರುವ ಕಾರಣ ಅವರ ಪರ ವಾಸು ಕೆಲಸ ಮಾಡಿದ್ದಾರೆ. 

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮರಾಜ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಕೆಲಸ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಚಾರದಲ್ಲಿ ತೊಡಗಿದ್ದಲ್ಲದೆ ಕುರುಬರು ಹಾಗೂ ದಲಿತರ ಬಗ್ಗೆ ಅವಹೇಳನಕಾರಿಯಾಗಿ ಮಾತಾಡುತ್ತಾರೆ. ತಮ್ಮ ಬೆಂಬಲಿಗರಿಗೆ ಹಣ ಕೊಟ್ಟು ಬಿಜೆಪಿ ಪರ ಕೆಲಸ ಮಾಡಿಸಿದ್ದಾರೆ. ಹೀಗಾಗಿ ಪಕ್ಷದಿಂದ ಉಚ್ಛಾಟನೆ ಮಾಡುವಂತೆ ಪತ್ರದಲ್ಲಿ ತಿಳಿಸಿರು ಸಿದ್ದರಾಮಯ್ಯ ಬೆಂಬಲಿಗ ಆರ್‌ ಸುನಂದಕುಮಾರ್. 

‘ಬಿಜೆಪಿ ಪ್ರಾಯೋಜಕತ್ವದಲ್ಲೇ ಸಹಕಾರಿ ಬ್ಯಾಂಕ್‌ನಲ್ಲಿ ಅವ್ಯವಹಾರ ನಡೆದಿದ್ದಾ?’

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಉ.ಕರ್ನಾಟಕ ಬಗ್ಗೆ ರಾಜ್ಯ ಸರ್ಕಾರ ದಿವ್ಯ ನಿರ್ಲಕ್ಷ್ಯ: ವಿಜಯೇಂದ್ರ
ಆರ್‌ಟಿಒ ಕಚೇರಿಗಳಲ್ಲಿ ಬ್ರೋಕರ್‌ ಹಾವಳಿ ತಡೆಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ