ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಕೆಲಸ ಮಾಡಲ್ಲ: ಬಿ.ಶ್ರೀರಾಮುಲು ಲೇವಡಿ

By Kannadaprabha NewsFirst Published Mar 16, 2024, 11:12 AM IST
Highlights

ಸುಳ್ಳು ಗ್ಯಾರಂಟಿಗಳ ಮೂಲಕ ಕರ್ನಾಟಕ, ತೆಲಂಗಾಣದಲ್ಲಿ ಅಧಿಕಾರ ಹಿಡಿದ ಕಾಂಗ್ರೆಸ್‌ ಪಕ್ಷದ ಗಿಮಿಕ್ ಈ ಲೋಕಸಭಾ ಚುನಾವಣೆಯಲ್ಲಿ ಕೆಲಸ ಮಾಡುವುದಿಲ್ಲ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಲೇವಡಿ ಮಾಡಿದರು. 

ಹೊಸಪೇಟೆ (ಮಾ.16): ಸುಳ್ಳು ಗ್ಯಾರಂಟಿಗಳ ಮೂಲಕ ಕರ್ನಾಟಕ, ತೆಲಂಗಾಣದಲ್ಲಿ ಅಧಿಕಾರ ಹಿಡಿದ ಕಾಂಗ್ರೆಸ್‌ ಪಕ್ಷದ ಗಿಮಿಕ್ ಈ ಲೋಕಸಭಾ ಚುನಾವಣೆಯಲ್ಲಿ ಕೆಲಸ ಮಾಡುವುದಿಲ್ಲ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಲೇವಡಿ ಮಾಡಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶಕ್ಕೆ ಸ್ವಾತಂತ್ರ್ಯ ಬಂದ ಬಳಿಕ ಸುಮಾರು 50-60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷಕ್ಕೆ ಇದೀಗ ಜ್ಞಾನೋದಯವಾಗಿದೆ. ರೈತರು, ಬಡವರು ಹಾಗೂ ಮಹಿಳೆಯರ ನೆನಪಾಗಿದೆ. ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವ ಮೂಲಕ ಗಿಮಿಕ್ ಮಾಡುತ್ತಿದ್ದಾರೆ. 

ಈ ಚುನಾವಣೆಯಲ್ಲಿ ಕಾಂಗ್ರೆಸ್ ಗಿಮಿಕ್ ನಡೆಯಲ್ಲ. ದೇಶದ ಜನರು ಕಾಂಗ್ರೆಸ್ಸನ್ನು ಮನೆಗೆ ಕಳಿಸುವುದು ಗ್ಯಾರಂಟಿ ಎಂದರು. ಪ್ರಧಾನಿ ನರೇಂದ್ರ ಮೋದಿ 14ನೇ, 15ನೇ ಹಣಕಾಸು, ಗ್ರಾಪಂಗಳಿಗೆ ಶಕ್ತಿ ತುಂಬಿದ್ದಾರೆ. ದೇಶದಲ್ಲಿ ಬಡವರು, ರೈತರು ಯಾವ ರೀತಿಯಾಗಿ ಬದುಕುತ್ತಿದ್ದಾರೆ ಎಂಬುದು ಗೊತ್ತಿರಲಿಲ್ಲ. 60 ವರ್ಷದ ಬಳಿಕ ಜನರನ್ನು ಕಾಂಗ್ರೆಸ್ ನೆನಪಿಸಿಕೊಳ್ಳುತ್ತಿದೆ. ಇದಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಗ್ಯಾರಂಟಿ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದೆ. ಬಿಜೆಪಿ ಸುನಾಮಿ ಅಲೆಯಲ್ಲಿ ಗ್ಯಾರಂಟಿಗಳು ಕೊಚ್ಚಿ ಹೋಗಲಿವೆ ಎಂದು ವ್ಯಂಗ್ಯವಾಡಿದರು.

ಜೆಡಿಎಸ್‌ ಈಗ ಇದೆಯೇ? ಇದ್ದರೆ ಎಲ್ಲಿದೆ?: ಡಿಸಿಎಂ ಡಿಕೆಶಿ ವ್ಯಂಗ್ಯ

ಜಮ್ಮು-ಕಾಶ್ಮೀರದಲ್ಲಿ 370 ಕಲಂ ತೆಗೆದು ಹಾಕಿ ಮೋದಿ ಇತಿಹಾಸ ನಿರ್ಮಿಸಿದ್ದಾರೆ. 400ಕ್ಕೂ ಅಧಿಕ ಸ್ಥಾನಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ. ರಾಜ್ಯದಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಜಿಲ್ಲಾಧ್ಯಕ್ಷ ಚನ್ನಬಸವನಗೌಡ, ಪ್ರಧಾನ ಕಾರ್ಯದರ್ಶಿ ರಾಘವೇಂದ್ರ, ಉಪಾಧ್ಯಕ್ಷ ಸುಭಾಷ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಕೊಟ್ರೇಶ್ ಕಿಚಿಡಿ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷ ಅರುಂಡಿ ಸುವರ್ಣ, ಜಿಲ್ಲಾ ಮಾಧ್ಯಮ ಸಂಚಾಲಕ ಬಸವರಾಜ ಕರ್ಕಿಹಳ್ಳಿ, ಮಂಡಲ ಅಧ್ಯಕ್ಷ ಶಂಕರ್ ಮೇಟಿ, ವಿನಾಯಕ ಸ್ವಾಮಿ, ಅನುರಾಧ ಇದ್ದರು.

click me!