ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಮತಾಂತರ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆ ಸೇರಿದಂತೆ ಹಿಂದೂ ಧರ್ಮದ ವಿರುದ್ಧ ಕಾರ್ಯಾಚರಣೆ ಆರಂಭಿಸಲಾಗಿದೆ. ಓಟ್ ಬ್ಯಾಂಕ್ ರಾಜಕಾರಣದ ದೃಷ್ಟಿಯಿಂದ ಕಾಂಗ್ರೆಸ್ ಸರ್ಕಾರ ಹಿಂದೂ ಧರ್ಮವನ್ನು ಕಡೆಗಣಿಸುತ್ತಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಆರೋಪಿಸಿದರು.
ತೀರ್ಥಹಳ್ಳಿ (ಜೂ.18): ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಮತಾಂತರ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆ ಸೇರಿದಂತೆ ಹಿಂದೂ ಧರ್ಮದ ವಿರುದ್ಧ ಕಾರ್ಯಾಚರಣೆ ಆರಂಭಿಸಲಾಗಿದೆ. ಓಟ್ ಬ್ಯಾಂಕ್ ರಾಜಕಾರಣದ ದೃಷ್ಟಿಯಿಂದ ಕಾಂಗ್ರೆಸ್ ಸರ್ಕಾರ ಹಿಂದೂ ಧರ್ಮವನ್ನು ಕಡೆಗಣಿಸುತ್ತಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಆರೋಪಿಸಿದರು.
ಮಂಡಲ ಬಿಜೆಪಿ ವತಿಯಿಂದ ಜೂ.19ರಂದು ಬೆಳಗ್ಗೆ 11 ಗಂಟೆಗೆ ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿರುವ ಬೃಹತ್ ಮೆರವಣಿಗೆ ಮತ್ತು ಪ್ರತಿಭಟನೆ ಹಿನ್ನೆಲೆಯಲ್ಲಿ ಶನಿವಾರ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ವಿಧಾನಸಭಾ ಚುನಾವಣೆಯಲ್ಲಿ ಮತದಾರರಿಗೆ ನೀಡಿರುವ ಆಶ್ವಾಸನೆಯಂತೆ ಎಲ್ಲಾ ಐದು ಗ್ಯಾರಂಟಿಗಳನ್ನು ಯಥಾವತ್ತಾಗಿ ಜಾರಿ ಮಾಡುವಂತೆಯೂ ಆಗ್ರಹಿಸಿದರು.
undefined
ಬಿಜೆಪಿ ಮುಖಂಡರಿಂದಲೇ ಪಕ್ಷಕ್ಕೆ ಸೋಲು: ಸಂಸದ ಮುನಿಸ್ವಾಮಿ ಬೇಸರ
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ತಿಂಗಳು ಕಳೆದಿದ್ದರೂ ಚುನಾವಣೆಯಲ್ಲಿ ಮತದಾರರಿಗೆ ನೀಡಿರುವ ಭರವಸೆಯನ್ನು ಈಡೇರಿಸುವಲ್ಲಿ ವಿಫಲವಾಗಿದೆ. ಅನ್ನಭಾಗ್ಯ ಯೋಜನೆಗೆ ಕೊರೋನಾ ನಂತರದಲ್ಲೂ 5 ಕೆಜಿ ಅಕ್ಕಿ ಕೊಡುತ್ತಿರುವ ಕೇಂದ್ರ ಸರ್ಕಾರದ ಕಡೆ ಕೈ ತೋರಿಸುತ್ತಿರುವುದು ಸರಿಯಲ್ಲ. ರಾಜ್ಯ ಸರ್ಕಾರಕ್ಕೆ ಅಕ್ಕಿ ಕೊಡಲು ಸಾಧ್ಯವಾಗದಿದ್ದರೆ ಅಕ್ಕಿಯ ಮೊಬಲಗನ್ನು ಫಲಾನುಭವಿಗಳ ಖಾತೆಗೆ ಹಾಕುವುದು ಸೂಕ್ತ. ‘ಶಕ್ತಿ’ ಯೋಜನೆಯಲ್ಲಿ ಶೇ.50ರಷ್ಟುಮಲೆನಾಡು ಭಾಗದ ಮಹಿಳೆಯರು ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ.
ರಾಜ್ಯ ರಸ್ತೆ ಸಾರಿಗೆ ಬಸ್ಸುಗಳ ಸೌಲಭ್ಯ ಇಲ್ಲದ ಕಡೆಗಳಲ್ಲಿ ಮಹಿಳೆಯರಿಗೆ ಖಾಸಗಿ ಬಸ್ಸುಗಳಲ್ಲಿ ಸಂಚರಿಸಲು ಸರ್ಕಾರ ಉಚಿತ ಪಾಸ್ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದೂ ಆಗ್ರಹಿಸಿದರು. ವಿಧಾನಸಭಾಧ್ಯಕ್ಷ ಸ್ಥಾನದ ಕುರಿತಂತೆ ನೀವು ಆಕಾಂಕ್ಷಿಗಳೇ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಾಸಕರು, ಹೈಕಮಾಂಡ್ ಅವಕಾಶ ನೀಡಿದರೆ ಖಂಡಿತಾ ನಿರ್ವಹಿಸುತ್ತೇನೆ. ನಾನಾಗಿ ಕೇಳುವುದಿಲ್ಲಾ. ಇಷ್ಟಕ್ಕೂ ನಾನೇನೂ ಬೈರಾಗಿ ಅಲ್ವಲ್ಲಾ ಎಂದೂ ಜ್ಞಾನೇಂದ್ರ ಹೇಳಿದರು.
ಮರಳು ಮಾಫಿಯಾಗೆ ಪೇದೆ ಬಲಿ: ಕರ್ತವ್ಯ ನಿರ್ಲಕ್ಷ ಆರೋಪದಡಿ ಮೂವರು ಪೊಲೀಸರ ಅಮಾನತ್ತು
ಕಳೆದ ಮಾರ್ಚಿ ತಿಂಗಳಿನಿಂದ ಪೂರ್ವಾನ್ವಯ ಆಗುವಂತೆ ಅವೈಜ್ಞಾನಿಕವಾದ ವಿದ್ಯುತ್ ಬಿಲ್ ಬಂದಿದೆ. ಉದ್ದಿಮೆಗಳು ಹಾಗೂ ವಾಣಿಜ್ಯ ಬಳಕೆದಾರರ ಮೇಲೆ ಇದು ಪರಿಣಾಮ ಬೀರಲಿದೆ. ಹಿಂದಿನ ಸರ್ಕಾರದಲ್ಲೇ ದರ ಏರಿಕೆ ಮಾಡಲಾಗಿತ್ತು ಎಂಬ ಆರೋಪ ಸತ್ಯಕ್ಕೆ ದೂರವಾಗಿದೆ. ವಿದ್ಯುತ್ ಇಲಾಖೆಯ ಕೆಇಆರ್‌ಸಿ ತೀರ್ಮಾನದಂತೆ ದರ ಏರಿಕೆ ಆಗಿದ್ದರೂ ಅದನ್ನು ತಡೆಹಿಡಿಯುವ ಅಧಿಕಾರ ಸರ್ಕಾರಕ್ಕಿದೆ. ಆದ್ದರಿಂದ ಈ ಆದೇಶವನ್ನು ಕೂಡಲೇ ಹಿಂಪಡೆಯಬೇಕು
- ಆರಗ ಜ್ಞಾನೇಂದ್ರ, ಶಾಸಕ, ತೀರ್ಥಹಳ್ಳಿ ಕ್ಷೇತ್ರ