ಜನರ ಆಸೆಗಳನ್ನು ಈಡೇರಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ವಿರೋಧಿ ಅಲೆ ಹೆಚ್ಚಾಗಿದೆ ಎಂದ ಅವರು, ಈ ಬಾರಿ ರಾಜ್ಯದ 28 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳೇ ಗೆಲ್ಲುವ ವಾತಾವರಣ ಸೃಷ್ಟಿಯಾಗಿದ್ದು, ಶುಕ್ರವಾರ ಮತದಾನ ನಡೆದ ಕ್ಷೇತ್ರಗಳಲ್ಲಿ ಬಿಜೆಪಿ 14 ಕ್ಷೇತ್ರಗಳಲ್ಲಿಯೂ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಮುದ್ದೇಬಿಹಾಳ(ಏ.28): ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದ್ದು, ಭ್ರಷ್ಟಾಚಾರ ತಾಂಡವವಾಡುತ್ತಿದೆ. ಕಾಂಗ್ರೆಸ್ ಸರ್ಕಾರ ದರ್ಬಾರ್ ನಡೆಸಿದ್ದು, ಜನರ ಲೂಟಿ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗಂಭೀರ ಆರೋಪ ಮಾಡಿದರು.
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ಶನಿವಾರ ರೋಡ್ ಶೋ ನಡೆಸಿ ಮತಯಾಚನೆ ಮಾಡಿದರು. ಬಳಿಕ, ಬನಶಂಕರಿ ದೇವಸ್ಥಾನದ ಆವರಣದಲ್ಲಿ ನಡೆದ ತಾಲೂಕು ಬಿಜೆಪಿ ಮಂಡಲದಿಂದ ಹಮ್ಮಿಕೊಂಡಿದ್ದ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರ ಪರವಾಗಿ ಪ್ರರ ಪ್ರಚಾರ ನಡೆಸಿ ಅವರು ಮಾತನಾಡಿದರು.
ವಿಜಯಪುರದಲ್ಲಿ ಬಿರುಸಿನ ಪ್ರಚಾರ, ನನಗೆ ಮಗ ಅಲ್ಲ ಜನ ಮುಖ್ಯ ಎಂದ ಯಡಿಯೂರಪ್ಪ
ಕಿಸಾನ್ ಸಮ್ಮಾನ್ ಯೋಜನೆ ಅಡಿ ನಾನು ₹4 ಸಾವಿರ ಕೊಡುತ್ತಿದೆ. ನೀವ್ಯಾಕೆ (ಕಾಂಗ್ರೆಸ್) ಬಂದ್ ಮಾಡಿದಿರಿ? ಭಾಗ್ಯ ಲಕ್ಷ್ಮಿ ಯೋಜನೆ ಯಾಕೆ ನಿಲ್ಲಿಸಿದಿರಿ. ಸುವರ್ಣ ಭೂಮಿ ಯೋಜನೆ ನಿಲ್ಲಿಸಿದಿರಿ ಎಂದು ಆಕ್ರೋಶ ಹೊರಹಾಕಿದರು.
ಜನರ ಆಸೆಗಳನ್ನು ಈಡೇರಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ವಿರೋಧಿ ಅಲೆ ಹೆಚ್ಚಾಗಿದೆ ಎಂದ ಅವರು, ಈ ಬಾರಿ ರಾಜ್ಯದ 28 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳೇ ಗೆಲ್ಲುವ ವಾತಾವರಣ ಸೃಷ್ಟಿಯಾಗಿದ್ದು, ಶುಕ್ರವಾರ ಮತದಾನ ನಡೆದ ಕ್ಷೇತ್ರಗಳಲ್ಲಿ ಬಿಜೆಪಿ 14 ಕ್ಷೇತ್ರಗಳಲ್ಲಿಯೂ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಹಿಂದೆ ಹಣ ಬಲ, ಜಾತಿ ಬಲ, ತೋಳ್ಬಲದಿಂದ ಚುನಾವಣೆ ಗೆಲ್ಲುತ್ತೇವೆ ಎಂದು ಕಾಂಗ್ರೆಸ್‌ನವರು ನಂಬಿದ್ದರು. ಕಾಂಗ್ರೆಸ್‌ಗೆ ಪ್ರಚಾರ ಮಾತ್ರ ಬೇಕಿದೆ. ಈ ಸರ್ಕಾರಕ್ಕೆ ಜನರು ಕೊಟ್ಟ ತೆರಿಗೆ ಹಣ ಏನಾಯಿತು? ವಿದ್ಯುತ್ ದರ ಏರಿಕೆಯಾಗಿದೆ. ಕಿಸಾನ್ ಸಮ್ಮಾನ ಯೋಜನೆ ಹಣ ನೀಡುತ್ತಿಲ್ಲ ಎಲ್ಲಾ ಯೋಜನೆಗಳು ನಿಂತು ಹೋಗಿವೆ. ಇದನ್ನು, ರಾಜ್ಯದ ಜನರು ಅರ್ಥೈಸಿಕೊಳ್ಳಬೇಕಿದೆ ಎಂದರು.
ರಾಜ್ಯದಲ್ಲಿ ಗ್ಯಾರಂಟಿ ಬಂದ್ ಆಗಲ್ಲ: ಸಿಎಂ ಸಿದ್ದರಾಮಯ್ಯ
ನರೇಂದ್ರ ಮೋದಿಯವರು ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಬೇಕು ಎಂಬ ಉದ್ದೇಶ ಹೊಂದಿದ್ದಾರೆ. ಅದಕ್ಕಾಗಿ ಕಳೆದ 10 ವರ್ಷಗಳಿಂದ ಪ್ರಧಾನಿಯಾಗಿ ಒಂದು ದಿನವೂ ವಿಶ್ರಾಂತಿ ಪಡೆಯದೇ ಪಕ್ಷ ಹಾಗೂ ದೇಶವನ್ನು ಕಟ್ಟುವ ಕೆಲಸ ಮಾಡುತ್ತಿದ್ದಾರೆ. ಅದಕ್ಕಾಗಿ ಮೋದಿಯವರ ಕೈ ಬಲಪಡಿಸಬೇಕಿದ್ದು, ಇದೊಂದು ಬಾರಿ ವಿಜಯಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರಿಗೆ ಮತ ನೀಡುವಂತೆ ಮನವಿ ಮಾಡಿದರು.
ನರೇಂದ್ರ ಮೋದಿಯವರು ಅಯೋಧ್ಯೆಯಲ್ಲಿ ರಾಮನ ಪ್ರತಿಷ್ಠಾಪನೆಗೆ ಕಾಂಗ್ರೆಸ್ ನಾಯಕರನ್ನು ಆಹ್ವಾನಿಸಿದ್ದರೂ ಯಾರೂ ಬರಲಿಲ್ಲ. ಅವರಿಗೆ ರಾಮನ ಬಗ್ಗೆ ಭಕ್ತಿಯಿಲ್ಲ. ಅದು ಅವರಿಗೆ ಇಷ್ಟವೂ ಇರಲಿಲ್ಲ. ಹಾಗಾಗಿ ಈ ಕಾಂಗ್ರೆಸ್‌ನವರಿಗೆ ತಕ್ಕ ಪಾಠ ಕಲಿಸಬೇಕು. ವಿಜಯಪುರ ಲೋಕಸಭಾ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರನ್ನು ಈ ಬಾರಿ 3 ಲಕ್ಷಕ್ಕೂ ಆಧಿಕ ಮತಗಳಿಂದ ಗೆಲ್ಲುವಂತೆ ಆಶೀರ್ವಾದ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.